NEWSನಮ್ಮರಾಜ್ಯ

ಏ.24ರ ಸಂಜೆ ವೇಳೆಗೆ 29 ಕೊರೊನಾ ಹೊಸ ಸೋಂಕಿತರು ಪತ್ತೆ

ರಾಜ್ಯದಲ್ಲಿ 474ಕ್ಕೆ ಏರಿದ ಕೋವಿಡ್‌-19 ಸೋಂಕಿತರು l ಬೆಂಗಳೂರಿನಲ್ಲಿ ಇಂದು19 ಮಂದಿಯಲ್ಲಿ ಸೋಂಕು ದೃಢ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇ ದಿನ 29 ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ ಆಗಿದೆ.

 ರಾಜ್ಯದ ರಾಜಧಾನಿಯಲ್ಲಿ ಇಂದು ಒಂದೇ ದಿನ 19 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಬೆಳಗ್ಗೆ 11 ಮಂದಿಗೆ ಇತ್ತು ಸಂಜೆ ವೇಳೆಗೆ ಮತ್ತೆ 8 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 120ಕ್ಕೆ ಏರಿಕೆ ಆಗಿದೆ.

ಬೆಂಗಳೂರಿನ 19, ಬೆಳಗಾವಿಯಲ್ಲಿ 2, ಬಾಗಲಕೋಟೆಯಲ್ಲಿ ಎರಡು, ವಿಜಯಪುರದಲ್ಲಿ 2, ಮಂಡ್ಯ, ತುಮಕೂರು, ಚಿಕ್ಕಬಳ್ಳಾಪುರದಲ್ಲೂ ತಲಾ ಒಂದೊಂದು ಪ್ರಕರಣ ಪತ್ತೆಯಾಗಿದೆ.

ಪಾದರಾಯನಪುರದಲ್ಲಿ ಇತ್ತೀಚೆಗೆ ಗಲಾಟೆ ಮಾಡಿದ್ದ 121 ಮಂದಿಯನ್ನು ರಾಮನಗರದ ಜೈಲಿನಲ್ಲಿ ಇರಿಸಲಾಗಿತ್ತು. ಅವರಲ್ಲಿ 5 ಮಂದಿಗೆ ಕೊರೊನಾ ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಜತೆಗೆ ಬೆಂಗಳೂರಿನ 19 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಬೆಂಗಳೂರಿನ  ನಿವಾಸಿಗಳಲ್ಲಿ ಇಂದು ತುಸು ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕೊರೊನಾ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈವರೆಗೆ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 474ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿರಿ ಬೆಂಗಳೂರಿನ 11ಮಂದಿ ಸೇರಿ ಇಂದು 18 ಜನರಿಗೆ ಕೊರೊನಾ ಸೋಂಕು

ದೇಶದಲ್ಲಿ 23088ಕ್ಕೇರಿದ ಸೋಂಕಿತರ ಸಂಖ್ಯೆ

ಇನ್ನು ದೇಶದಲ್ಲಿ ಈವರೆಗೆ 23088 , ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 718 ಮಂದಿ ಮೃತಪಟ್ಟಿದ್ದಾರೆ. 4,258 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 27,45,469  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 1,91,791 ಜನರು ಮೃತಪಟ್ಟಿದ್ದಾರೆ. 7,55,462 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