ಬೆಂಗಳೂರು ಗ್ರಾಮಾಂತರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಅನುಷ್ಠಾನ ಗೊಳಿಸಿದನಂತರ ಕರ್ನಾಟಕವು ಆಧುನಿಕ ಅಭಿವೃದ್ಧಿಯತ್ತ ದಾಪುಗಾಲು ಇಟ್ಟಿದೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಸೂರಜ್ ಎಂ.ಎನ್ ಹೆಗಡೆ ಹೇಳಿದರು.
ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಹಸಿವು ಮುಕ್ತ ಕರ್ನಾಟಕ, ಮಹಿಳೆಯರ ಸಬಲೀಕರಣ, ಸ್ವಾವಲಂಬಿ ಬದುಕಿಗೆ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ. ಯಾರ ಹಸ್ತಕ್ಷೇಪ, ಮಧ್ಯವರ್ತಿಗಳ ಹಾವಳಿ ಇಲ್ಲದೆ ರಾಜ್ಯದ ಜನತೆಗೆ ಪಂಚ ಗ್ಯಾರಂಟಿಗಳು ತಲುಪುತ್ತಿರುವುದು ಹೆಮ್ಮೆಯ ಸಂಗತಿ. ಈ ಯಶಸ್ಸಿಗೆ ಅಧಿಕಾರಿಗಳು ಕೂಡ ಭಾಗಿಗಳು.
ಕರ್ನಾಟಕದ ಪಂಚ ಗ್ಯಾರಂಟಿಗಳು ದೇಶದಲ್ಲಿ ಹೆಚ್ಚು ಪ್ರಸಿದ್ಧಿ ಪಡೆದುಕೊಂಡು, ಇತರೆ ರಾಜ್ಯಗಳು ಕೂಡ ನಮ್ಮ ರಾಜ್ಯದ ಪಂಚ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಜಾರಿಗೊಳಿಸುತ್ತಿರುವುದು ವಿಶೇಷ ಎಂದರು.
ಕರ್ನಾಟಕ ರಾಜ್ಯವು ಆಧುನಿಕವಾಗಿ ಅಭಿವೃದ್ಧಿ ಆಗುತ್ತಿದ್ದು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ, ಬಡವರ, ಹಿಂದುಳಿದವರ ಆರ್ಥಿಕ ಪರಿಸ್ಥಿತಿ ಸುಧಾರಿಸಿದೆ. ಇಂತಹ ಅನುಕೂಲಕರ ವಾತಾವರಣ ಸೃಷ್ಟಿಗೊಳಿಸಿದ ಪಂಚ ಗ್ಯಾರಂಟಿಗಳ ಬಗ್ಗೆ ಹೆಚ್ಚು ಪ್ರಚಾರ ಆಗಬೇಕಿದೆ. ಜಿಲ್ಲೆ, ತಾಲ್ಲೂಕು, ಪಂಚಾಯಿತಿ ವಾರು ಶಿಬಿರ, ಜಾಗೃತಿ ಕಾರ್ಯಕ್ರಮಗಳನ್ನು ಏರ್ಪಡಿಸಿ ಪಂಚ ಗ್ಯಾರಂಟಿ ಯೋಜನೆಗಳ ಅನುಕೂಲದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಎಂದು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಸದಸ್ಯರುಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ. ಇನ್ನೂ ಕೂಡ ಯಾರು ಅರ್ಹ ಫಲಾನುಭವಿಗಳು ಗ್ಯಾರಂಟಿ ಸೌಲಭ್ಯ ಪಡೆಯುತ್ತಿಲ್ಲ ಅಂತವರ ಮಾಹಿತಿ ಕಲೆ ಹಾಕಿ ಯಾಕೆ ಸೌಲಭ್ಯ ಸಿಗುತ್ತಿಲ್ಲ? ಎಂಬುದರ ಬಗ್ಗೆ ಅರಿತು ಅವರ ಸಮಸ್ಯೆ ಬಗೆ ಹರಿಸುವ ಮೂಲಕ ಶೇಕಡ 100% ಪ್ರಗತಿ ಸಾಧಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಫಲಾನುಭವಿಗಳ ಅಭಿಪ್ರಾಯ ಆಲಿಸಿದ ಗ್ಯಾರಂಟಿ ಉಪಾಧ್ಯಕ್ಷ: ಸಭೆಯ ನಂತರ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಗ್ರಾಮಕ್ಕೆ ಭೇಟಿ ನೀಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸೂರಜ್ ಹೆಗಡೆ ಅವರು ಅಲ್ಲಿನ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ಅಭಿಪ್ರಾಯ, ಅನಿಸಿಕೆ ಪಡೆದುಕೊಂಡರು. ಅಕ್ಕಿ ಖರೀದಿಗೆ ಸಾಕಷ್ಟು ಹಣ ಖರ್ಚಾಗುತ್ತಿತ್ತು. ಉಚಿತ ಅಕ್ಕಿ ನೀಡುತ್ತಿರುವುದರಿಂದ ಕುಟುಂಬದ ಎಲ್ಲ ಸದಸ್ಯರು ಹೊಟ್ಟೆ ತುಂಬಾ ಊಟ ಮಾಡುವಂತಾಗಿದೆ ಹಾಗೆಯೇ ಆರ್ಥಿಕವಾಗಿ ಕೂಡ ಉಳಿತಾಯವಾಗುತ್ತಿದೆ. ಅನ್ನಭಾಗ್ಯ ಯೋಜನೆಯಿಂದ ನಮಗೆ ಸಾಕಷ್ಟು ಅನುಕೂಲ ವಾಗಿದೆ ಎಂದು ಫಲಾನುಭವಿಗಳ ತಮ್ಮ ಅಭಿಪ್ರಾಯ ಅನಿಸಿಕೆ ವ್ಯಕ್ತಪಡಿಸಿದರು.
