KKRTC: ₹6ಲಕ್ಷ ಮೌಲ್ಯದ ಆಭರಣಗಳಿದ್ದ ವ್ಯಾನಿಟಿ ಬ್ಯಾಗ್ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಚಾಲನಾ ಸಿಬ್ಬಂದಿ

ಬಳ್ಳಾರಿ: ಪ್ರಯಾಣಿಕರು ಬಸ್ನಲ್ಲಿ ಮರೆತು ಬಿಟ್ಟು ಹೋಗಿದ್ದ ಸುಮಾರು 6 ಲಕ್ಷ ರೂ. ಮೌಲ್ಯದ ಬಂಗಾರದ ಸರಗಳಿದ್ದ ವ್ಯಾನಿಟಿ ಬ್ಯಾಗನ್ನು ವಾರಸುದಾರರಿಗೆ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಳ್ಳಾರಿ ಮೂರನೇ ಘಟಕದ ಚಾಲನಾ ಸಿಬ್ಬಂದಿಗಳು.
ಗುರುವಾರ ಬೆಳಗ್ಗೆ 11.30ರ ಸುಮಾರಿಗೆ ಘಟಕದ (KA-34 F-1175) ವಾಹನವು 310 BA (ಹರಗಿನ ಡೋಣಿ) ಮಾರ್ಗ ಮುಗಿಸಿಕೊಂಡು ನಗರ ಬಸ್ ನಿಲ್ದಾಣದಲ್ಲಿ ಎಲ್ಲ ಪ್ರಯಾಣಿಕರನ್ನು ಇಳಿಸಿ ಡ್ಯೂಟಿ ಪೂರ್ಣಗೊಂಡಿದ್ದರಿಂದ ಘಟಕಕ್ಕೆ ಬಸ್ ತೆಗೆದುಕೊಂಡು ಹೋಗುತ್ತಿದ್ದಾಗ ಪ್ರಯಾಣಿಕರು ಬಸ್ಸಿನಲ್ಲಿ ಬಿಟ್ಟು ಹೋಗಿರುವ ವ್ಯಾನಿಟಿ ಬ್ಯಾಗ್ ಸಿಕ್ಕಿದೆ.
ಅದನ್ನು ತೆಗೆದುಕೊಂಡು ಏನಿದೆ ಎಂದು ನಿರ್ವಾಹಕ ಚಂದ್ರಶೇಖರ್ ಆಚಾರ್ಯ (4005) ಅವರು ಚಾಲಕ ದೇವಪ್ಪ (453) ಅವರೊಂದಿಗೆ ನೋಡಿದಾಗ ಪ್ರಯಾಣಿಕರು ಬಸ್ಸಿನಲ್ಲಿ ಮರೆತು ಬಿಟ್ಟು ಹೋಗಿದ್ದ ಆ ಬ್ಯಾಗ್ನಲ್ಲಿ ಚಿನ್ನದ ಸರ, ನೆಕ್ಲೆಸ್, ಕಿವಿಓಲೆಗಳಿರುವುದು ಕಂಡು ಬಂದಿದೆ.
ಈ ಇಬ್ಬರು ಚಾಲನಾ ಸಿಬ್ಬಂದಿಗಳು ಅದನ್ನು ಘಟಕಕ್ಕೆ ತಂದು ಘಟಕ ವ್ಯವಸ್ಥಾಪಕ ಹರಿಕೃಷ್ಣ ಅವರ ಸಮ್ಮುಖದಲ್ಲಿ ಮತ್ತೊಮ್ಮೆ ಪರಿಶೀಲಿಸಿ ಬ್ಯಾಗಲ್ಲಿ 6 ತೋಲ (60gm) ಬಂಗಾರ ಇರುವುದನ್ನು ಖಚಿತಪಡಿಸಿಕೊಂಡರು. ಅಲ್ಲದೆ ಘಟಕ ವ್ಯವಸ್ಥಾಪಕರು ಆ ಬ್ಯಾಗನ್ನು ಪರಿಶೀಲಿಸಿ, ಅದರಲ್ಲಿರುವ ಆಧಾರ್ ಕಾರ್ಡ್ನ ಫೋನ್ ನಂಬರ್ಗೆ ಕರೆ ಮಾಡಿ ವಾರಸುದಾರರಿಗೆ ವಿಷಯ ತಿಳಿಸಿದರು..
ಈ ವೇಳೆ ಚಿನ್ನದ ಒಡವೆಗಳನ್ನು ಕಳೆದುಕೊಂಡಿದ್ದ ಪ್ರಯಾಣಿಕರು ಗಾಬರಿ ಮತ್ತು ಭಯಗೊಂಡು ಎಲ್ಹೋಯಿತು ಎಂದು ಹುಡುಕಾಡುತ್ತಿದ್ದರು. ಅದೇ ಸಮಯಕ್ಕೆ ಘಟಕ ವ್ಯವಸ್ಥಾಪಕರು ಕರೆ ಮಾಡಿ ಬ್ಯಾಗ್ ಸಿಕ್ಕಿರುವ ಬಗ್ಗೆ ಹೇಳಿದ್ದರಿಂದ ತುಸು ನೆಮ್ಮದಿಗೊಂಡರು.
