ಬೆಂಗಳೂರು: ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯಖಾತೆ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಮಾಡಿದ್ದೇನೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ.
ಸದಾಶಿವನಗರದ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತುಮಕೂರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ವಾಗತ ಕಮಾನು ನಿರ್ಮಿಸಲು ಸ್ಮಾರ್ಟ್ ಸಿಟಿಯಿಂದ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ. ರಾಷ್ಟ್ರೀಯ ಹೆದ್ದಾರಿಯ ಸ್ಥಳೀಯ ನಿರ್ದೇಶಕರು ಆಗುವುದಿಲ್ಲ ಎಂದು ನಮಗೆ ತಿಳಿಸಿದ್ದರು. ಇದಕ್ಕೆ ಕೇಂದ್ರ ಸರ್ಕಾರದ ಅನುಮತಿಯಾಗಬೇಕಿದೆ.
ಹೀಗಾಗಿ ಕೇಂದ್ರದ ಸಚಿವ ವಿ.ಸೋಮಣ್ಣ ಅವರು ನಮ್ಮ ಜಿಲ್ಲೆಯ ಸಂಸದರು, ಕೇಂದ್ರದ ಭೂಹೆದ್ದಾರಿ ಸಚಿವ ನಿತೀನ್ ಗಡ್ಕರಿ ಅವರಿಗೆ ವಿ.ಸೋಮಣ್ಣ ಅವರ ಮೂಲಕ ಮನವಿ ನೀಡಿ, ಅನುಮತಿಯನ್ನು ಕೊಡಿಸುವಂತೆ ಕೇಳಿದ್ದೇನೆ. ಅನುಮತಿ ಕೊಟ್ಟರೆ ತುಮಕೂರಿನ ಆರಂಭದಲ್ಲಿ ಸ್ವಾಗತ ಕಮಾನು ನಿರ್ಮಿಸುತ್ತೇವೆ ಎಂದು ತಿಳಿಸಿದರು.
ಇನ್ನು ನಮ್ಮ ಜಿಲ್ಲೆಗೆ ಕೇಂದ್ರದ ಅನೇಕ ಯೋಜನೆಗಳು ಬರಬೇಕಿದೆ. ಕುಡಿಯುವ ನೀರಿಗೆ ಸಂಬಂಧಪಟ್ಟಂತೆ ಅನೇಕ ಯೋಜನೆಗಳು ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತವೆ. ಇದರಲ್ಲಿ ನಮ್ಮ ತಾಲೂಕು ಸೇರಿದ್ದು, ಅವರೊಂದಿಗೆ ಚರ್ಚಿಸಿದ್ದೇನೆ ಎಂದರು.
ತುಮಕೂರು ನಗರ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದ ಪ್ರಯಾಣದ ವೇಳೆ ಯಾರಿಗೂ ಗೊತ್ತಾಗುವುದಿಲ್ಲ. ಸ್ವಾಗತ ಕಮಾನು ನಿರ್ಮಿಸಿದರೆ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ 5 ಕೋಟಿ ರೂ. ಒದಗಿಸಿಕೊಂಡಿದ್ದೇವೆ ಎಂದು ಹೇಳಿದರು.
ತುಮಕೂರಿಗೆ ಮೆಟ್ರೋ ಯೋಜನೆ ಬಗ್ಗೆ ರಾಜ್ಯ ಸರ್ಕಾರದ ತೀರ್ಮಾನಗಳು ಏನಾಗುತ್ತದೆ ಎಂಬುದನ್ನು ನೋಡಿ ಬಳಿಕ ಸಚಿವ ವಿ.ಸೋಮಣ್ಣ ಅವರೊಂದಿಗೆ ಮಾತನಾಡುತ್ತೇನೆ. ಮೆಟ್ರೋ ಅಗತ್ಯ ಇದೆ ಎಂದು ಸೋಮಣ್ಣ ಹೇಳಿದ್ದಾರೆ. ಸಬ್ ಅರ್ಬನ್ ಯೋಜನೆಯು ಆಗಲಿ. ಎರಡು ಯೋಜನೆಗಳು ಆದರೆ ತಪ್ಪಿಲಿ ಎಂದರು.
