NEWSಸಂಸ್ಕೃತಿ

ಪ್ರಗತಿಪರ ಚಿಂತಕ ಮಹೇಂದ್ರ ಕುಮಾರ್‌ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪ್ರಗತಿಪರ ಚಿಂತಕ-ಭಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌ (47) ಶನಿವಾರ ಬೆಳಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಶುಕ್ರವಾರ ರಾತ್ರಿ ಅವರಿಗೆ ತೀವ್ರ  ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ.

ಬಜರಂಗದಳದ ರಾಜ್ಯ ಸಂಚಾಲಕರಾಗಿದ್ದರು. ಅದರಿಂದ ಹೊರಬಂದ ಬಳಿಕ ಸಾಮಾಜಿಕ, ಜಾಗೃತಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿದ್ದರು. ಬಿಜೆಪಿ, ಸಂಘ ಪರಿವಾರದ ಸಿದ್ಧಾಂತ ವಿರೋಧಿಸಿ ಸಾಕಷ್ಟು ನಿಷ್ಠುರಗಳನ್ನೂ ಕಟ್ಟಿಕೊಂಡಿದ್ದರು. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾದ ಮಹೇಂದ್ರ ಕುಮಾರ್ ಬೆಂಗಳೂರಿನಲ್ಲಿ ವಾಸವಾಗಿದ್ದರು.

“ನಮ್ಮ ಧ್ವನಿ” ಎಂಬ ಸಂಘಟನೆ ಸಂಸ್ಥಾಪಕರಾಗಿ,  ನಮ್ಮ ಧ್ವನಿ ಯೂಟ್ಯೂಬ್ ಚಾನೆಲ್ ಮೂಲಕ ವಿವಿಧ ವಿಷಯಗಳ ಬಗ್ಗೆ ಮಾತನಾಡಿ ಜನಪ್ರಿಯರಾಗಿದ್ದರು. ಜನಪರ ಹೋರಾಟಗಾರ, ಶಾಂತಿಪ್ರಿಯ, ಸೌಹಾರ್ದಪರ, ಪ್ರಗತಿಪರ ನಿಲುವುಗಳ ಮಹೇಂದ್ರ  ಅವರ ನಿಧನ ರಾಜ್ಯಕ್ಕೆ ಬಹು ದೊಡ್ಡ ಆಘಾತವಾಗಿದೆ. ಮಹೇಂದ್ರ ಕುಮಾರ್  ಪತ್ನಿ, ಇಬ್ಬರು ಮಕ್ಕಳು ಮತ್ತು ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಬಿಜೆಪಿಯ ನಿಲುವುಗಳನ್ನು ವಿರೋಧಿಸಿ ಜೆಡಿಎಸ್‌ ಪಕ್ಷ ಸೇರಿದ್ದರು. ಇತ್ತೀಚೆಗೆ ನಡೆದ ಸಿಎಎ, ಎನ್‌ಆರ್‌ಸಿ ವಿರುದ್ಧದ ಹೋರಾಟದಲ್ಲಿ ತೊಡಗಿದ್ದರು. ಅವರ ಅಕಾಲಿಕ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನೋವನ್ನು ಉಂಟು ಮಾಡಿದೆ ಅವರನ್ನು ಕಳೆದುಕೊಂಡಿರುವ ಅವರ ಕುಟುಂಬಕ್ಕೆ ನೋವು ನೀಗಿಸುವ ಶಕ್ತಿಯನ್ನು ಆ ಭಗವಂತ ನೀಡಲಿ ಎಂದು ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

Leave a Reply

error: Content is protected !!
LATEST
NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ? ಮೈಸೂರು: ಸಾಲದ 1ಕಂತು ಕಟ್ಟಿಲ್ಲದ್ದಕ್ಕೆ ಟ್ರ್ಯಾಕ್ಟರ್ ಜಪ್ತಿ ಮಾರಾಟ - ಕೋಟಕ್ ಮಹೇಂದ್ರ ಬ್ಯಾಂಕ್‌ಗೆ ರೈತರ ಮುತ್ತಿಗೆ ಕೆಟ್ಟು ನಿಂತಿದ್ದ KSRTC ಬಸ್‌ ರಿಪೇರಿ ವೇಳೆ ಕಾರು ಡಿಕ್ಕಿ-ಕಂಡಕ್ಟರ್‌  ಮೃತ BMTC: ಸ್ಕೂಟರ್​​ಗೆ ಸೈಡ್​ ಬಿಡಲಿಲ್ಲ ಎಂದು ಬಸ್‌ ಚಾಲಕನ ಮೇಲೆ ಕಿಡಿಗೇಡಿಯಿಂದ ಹಲ್ಲೆ- ಇದು 9ನೇ ಪ್ರಕರಣ- ಆತಂಕದಲ್ಲಿ ... KSRTC ಬಸ್‌ನಲ್ಲಿ ₹70 ಸಾವಿರ ಮೌಲ್ಯದ ತಂಬಾಕು ಸಾಗಿಸಿದ ಚನ್ನಪಟ್ಟಣ ಘಟಕದ ಕಂಡಕ್ಟರ್‌ ತಮಿಳುನಾಡಿನಲ್ಲಿ ಬಂಧನ KKRTC ಕೊಪ್ಪಳ ಘಟಕಕ್ಕೆ  RTO ಅಧಿಕಾರಿಗಳ ತಂಡ ಭೇಟಿ: ನೌಕರರಿಗೆ ವಾಯುಮಾಲಿನ್ಯ ದುಷ್ಪರಿಣಾಮಗಳ ಬಗ್ಗೆ ಅರಿವು