ದೇವನಹಳ್ಳಿಯ ಕೆ.ಇ.ಬಿ ಕಚೇರಿ ಬಳಿಯ ಜಿಲ್ಲಾ ಸಂಪನ್ಮೂಲ ಕೇಂದ್ರದಲ್ಲಿ ಗೃಹ ಲಕ್ಷ್ಮೀ, ಗೃಹ ಜ್ಯೋತಿ, ಯುವ ನಿಧಿ, ಶಕ್ತಿ ಯೋಜನೆಯ ಫಲಾನುಭವಿಗಳನ್ನು ಮಾತನಾಡಿಸಿದರು. ಗೃಹ ಲಕ್ಷ್ಮೀ ಹಣದಿಂದ ದಿನ ನಿತ್ಯದ ಮಾತ್ರೆ ಸೇವನೆಗೆ ಔಷಧಿ ಖರೀದಿ, ಮಕ್ಕಳ ಫೀಸ್ ಕಟ್ಟಲು, ವಾಶಿಂಗ್ ಮಶೀನ್, ಫ್ರಿಡ್ಜ್ ಖರೀದಿಗೆ ಸಹಾಯವಾಗಿದೆ. ಬಟ್ಟೆ ವ್ಯಾಪಾರ, ಚಿಲ್ಲರೆ ಅಂಗಡಿ ತೆರೆಯಲು ಸಹಾಯವಾಗಿದೆ ಎಂದು ಫಲಾನುಭವಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡರು.
ಯುವ ನಿಧಿ ಯೋಜನೆಯ ಫಲಾನುಭವಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪುಸ್ತಕ ಖರೀದಿಸಲು, ತರಬೇತಿ ಪಡೆದುಕೊಳ್ಳಲು ಹೆಚ್ಚು ಅನುಕೂಲ ವಾಗಿದೆ ಎಂದರು. ದೇವನಹಳ್ಳಿ ಟೌನ್ ಸಹಕಾರ ಕೇಂದ್ರದಲ್ಲಿನ ಅಕ್ಕಿ ಗೋದಾಮುಗೆ ಭೇಟಿ ನೀಡಿ ಅನ್ನಭಾಗ್ಯ ಫಲಾನುಭವಿಗಳ ಅಭಿಪ್ರಾಯ ಪಡೆದರು. ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯ ಫಲಾನುಭವಿಗಳ ಅಭಿಪ್ರಾಯ ಆಲಿಸಿದರು.
ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷರಾದ ಬಿ.ರಾಜಣ್ಣ ಅವರು ಮಾತನಾಡಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ನೇರವಾಗಿ ಅರ್ಹ ಫಲಾನುಭವಿಗಳಿಗೆ ತಲುಪುತ್ತಾ, ಜನ-ಸಾಮಾನ್ಯರ ಆರ್ಥಿಕ ಮಟ್ಟವನ್ನು ಸುಧಾರಿಸುವಲ್ಲಿ ಪಂಚ ಗ್ಯಾರಂಟಿಗಳು ಯಶಸ್ವಿಯಾಗಿವೆ ಎಂದು ಹೇಳಿದರು.
ಸರ್ಕಾರದ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ 2ಸಾವಿರ ರೂ. ಮನೆ ಯಜಮಾನಿಗೆ ಆರ್ಥಿಕ ನೆರವು, ಗೃಹಜ್ಯೋತಿ ಉಚಿತ ವಿದ್ಯುತ್ ಕತ್ತಲು ಮನೆಗೆ ಬೆಳಕಾಗಿದೆ. ಜಿಲ್ಲೆಯ ಸಾವಿರಾರು ಮಹಿಳೆಯರ ಉಚಿತ ಪ್ರಯಾಣಕ್ಕೆ ಶಕ್ತಿ ಯೋಜನೆ
ಶಕ್ತಿ ತುಂಬಿದೆ. ಯುವನಿಧಿ ನಿರುದ್ಯೋಗ ಯುವಕ-ಯುವತಿಯರಿಗೆ ಆರ್ಥಿಕ ಸಹಾಯ ಮಾಡುತ್ತಿದೆ. ಅನ್ನಭಾಗ್ಯ ಯೋಜನೆಯಂತು ಶೇ. 100 ರಷ್ಟು ಬಡಜನರಿಗೆ ತಲುಪುತ್ತಾ, ಅನ್ನಭಾಗ್ಯ ಯೋಜನೆಯೂ ಹಸಿದ ಹೊಟ್ಟೆಗಳನ್ನು ತುಂಬಿಸುತ್ತಿದೆ ಎಂದರು.