ಇನ್ನು ಘಟಕಕ್ಕೆ ಬಂದು ಬ್ಯಾಗನ್ನು ತೆಗೆದುಕೊಂಡು ಹೋಗಲು ಘಟಕ ವ್ಯವಸ್ಥಾಪಕ ಹರಿಕೃಷ್ಣ ತಿಳಿಸಿದರು. ಬ್ಯಾಗ್ ಕಳೆದುಕೊಂಡಿದ್ದವರು ಘಟಕಕ್ಕೆ ಬಂದಾಗ ವಾರಸುದಾರರ ಆಧಾರ್ ಕಾರ್ಡಿನ ಪುರಾವೆಯನ್ನು ಪರಿಶೀಲಿಸಿ ಘಟಕದ ಪಾರುಪತ್ತೆಗಾರರು, ಚಾಲಕ ದೇವಪ್ಪ, ನಿರ್ವಾಹಕ ಚಂದ್ರಶೇಖರ್ ಆಚಾರ್ಯ ಹಾಗೂ ಘಟಕದ ಸಿಬ್ಬಂದಿಗಳ ಸಮ್ಮುಖದಲ್ಲಿ ಬ್ಯಾಗನ್ನು ಬಳ್ಳಾರಿ ಮೂರನೇ ಘಟಕದಲ್ಲಿ ಮಧ್ಯಾಹ್ನ 12:30ರ ಸುಮಾರರಿಗೆ ವಾರಸುದಾರರಿಗೆ ಘಟಕ ವ್ಯವಸ್ಥಾಪಕ ಹರಿಕೃಷ್ಣ ಮರಳಿಸಿದರು.
ಬಳಿಕ ಡಿಎಂ ಹರಿಕೃಷ್ಣ ಮಾತನಾಡಿ, ತಮ್ಮ ಡಿಪೋ ಚಾಲನಾ ಸಿಬ್ಬಂದಿಗಳಾದ ಚಾಲಕ ದೇವಪ್ಪ, ನಿರ್ವಾಹಕ ಚಂದ್ರಶೇಖರ್ ಆಚಾರ್ಯ ಅವರ ಪ್ರಾಯಾಣಿಕತೆಯನ್ನು ಶ್ಲಾಘಿಸಿದ್ದು, ಅಲ್ಲದೆ ಈ ಸಂಬಂಧ ಮೇಲಧಿಕಾರಿಗಳ ಗಮನಕ್ಕೆ ತಂದು ಚಾಲನಾ ಸಿಬ್ಬಂದಿಗಳನ್ನು ಗೌರವಿಸಲಾಗುವುದು ಎಂದು ವಿಜಯಪಥಕ್ಕೆ ತಿಳಿಸಿದರು.
Related

You Might Also Like
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...
ರೈತರು ಮರ ಕಟಾವು ಮಾಡುವ ನಿಯಮ ಸರಳಗೊಳಿಸಿ: ಅತ್ತಹಳ್ಳಿ ದೇವರಾಜ್ ಒತ್ತಾಯ
ಮೈಸೂರು: ರೈತರು ತಮ್ಮ ಜಮೀನಿನಲ್ಲಿ ಇರುವ ಮರ ಕಟಾವು ಮಾಡಿ ಸಾಗಾಣಿಕೆ ಮಾಡಿಕೊಳ್ಳುವ ನಿಯಮ ಸರಳೀಕರಣ ಗೊಳಿಸಿಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಕ್ರಮ ಕೈಗೊಳ್ಳಬೇಕು...
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥ: ಗ್ರಾಮದಲ್ಲೇ ಬೀಡುಬಿಟ್ಟ ವೈದ್ಯರ ತಂಡ
ವಿಜಯಪುರ: ಕಲುಷಿತ ನೀರು ಕುಡಿದ 30ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ನಿಡಗುಂದಿ ತಾಲೂಕಿನ ಬ್ಯಾಲಿಹಾಳದಲ್ಲಿ ನಡೆದಿದೆ. ಗ್ರಾಮಕ್ಕೆ ಗ್ರಾಮ ಪಚಾಯಿತಿಯಿಂದ ಸರಬರಾಜು ಮಾಡಿರುವ ನೀರು...
KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ-ಧರಣಿ ಸತ್ಯಾಗ್ರಹ ಆರಂಭ
ಬೆಂಗಳೂರು: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಜು.29)...