ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ಕೊಡಿ: ಇಂಧನ ಸಚಿವ ಜಾರ್ಜ್‌ಗೆ ರೈತ ಸಂಘ ಮನವಿ

ಮೈಸೂರು: ರೈತರ ಜಮೀನಿನ ಮೇಲೆ 66/11 ಕೆವಿ ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ಹಾದು ಹೋಗಿದ್ದು, ಕೆಳಗೆ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಭೂ ಪರಿಹಾರ ಕೊಡಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾ ಘಟಕದ ವತಿಯಿಂದ ಇಂಧನ ಸಚಿವರಿಗೆ ಒತ್ತಾಯಿಸಲಾಯಿತು.
ಇಂದು ಮೈಸೂರು ಜಿಲ್ಲಾ ಘಟಕ ನಿಯೋಗ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದು, ಹುಣಸೂರು ಉಪ ವಿಭಾಗದ ಗೆಜ್ಜೆಯನವಡ್ಡರಗುಡಿ ಗ್ರಾಮದ ಮಿನಿ ಸ್ಟೇಷನ್‌ನಿಂದ ಹಾದು ಹೋಗುವ ಲೈನುಗಳ ಊರುಗಳು ಗೆಜ್ಜೆಯನ ವಡ್ಡರಗುಡಿ, ಧರ್ಮಾಪುರ, ಕರಿಮುದ್ದನಹಳ್ಳಿ, ಆಸ್ಪತ್ರೆ ಕಾವಲ್, ಬಸ್ತಿ ಮಾರನಹಳ್ಳೀ, ಹಳ್ಳದ ಕೊಪ್ಪಲು, ಉದ್ದೂರು ಕಾವಲ್, ತರಿಕಲ್, ತರಿಕಲ್ ಕಾವಲ್ ಮುಂತಾದ ಗ್ರಾಮಗಳ ರೈತರ ಜಮೀನುಗಳ ಮೇಲೆ ವಿದ್ಯುತ್ ಲೈನ್ ಹಾದು ಹೋಗಿರುವ ಮತ್ತು ಟವರ್ ನಿರ್ಮಾಣ ಮಾಡಿರುವ ಜಾಗಕ್ಕೆ ಭೂಮಿ ಪರಿಹಾರ ನೀಡುವ ಬಗ್ಗೆ ಯಾವುದೇ ಸ್ಪಷ್ಟವಾದ ಕ್ರಮ ಜಾರಿಯಾಗಿಲ್ಲ ಎಂದು ಸಚಿವರ ಗಮನಕ್ಕೆ ತಂದರು.
ಇನ್ನು ಅಧಿಕಾರಿಗಳು ಈ ಸಂಬಂಧ ಕಾರ್ಯ ನಿರ್ವಹಿಸಲು ಸಭೆ ನಡೆಸಿದ್ದು, ಜಮೀನಿನ ರೈತರ ಗಮನಕ್ಕೂ ತರದೆ ಹಾಗೂ ಅನುಮತಿ ಪಡೆಯದೆ ಸುಳ್ಳು ವರದಿ ಸೃಷ್ಟಿಸಿ, ರೈತರ ಕಣ್ಣಿಗೆ ಮಣ್ಣು ಎರಚುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಹಕ್ಕಿನ ಆದೇಶದ ಪ್ರತಿಯಂತೆ ರೈತರು ಮತ್ತು ಭೂ ಮಾಲೀಕರನ್ನು ಕರೆದು ದರ ನಿರ್ಧಾರ ಮಾಡಿದ್ದೇವೆಂದು 05-03-2024 ರಂದು ಉಪವಿಭಾಗಾಧಿಕಾರಿಗಳು ಸುಳ್ಳು ಮಾಹಿತಿಯನ್ನು ನೀಡಿದ್ದಾರೆ.
ಪುನಃ ಮಾಹಿತಿ ಹಕ್ಕಿನಡಿಯಲ್ಲಿ ಯಾವ ರೈತರು, ಜಮೀನುಗಳ ಮಾಲೀಕರು ಸಭೆಯಲ್ಲಿ ಹಾಜರಿದ್ದರು ಎಂದು ಮಾಹಿತಿ ಹಕ್ಕಿನಡಿ ಕೋರಿದಾಗ ಯಾರು ಸಭೆಯಲ್ಲಿ ಹಾಜರಾತಿಗೆ ಸಮ್ಮತಿಸದೇ ನಿರಾಕರಿಸಿದ್ದಾರೆ ಎಂದು ಸುಳ್ಳು ಹೇಳಿರುತ್ತಾರೆ. ಇದು ರೈತರು ಸಭೆಗೆ ಗೈರು ಆಗಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡುತ್ತದೆ.
