CRIMENEWSನಮ್ಮರಾಜ್ಯ

ಬಸ್‌ ಸೀಟಿಗಾಗಿ ಹೆಡ್ ಕಾನ್‌ಸ್ಟೆಬಲ್ ಪ್ರಯಾಣಿಕರ ಜತೆ ಅಸಭ್ಯ ವರ್ತನೆ: ಬಸ್ ಗಾಜು ಒಡೆದು ದರ್ಪ

ವಿಜಯಪಥ ಸಮಗ್ರ ಸುದ್ದಿ
  • ದೂರು ದಾಖಲಿಸಿಕೊಳ್ಳಲು ಪೊಲೀಸರ ಹಿಂದೇಟು

ದೇವದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹೆಡ್ ಕಾನ್‌ಸ್ಟೆಬಲ್‌ ಒಬ್ಬರು ಪಟ್ಟಣದ ಅಂಬೇಡ್ಕರ್ ಸರ್ಕಲ್ ಬಳಿ ಬಸ್ ಸೀಟಿಗಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲದೆ ಬಸ್‌ಗೆ ಕಲ್ಲು ಹೊಡೆದು ಬಸ್‌ ಮುಂಭಾಗದ ಗ್ಲಾಸ್‌ ಒಡೆದುಹಾಕಿದ್ದಾನೆ.

ಹೆಡ್ ಕಾನ್‌ಸ್ಟೆಬಲ್‌ ಶ್ರೀನಿವಾಸ್ ಎಂಬುವರೆ ಈ ಕೃತ್ಯ ಎಸಗಿದವರು. ಪಟ್ಟಣದಿಂದ ಗುರುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬಸ್ ದೇವದುರ್ಗದಿಂದ ರಾಯಚೂರಿಗೆ ಹೊರಟಿತ್ತು. ಕರ್ತವ್ಯ ಮುಗಿಸಿಕೊಂಡು ರಾಯಚೂರಿಗೆ ತೆರಳುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಶ್ರೀನಿವಾಸ್‌ ಬಸ್‌ನ ಸೀಟ್ ಒಂದರಲ್ಲಿ ಕುಳಿತಿದ್ದ ವೃದ್ಧೆಯೊಬ್ಬರಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.

ಈ ವೇಳೆ ಬಸ್‌ನಲ್ಲಿ ಡ್ಯೂಟಿ ಮಾಡುತ್ತಿದ್ದ ಚಾಲಕ ಕಂ ನಿರ್ವಾಹಕ ಸುರೇಶಬಾಬು ಮತ್ತು ಬಸ್‌ನಲ್ಲಿದ್ದ ಪ್ರಯಾಣಿಕರು ತಿಳಿ ಹೇಳುವ ಪ್ರಯತ್ನಿಸಿದ್ದಾರೆ. ಆದರೆ, ಅವರ ಮಾತನ್ನು ಕೇಳಿಸಿಕೊಳ್ಳದೆ ಪ್ರಯಾಣಿಕರ ಮೇಲೆಯೇ ರೇಗಾಡಿದ ಹೆಡ್ ಕಾನ್‌ಸ್ಟೆಬಲ್ ಬಸ್‌ ಇಳಿದು ಬಂದು ಬಸ್‌ಗೆ ಕಲ್ಹೋಡೆದಿದ್ದಾರೆ. ಈ ಘಟನೆಯನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ.

ಬಸ್‌ನ ಗಾಜು ಒಡೆದ ಬೆನ್ನಲ್ಲೇ ಚಾಲಕ ಸುರೇಶಬಾಬು ಬಸ್ ಅನ್ನು ನೇರವಾಗಿ ಪೊಲೀಸ್ ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ ಹೆಡ್ ಕಾನ್‌ಸ್ಟೆಬಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸುರೇಶಬಾಬು ಹಾಗೂ ಪ್ರಯಾಣಿಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಬಸ್ ಚಾಲಕ ಹಾಗೂ ಪ್ರಯಾಣಿಕರಿಗೆ ಹೆಡ್‌ ಕಾನ್‌ಸ್ಟೆಬಲ್ ಶ್ರೀನಿವಾಸ ಜೀವ ಬೆದರಿಕೆ ಹಾಕಿದ್ದರು, ಹೆಡ್ ಕಾನ್‌ಸ್ಟೆಬಲ್ ವಿರುದ್ಧ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಪೊಲೀಸರು ಸಂಧಾನಕ್ಕೂ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇನ್ನು ಹೆಡ್ ಕಾನ್‌ಸ್ಟೆಬಲ್ ಶ್ರೀನಿವಾಸ ಹಿಂದೆ ಕರ್ತವ್ಯ ಲೋಪದಿಂದ ನಾಲ್ಕು ಬಾರಿ ಅಮಾನತುಗೊಂಡಿದ್ದರು ಎಂದು ಮೂಲಗಳು ಹೇಳಿವೆ.

ಘಟನೆಯಲ್ಲಿ ಹೆಡ್ ಕಾನ್ಸ್ಟೆಬಲ್ ತಪ್ಪಿದೆ ಕಾನೂನು ಸುವ್ಯವಸ್ಥೆ ಬಲ್ಲವರೇ ಈ ರೀತಿ ವರ್ತಿಸಿದ್ದು ಸರಿಯಲ್ಲ ದೂರು ನೀಡುವಂತೆ ನಿರ್ವಾಹಕ ಕಂ ಚಾಲಕನಿಗೆ ತಿಳಿಸಿದ್ದೇವೆ ಎಂದು ಘಟಕ ವ್ಯವಸ್ಥಾಪಕ ರಾಮನಗೌಡ ತಿಳಿಸಿದ್ದಾರೆ.

ಬಸ್‌ನಲ್ಲಿದ್ದ ಪ್ರಯಾಣಿಕರು, ಕೆಕೆಆರ್‌ಟಿಸಿ ಸಿಬ್ಬಂದಿಯಿಂದ ಘಟನೆಯ ಕುರಿತು ಮಾಹಿತಿ ಪಡೆದು ದೂರು ದಾಖಲಿಸಿಕೊಳ್ಳಲಾಗುವುದು ಎಂದು ದೇವದುರ್ಗ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್ ಎಸ್‌. ಮಂಜುನಾಥ ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...