NEWSಕೃಷಿನಮ್ಮರಾಜ್ಯ

ರೈತ ಉತ್ಪನ್ನಗಳ ಅಂತಾರಾಜ್ಯ ಸಾಗಾಟಕ್ಕೆ ಮುಕ್ತ ರಹದಾರಿ

ಗುಂಡ್ಲುಪೇಟೆ ಎಪಿಎಂಸಿಗೆ ಭೇಟಿ ನೀಡಿದ ಸಚಿವ ಸೋಮಶೇಖರ್ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಗುಂಡ್ಲುಪೇಟೆ: ಕೇರಳ ಹಾಗೂ ತಮಿಳುನಾಡಿಗೆ ಉತ್ಪನ್ನಗಳ ಸಾಗಾಟ ವೇಳೆ ತೊಂದರೆಯಾಗದಂತೆ ಈಗಾಗಲೇ ಸೂಚಿಸಲಾಗಿದೆ. ಒಂದು ವೇಳೆ ಸಮಸ್ಯೆಯಾದರೆ ತಕ್ಷಣವೇ ಗಮನಕ್ಕೆ ತನ್ನಿ ಎಂದು ರೈತರು ಹಾಗೂ ವರ್ತಕರಿಗೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್  ತಿಳಿಸಿದರು.

ಬುಧವಾರ ಮುಂಜಾನೆ ಅಧಿಕಾರಿಗಳ ಜೊತೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.

ರೈತರ ಬೆಳೆಗೆ ಉತ್ತಮ ದರ ಸಿಗುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಬೇಕಾಬಿಟ್ಟಿ ದರಗಳ ಮಾರಾಟಕ್ಕೆ ಕಡಿವಾಣ ಬೀಳಬೇಕು. ರೈತರಿಗೆ ಒಳ್ಳೇ ದರ ಸಿಗಬೇಕು. ಆ ದರದ ಮೇಲೆ ಮಾರಾಟದ ದರದ ಮೇಲೂ ನಿಗಾ ವಹಿಸಬೇಕು ಎಂದರು.

ರೈತರಿಗೆ ನಷ್ಟವಾಗಿ ದಲ್ಲಾಳಿಗಳಿಗೆ ಮಾತ್ರ ಲಾಭವಾಗುವಂತೆ ಮಾಡುವುದು ಸರಿಯಲ್ಲ. ಇಂಥದ್ದಕ್ಕೆ ಎಪಿಎಂಸಿಯಿಂದ ಕಡಿವಾಣ ಬೀಳಬೇಕು. ಈ ಬಗ್ಗೆ ಕೂಡಲೇ ಉಪ ವಿಭಾಗಾಧಿಕಾರಿಗಳು ಮತ್ತು ತಹಸೀಲ್ದಾರ್ ಮೂಲಕ ಆದೇಶ ಹೊರಡಿಸಲಾಗುವುದು. ಹಾಗೇ ಎಪಿಎಂಸಿಗೆ ಕೋಲ್ಡ್ ಸ್ಟೋರೇಜ್ ಅನ್ನು ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಮಾರುಕಟ್ಟೆಯಲ್ಲಿ ತರಕಾರಿ ಉತ್ಪನ್ನಗಳ ಮಾರಾಟ ಸ್ಥಿತಿಗತಿಗಳ ಬಗ್ಗೆ ಪ್ರತಿ ಮಳಿಗೆಗೆ ಭೇಟಿ ಕೊಡುವುದರ ಮೂಲಕ ಕೊರೊನಾ ಬಾಧಿಸುವುದಕ್ಕೆ ಮುಂಚೆ ಹಾಗೂ ಹಾಲಿ ವಸ್ತುಸ್ಥಿತಿ ಹೇಗಿದೆ ಎಂದು ವಿಚಾರಿಸಿಕೊಂಡರು.

2 Comments

  • ರೈತರು ಮತ್ತು ವರ್ತಕರ ಬಗೆಗಿನ ನಿಮ್ಮ ಕಾಳಜಿ ಮೆಚ್ಚುವಂತದ್ದು ನಿಮ್ಮ ಕಾಳಜಿ ಸಫಲವಾದರೆ ಅದು ಸಾರ್ಥಕ ವಾದಂತೆ

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