ಮತ್ತೆ ರೈತರ ಜಮೀನಿಗೆ ನ್ಯಾಯ ಸಮ್ಮತ ದರ ನಿರ್ಧಾರವಾಗಿರುವುದು ಕಂಡು ಬಂದಿಲ್ಲ. ಈ ಭಾಗದ ರೈತರ ಜಮೀನುಗಳ ಬೆಲೆ 1 ಕುಂಟೆಗೆ 2 ಲಕ್ಷ ರೂಪಾಯಿ ಮಾರಾಟವಾಗುತ್ತಿದೆ. ಇಂತಹ ಸಂದರ್ಭದಲ್ಲಿ ರೈತರು ಫಲವತ್ತಾದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದು ನ್ಯಾಯಸಮ್ಮತ ಬೆಲೆ ನಿಗದಿಮಾಡಿ ನಾಲ್ಕು ಪಟ್ಟು ಹೆಚ್ಚಿಗೆ ಕೊಡಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ವಿದ್ಯುತ್ ನಿಗಮದ ಅಧಿಕಾರಿಗಳು ರೈತರ ಅನುಮತಿ ಪಡೆಯದೇ, ಲೈನ್‌ಗಳನ್ನು ಚಾರ್ಜ್ ಮಾಡಿರುತ್ತಾರೆ ರೈತರು ಸಭೆಗೆ ಭಾಗವಹಿಸದೇ ಇರುವ ಬಗ್ಗೆ ಮಾಹಿತಿ ಹಕ್ಕಿನ ಪ್ರತಿ ಲಗತ್ತಿಸಿದೆ. ಕೇವಲ ವಿದ್ಯುತ್ ಪ್ರಸರಣಾ ನಿಗಮದ ಅಧಿಕಾರಿಗಳು ನಿರ್ಧಾರ ಮಾಡಿ ಭೂಮಿ ಮೌಲ್ಯವನ್ನು ನಿಗದಿ ಪಡಿಸಿರುವ ಬಗ್ಗೆ ಆದೇಶದ ಪ್ರತಿಯನ್ನೂ ಲಗತ್ತಿಸಿದೆ.
ಅದೇ ರೀತಿ ಮೈಸೂರು ತಾಲೂಕು ಕಡಕೋಳದಿಂದ ವಾಜಮಂಗಲಕ್ಕೆ ಹೋಗುವ 220 ಕೆವಿ ಈ ಯೋಜನೆಗೆ ಸಂಬಂಧಪಟ್ಟಂತೆ ಕೂಡನಹಳ್ಳಿ, ದೇವಲಾಪುರ, ಮಾರಶೆಟ್ಟಳ್ಳಿ, ಜೋರನಹಳ್ಳಿ, ವರುಣ, ವಾಜಮಂಗಲ ಹಳ್ಳಿಗಳ ರೈತರಿಗೂ ಸರಿಯಾದ ಪರಿಹಾರ ನೀಡದೆ ದಬ್ಬಾಳಿಕೆಯಿಂದ ಕೆಲಸ ಮಾಡಲು ಹೋಗಿದ್ದಾರೆ. ಹಳ್ಳಿಗಳಲ್ಲಿರುವ ರೈತರ ಜಮೀನುಗಳ ಅಕ್ಕ ಪಕ್ಕದಲ್ಲಿ ಲೇಔಟ್‌ಗಳು ಇದ್ದು ಒಂದು ಗುಂಟೆಗೆ ₹6 ಲಕ್ಷದಿಂದ 10 ಲಕ್ಷಗಳವರೆಗೆ ಬೆಲೆ ಆಗುತ್ತಿದೆ. ಇಲಾಖೆಯವರು ಕೇವಲ 50,000- 60,000 ರೂ. ಹೇಳುತ್ತಿದ್ದಾರೆ ಆದ್ದರಿಂದ ಒಂದು ಗುಂಟೆಗೆ ಕನಿಷ್ಠ 6 ಲಕ್ಷ ರೂ. ನಿಗದಿ ಮಾಡಬೇಕೆಂದು ಮನವಿ ಮಾಡಿದರು.
