NEWSನಮ್ಮಜಿಲ್ಲೆ

ಮೈಸೂರು ಜಿಲ್ಲೆಯವರೇ ಆಗಿದ್ದರೆ ಕಟ್ಟಡ ಕೆಲಸಕ್ಕೆ ಅನುಮತಿ

ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕಟ್ಟಡ ಕಾರ್ಮಿಕರು ಮೈಸೂರು ಜಿಲ್ಲೆಯವರಾಗಿದ್ದು, ಇಲ್ಲೇ ಇದ್ದರೆ ಮಾತ್ರ ಕೆಲಸ ಮಾಡಬಹುದು. ಹೊರ ಜಿಲ್ಲೆ ಅಥವಾ ರಾಜ್ಯಗಳಿಂದ ಈ ಸಂದರ್ಭದಲ್ಲಿ ಇಲ್ಲಿಗೆ ಬಂದು ಕೆಲಸ ಮಾಡಲು ಅನುಮತಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಿನ್ನೆ ಮೈಸೂರಿನಲ್ಲಿ ಮಾತನಾಡಿ, ಕೃಷಿ ಚಟುವಟಿಕೆಗೆ ಈಗಾಗಲೇ ಅನುಮತಿ ಕೊಡಲಾಗಿದೆ. ಉಳಿದಂತೆ ಈ ಹಿಂದಿನ ಕ್ರಮವೇ ಮುಂದುವರಿಯುತ್ತದೆ. ಐಟಿ-ಬಿಟಿಗೆ ಅಗತ್ಯವಿರುವಷ್ಟು ಮಾತ್ರ ಅನುಮತಿ ಕೊಡಲಾಗಿದ್ದು, ಪರಿಸ್ಥಿತಿಗೆ ಅನುಗುಣವಾಗಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಮೈಸೂರು ರೆಡ್ ಝೋನ್ ಎಂದು ಪರಿಗಣಿಸಿರುವ ಹಿನ್ನೆಲೆ ಜಿಲ್ಲೆಯಲ್ಲಿ ಸಡಿಲಿಕೆ ಇಲ್ಲ. ವೈದ್ಯಕೀಯ ತುರ್ತು ಪರಿಸ್ಥಿತಿಗಳಿಗೆ ಮಾತ್ರ ಓಡಾಟಕ್ಕೆ ಅನುಮತಿ ಕೊಡಲಾಗಿದೆ. ಇನ್ನು ಕಟ್ಟಡ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ತೀರಾ ತುರ್ತು ಇದ್ದವರು ಅನುಮತಿ ಪಡೆದು ಕೆಲಸ ಮಾಡಿಸಿಕೊಳ್ಳಬಹುದು ಎಂದರು.

ಕಬ್ಬಿಣ ಹಾರ್ಡ್‍ವೇರ್ ಅಂಗಡಿಗಳು ತೆರೆಯುವಂತಿಲ್ಲ. ಪ್ಲಂಬರ್ ಎಲೆಕ್ಟ್ರಿಕ್ ಕೆಲಸಗಳಿಗೆ ಪೊಲೀಸ್ ಅನುಮತಿ ಅವಶ್ಯಕ. ಉಳಿದ ವಿಷಯಗಳಿಗೆ ಮೇ 3 ರವರೆಗೆ ಯಾವುದೇ ಕಾರಣಕ್ಕೂ ಅನುಮತಿ ಇಲ್ಲ. ಈ ಬಗ್ಗೆ ಪರಿಶೀಲನೆ ನಡೆಸಿ ಮುಂದೆ ಏನು ಮಾಡಬಹುದು ಎಂದು ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.

ಮೈಸೂರಲ್ಲಿ ಇಷ್ಟು ಸೋಂಕು ಜ್ಯೂಬಿಲಿಯೆಂಟ್ ಹಾಗೂ ತಬ್ಲಿಘೀ ಜಮಾತ್‍ನವರಿಂದ ಹೆಚ್ಚಾಗಿ ಬಂದಿದೆ. ಆದರೆ, ಇಲ್ಲಿಗೆ ಬಂದಿರುವುದು ಕೇವಲ 3 ರಿಂದ 4 ಮಾತ್ರ. ಹೀಗಾಗಿ ಇಲ್ಲಿಯವರೆಗೆ ಸಹಕಾರ ನೀಡಿದ ಮಾನ್ಯ ಜನತೆ ಮುಂದೆಯೂ ಇದೇರೀತಿ ಸಹಕಾರ ನೀಡಲಿ ಎಂದು ಕೋರಿಕೊಳ್ಳುವೆ ಎಂದರು.

ರೈತರು ತಮ್ಮ ಹಳೇ ಸಾಲವನ್ನು ತೀರಿಸುವ ಸಲುವಾಗಿ ಸುಸ್ತಿ ಮನ್ನಾ ಮಾಡಲಾಗುವುದು. ಇದಕ್ಕೆ ಮಾರ್ಚ್ 31ರ ವರೆಗೆ ಗಡುವು ನೀಡಲಾಗಿತ್ತು. ಈ ಗಡುವನ್ನು ಮತ್ತೆ ಮೂರು ತಿಂಗಳ ಅವಧಿಗೆ ವಿಸ್ತರಿಸಲಾಗುವುದು. ಅವಧಿ ವಿಸ್ತರಣೆಯಿಂದ 14 ಕೋಟಿ ರೂ. ಬಡ್ಡಿ ಹೊರೆ ಬರುತ್ತದೆ. ಅದನ್ನು ನಾವೇ ಭರಿಸುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಸಚಿವರು ತಿಳಿಸಿದರು.

ನಾಗರಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಯಾವುದೇ ಕಾರಣಕ್ಕೂ ಅನಾವಶ್ಯಕವಾಗಿ ಮನೆಯಿಂದ ಆಚೆ ಬರಕೂಡದು ಎಂದು ಮನವಿ ಮಾಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