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮೀ ಹಣ ಕೂಡಿಟ್ಟು ಮಹಿಳೆಯರು ಹೋಲಿಗೆ ಯಂತ್ರ ಖರೀದಿಸಿದ್ದಾರೆ. ತಂದೆ-ತಾಯಿಯ ಕಣ್ಣಿನ ಶಸ್ತ್ರ ಚಿಕಿತ್ಸೆ, ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡಿದ್ದಾರೆ. ಗೃಹ ಬಳಕೆ ವಸ್ತುಗಳ ಖರೀದಿ ಹೀಗೆ ಗೃಹಲಕ್ಷ್ಮೀ ಹಣದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ ಎಂದು ಹೇಳಿದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ದುರ್ಗಶ್ರೀ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರುಗಳಾದ ನಾರಾಯಣಸ್ವಾಮಿ, ನರಸಿಂಹರಾಜು, ಅಬ್ದುಲ್ ಬಶೀರ್, ಲಕ್ಷಣ ಗೌಡ, ದೇವನಹಳ್ಳಿ ತಾಲೂಕು ಗ್ಯಾರಂಟಿ ಅಧ್ಯಕ್ಷ ಜಗನ್ನಾಥ, ನೆಲಮಂಗಲ ತಾಲೂಕು ಗ್ಯಾರಂಟಿ ಅಧ್ಯಕ್ಷೆ ನಾಗರತ್ನಮ್ಮ, ಹೊಸಕೋಟೆ ತಾಲೂಕು ಗ್ಯಾರಂಟಿ ಅಧ್ಯಕ್ಷ ಬಚ್ಚೆಗೌಡ ಜಿಲ್ಲಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಸರ್ವಸದಸ್ಯರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
Related

You Might Also Like
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...
KSRTC: ಮುಷ್ಕರಕ್ಕೆ ಹೋದರೆ ಹುಷಾರ್ – ಸಾರಿಗೆ ನೌಕರರಿಗೆ ಅಧಿಕಾರಿಗಳ ಎಚ್ಚರಿಕೆ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗದಂತೆ ಈಗಾಗಲೇ ಅಧಿಕಾರಿಗಳು ನೌಕರರಿಗೆ ಎಚ್ಚರಿಕೆ ಕೊಡುತ್ತಿದ್ದಾರೆ. ನಾಲ್ಕೂ...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಅಂಗವಾಗಿ ಒಂದು ದಿನದ ಸಾಮೂಹಿಕ ಉಪವಾಸ ಸತ್ಯಾಗ್ರಹ ಆರಂಭ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ ಬರಬೇಕಾಗದ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಹಾಗೂ 2024ರ ಜನವರಿ 1ರಿಂದ...
EPS Pensioners Protest: ಅಧಿವೇಶನ ಮುಗಿಯುವುದರೊಳಗೆ ಬೇಡಿಕೆ ಈಡೇರದಿದ್ದರೆ ಉಗ್ರ ಹೋರಾಟ: ನಂಜುಂಡೇಗೌಡ ಎಚ್ಚರಿಕೆ
ಬೆಂಗಳೂರು: ಇದೇ ಜುಲೈ 21ರಿಂದ ಪಾರ್ಲಿಮೆಂಟ್ ಅಧಿವೇಶನ ಪ್ರಾರಂಭವಾಗಿದ್ದು, ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಬೇಡಿಕೆಗಳನ್ನು ಈಡೇರಿಸದೆ ಹೊದಲ್ಲಿ ನಾವು ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಬಿಎಂಟಿಸಿ...
ಸಮಾನ ವೇತನಕ್ಕೆ ಆಗ್ರಹಿಸಿ ಅನಿರ್ದಿಷ್ಟಾವಧಿ ಉಪವಾಸ ಧರಣಿ ಸತ್ಯಾಗ್ರಹ ಮಾಡುತ್ತಿದ್ದ ಸಾರಿಗೆ ನೌಕರರ ಮುಖಂಡರ ಬಂಧನ
ಸಾರಿಗೆ ನೌಕರರ ಹೋರಾಟ ಹತ್ತಿಕ್ಕಿದ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕೊಟ್ಟ ಭರವಸೆ ಈಡೇರಿಸುವ ಬದಲಿಗೆ ದೌರ್ಜನ್ಯ ಎಸಗಿದ ಕಾಂಗ್ರೆಸ್ ಸರ್ಕಾರ ಬೆಂಗಳೂರು: ಸಮಾನ ವೇತನ,...