ತುಮಕೂರು ಅತಿ ವೇಗವಾಗಿ ಬೆಳೆಯುತ್ತಿದೆ. 20 ಸಾವಿರ ಎಕರೆಯಲ್ಲಿ ಇಂಡಸ್ಟ್ರೀಯಲ್ ಹಬ್ ಮಾಡಿದ್ದೇವೆ. ಬಹಳ ಜನ ತುಮಕೂರನ್ನು ವಿಸ್ತರಣೆ ಮಾಡಬೇಕು ಎಂದು ಕೇಳುತ್ತಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಯುತ್ತಿದೆ. ಬೆಂಗಳೂರಿಗೆ ತುಮಕೂರು 70 ಕಿ.ಮೀ.ನಲ್ಲಿದೆ. ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡರೆ ಅಭಿವೃದ್ಧಿ ದೃಷ್ಟಿಯಿಂದ ಅನುಕೂಲವಾಗುತ್ತದೆ. ನಾವು ಕೂಡ ಪ್ರಸ್ತಾವನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಹೇಮಾವತಿ ಕೆನಾಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ಬೇಡ ಎಂದು ತಿಳಿಸಿದ್ದೇನೆ. ಸಭೆ ಕರೆಯಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಮಾತನಾಡುತ್ತೇನೆ. ಆನಂತರ ಸಭೆ ಕರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆಯಿಂದ ಪತ್ರ ಬಂದಿದೆ ಎಂಬುದನ್ನು ಅಧಿಕಾರಿಗಳು ನನಗೆ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಆ ಭಾಗದ ಜನರು ಎನ್‌ಐಎ ತನಿಖೆಗೆ ವಹಿಸುವಂತೆ ಮಾತನಾಡುತ್ತಿದ್ದರು. ಯಾರಾದರು ಮನವಿ ಮಾಡಿರಬಹುದು. ಸಂಸದರು, ಶಾಸಕರು ಹೇಳಿಕೊಂಡಿರಬಹುದು. ಕೇಂದ್ರ ಗೃಹ ಇಲಾಖೆಯಿಂದ ನಮಗೆ ಪತ್ರ ಬಂದಿದೆ ಎಂದು ಸ್ಪಷ್ಟಪಡಿಸಿದರು.
Related

You Might Also Like
ಕರ್ತವ್ಯ ಲೋಪವೆಸಗಿದ ಮೂವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ ಆದೇಶ
ಬೆಂಗಳೂರು: ಬಿಬಿಎಂಪಿ ಪಶ್ಚಿಮ ವಲಯ ಮಹಾಲಕ್ಷ್ಮಿಪುರ ವಿಭಾದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮೂವರು ಸಿಬ್ಬಂದಿಯನ್ನು ಕರ್ತವ್ಯ ಲೋಪವೆಸಗಿರುವ ಕಾರಣ ಕರ್ತವ್ಯದಿಂದ ಬಿಡುಗಡೆಗೊಳಿ ಪಶ್ಚಿಮ ವಲಯ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್...
ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ: ಜಿಲ್ಲಾಧಿಕಾರಿ ಬಸವರಾಜು
10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ...
ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರದಲ್ಲಿ ಭಾಗವಹಿಸುವ ನೌಕರರ ವಿರುದ್ಧ ಕ್ರಮ: KSRTC ಎಂಡಿ ಅಕ್ರಮ್ ಪಾಷ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಿರುವುದರಿಂದ ನೌಕರರು...
ಆ.5ರಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ನಾಳೆ ಖಾಸಗಿ ಬಸ್ ಮಾಲೀಕರ ಸಭೆ ಕರೆದ ಸಾರಿಗೆ ಆಯುಕ್ತರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಸಾರಿಗೆ ಇಲಾಖೆ ಆಯುಕ್ತರ...