ಕೃಷಿ ಪಂಪ್ ಸೆಟ್ ಬಳಕೆ ರೈತರಿಗೆ ಆಧಾರ್ ನೋಂದಣಿ ಮಾಡಿ ಮೀಟರ್ ಅಳವಡಿಕೆ ಕೈ ಬಿಡಬೇಕು. ಅಕ್ರಮ ಸಕ್ರಮ ಯೋಜನೆ ಮುಂದುವರಿಸಿ ಕೃಷಿ ಪಂಪ್ ಸೆಟ್ ವಿದ್ಯುತ್ ಬಳಕೆ ರೈತರಿಗೆ 5000 ರೂ. ಕಟ್ಟಿಸಿಕೊಂಡು ಸಂಪರ್ಕ ಕಲ್ಪಿಸಿ ಕೊಡಬೇಕು. ಹೈ ಪವರ್ ವಿದ್ಯುತ್ ತಂತಿ ಹಾದು ಹೋಗಿರುವ ಜಮೀನುಗಳ ರೈತರಿಗೆ ಕೃಷಿ ಪಂಪ್ ಸೆಟ್ ವಿದ್ಯುತ್ ಬಳಕೆಗೆ ಸರ್ಕಾರದಿಂದಲೇ ಉಚಿತ ಸಂಪರ್ಕ ಕಲ್ಪಿಸಿ ಕೊಡಬೇಕು.
ರೈತರು ತಮ್ಮ ತೋಟ ಹಾಗೂ ಕೃಷಿ ಜಮೀನಿನಲ್ಲಿ ವಾಸದ ಮನೆ ನಿರ್ಮಾಣ ಮಾಡಿ ಕೊಂಡಿರುವ ರೈತರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಟ್ಟು ವಿದ್ಯಾರ್ಥಿಗಳಿಗೆ ಹಾಗೂ ವಯೋ ವೃದ್ಧರಿಗೆ ಬೆಳಕಿನ ವ್ಯವಸ್ಥೆಗೆ ಅನುಕೂಲ ಮಾಡಿಕೊಡಬೇಕು. ಮೇಲ್ಕಂಡ ಸಮಸ್ಯೆಗಳ ಬಗ್ಗೆ ಗಂಭೀರತೆಯಿಂದ ಅಗತ್ಯ ಕ್ರಮ ಕೈಗೊಂಡು ರೈತರಿಗೆ ಅನುಕೂಲ ಮಾಡಿ ಕೊಡಬೇಕೆಂದು ಜಿಲ್ಲಾ ಘಟಕದಿಂದ ಒತ್ತಾಯಿಸಿಲಾಯಿತು.
ಇಂದಿನ ನಿಯೋಗದಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್, ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ತಾಲೂಕು ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್, ಗೌರವಾಧ್ಯಕ್ಷ ಧನಗಹಳ್ಳಿ ಕೆಂಡಗಣಪ್ಪ, ಮುಖಂಡರಾದ ವರಕೊಡು ನಾಗೇಶ್, ವಾಜಮಂಗಲ ಮಹಾದೇವ, ಕೂಡನಹಳ್ಳಿ ಸೋಮಣ್ಣ, ದೊಡ್ಡ ಕಾಟೂರು ಮಾದೇವಸ್ವಾಮಿ, ಬನ್ನೂರು ಸೂರಿ, ಸಾತಗಳ್ಳಿ ಬಸವರಾಜು, ವಡ್ಡರಗುಡಿ ಮಾದೇವಸ್ವಾಮಿ, ಚಂದ್ರು, ಪುಟ್ಟಸ್ವಾಮಿ, ಶಿವಣ್ಣ, ಮಹೇಶ್, ಮಲ್ಲಣ್ಣ, ಸೇರಿದಂತೆ 40 ಕ್ಕೂ ಹೆಚ್ಚು ರೈತರು ಇದ್ದರು.
Related

You Might Also Like
ವಾಣಿಜ್ಯ ಗ್ಯಾಸ್ ಸಿಲಿಂಡರ್ ಬಳಕೆದಾರರಿಗೆ ಗುಡ್ ನ್ಯೂಸ್: ಬೆಲೆಯಲ್ಲಿ ಭಾರಿ ಇಳಿಕೆ
ನ್ಯೂಡೆಲ್ಲಿ: ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಭಾರಿ ಇಳಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ. 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್...
KSRTC: ಶೇ.31ರಷ್ಟು ತುಟ್ಟಿಭತ್ಯೆ 2022 ಜು.1ರ ಮೂಲ ವೇತನಕ್ಕೆ ವಿಲೀನಗೊಂಡ ಬಳಿಕ ನೌಕರರು 4% HRA ಕಳೆದುಕೊಳ್ಳುವರು..!
ಆದರೂ ಅಲ್ಪ ಮಟ್ಟಿಗೆ ಸಂಬಳದಲ್ಲಿ ಏರಿಕೆ ಕಾಣಬಹುದಾಗಿದೆ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ 01.07.2022 ರಲ್ಲಿದ್ದ ಶೇ.31 ರಷ್ಟು ತುಟ್ಟಿಭತ್ಯೆಯನ್ನು 1ನೇ ಆಗಸ್ಟ್...
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...