ಮೊಂಡುತನ ಬಿಟ್ಟು ಸಾರಿಗೆ ನೌಕರರಿಗೆ ಕೊಡಬೇಕಿರುವುದ ಕೊಡಿ: ಅಧಿಕಾರವಿದೆ ಎಂಬ ದರ್ಪ ಬಿಡಿ ಸಿದ್ದುಜೀ- ಇದು ಶಾಶ್ವತವಲ್ಲ!
ಸಿಎಂ ಸಿದ್ದರಾಮಯ್ಯ ಸಾಹೇಬರೆ ನೀವು ಈಗ ವಕೀಲರಲ್ಲ ಸರ್ಕಾರದ ಸಂಬಳ ಪಡೆಯುವವರಲ್ಲಿ ನೀವು ಒಬ್ಬರು ಈಗ ನಿಮಗೆ ವಕೀಲ ವೃತ್ತಿ ಮಾಡುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬುದನ್ನು ಮರೆತಿರ...
ಆ.5ರಿಂದ ಸಾರಿಗೆ ನೌಕರರು ಹಮ್ಮಿಕೊಂಡಿರುವ ಮುಷ್ಕರಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ: ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ನ್ಯಾಯಯುತ ಬೇಡಿಕೆಯ ಹೋರಾಟಕ್ಕೆ ಬಿಜೆಪಿ ನೈತಿಕ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ...
KSRTC ನಾಲ್ಕೂ ನಿಗಮಗಳ ನೌಕರರ ವೇತನ ಪರಿಷ್ಕರಣೆ 2027ರ ನಂತರ ಮಾಡಲು ಮಾತ್ರ ಸಾಧ್ಯ: ಪ್ರತಿಪಾದಿಸುತ್ತಿರುವ ಸಾರಿಗೆ ಇಲಾಖೆ
ಬೆಂಗಳೂರು: ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು/ನೌಕರರ ವೇತನ ಪರಿಷ್ಕರಣೆ 2023ರ ಮಾರ್ಚ್ನಲ್ಲಿ ಶೇ.15ರಷ್ಟು ಹೆಚ್ಚಳ ಮಾಡಿರುವುದರಿಂದ ಮುಂದಿನ ಪರಿಷ್ಕರಣೆಯನ್ನು 2027ರ ನಂತರ ಮಾಡಲು ಮಾತ್ರ ಸಾಧ್ಯ ಎಂದು...
ಪ್ರಣವ್ ಮೊಹಾಂತಿ ಅವರ ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ಸರ್ಕಾರ ತೀರ್ಮಾನಿಸಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ ಸ್ಪಷ್ಟನೆ
ಬೆಂಗಳೂರು: ಕೇಂದ್ರ ಸರ್ಕಾರದ ಡೆಪ್ಯೂಟೇಷನ್ ಪಟ್ಟಿಯಲ್ಲಿ ಎಸ್ಐಟಿ ಮುಖ್ಯಸ್ಥರಾಗಿರುವ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ಅವರ ಹೆಸರಿದ್ದು, ಅವರನ್ನು ಕೇಂದ್ರ ಸೇವೆಗೆ ಕಳುಹಿಸುವ ಬಗ್ಗೆ ರಾಜ್ಯ ಸರ್ಕಾರ...
ಅತ್ತ ದರಿ ಇತ್ತ ಪುಲಿ ಎತ್ತ ಹೋಗಲಿ ಎಂಬ ಸ್ಥಿತಿಯಲ್ಲಿ ಸಾರಿಗೆ ನೌಕರರು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿರುವ ಮುಷ್ಕರಕ್ಕೆ ಹೋಗಲು ಬಹುತೇಕ ನೌಕರರು ಸಿದ್ಧರಿದ್ದಾರೆ. ಆದರೆ, ನಾವು ಡ್ಯೂಟಿ...