NEWSದೇಶ-ವಿದೇಶ

ಕೊರೊನಾ ವಾರಿಯರ್ಸ್‌ಗೆ ಅಭಿನಂದನೆ ಎಂದ ಪ್ರಧಾನಿ

ಲಾಕ್‌ಡೌನ್‌ ಬಳಿಕ ಎರಡನೇ ಮನ್‌ ಕೀ ಬಾತ್ l ವಿಶ್ವಕ್ಕೆ ಮಾದರಿಯಾದ ಭಾರತ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿಶ್ವವನ್ನು ಕಾಡುತ್ತಿರುವ ಕೊರೊನಾ ಸೋಂಕಿನ ವಿರುದ್ಧ ನಮ್ಮ ದೇಶ ಬಹಳ ಧೈರ್ಯದಿಂದ ಹೋರಾಡುವ ಮೂಲಕ ವಿಶ್ವಕ್ಕೂ ಸಹಕಾರ ನೀಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ದೇಶದಲ್ಲಿ ಕೊರೊನಾ ಲಾಕ್‌ಡೌನ್‌ ಘೋಷಣೆಯಾದ ಬಳಿಕ ಭಾನುವಾರ ಆಯೋಜಿಸಿದ್ದ 2ನೇ ಮನ್‌ ಕೀ ಬಾತ್‌ನಲ್ಲಿ ಮಾತನಾಡಿದ ಅವರು, ವೈದ್ಯರು, ಪೊಲೀಸ್‌ ಸೇರಿದಂತೆ ಕೊರೊನಾ ವಾರಿಯರ್ಸ್‌ ಕಾರ್ಯಕರ್ತರು ತಮ್ಮ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ. ಅವರಿಗೆ ನಾವು ಗೌರವ ಸಲ್ಲಿಸಲೇ ಬೇಕು. ಅವರ ಕಾಯಕವನ್ನು ಜನ ಮತ್ತು ಜಗವೂ ಮೆಚ್ಚುವ ಮೂಲಕ ಅವರಿಗೆ ಅಭಿನಂದನೆ ಸಲ್ಲಿಸುವು ದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ನಮ್ಮ ದೇಶ ವಿಶ್ವಕ್ಕೆ ಕೊರೊನಾ ವಿರುದ್ಧ ಹೋರಾಡಲು ಎಲ್ಲಾ ರೀತಿಯಲ್ಲೂ ಸ್ಪಂದಿಸುತ್ತಿದೆ. ವೈದ್ಯರು ಮತ್ತು ವೈದ್ಯ ಪರಿಕರಗಳ ಜತೆಗೆ ಬೇಕಾದ ತಾತ್ಕಾಲಿಕ ಔಷಧಗಳನ್ನು ಸರಬರಾಜು ಮಾಡುತ್ತಿದೆ ಎಂದು ಹೇಳಿದರು.

ಭಾರತ ಕೊರೊನಾ ವಿರುದ್ಧ ಹೋರಾಡುತ್ತಿರುವುದಕ್ಕೆ ಮತ್ತು ವಿಶ್ವಕ್ಕೆ ಬೇಕಾದ ಔಷಧ ಸರಬರಾಜು ಮಾಡುತ್ತಿರವುದಕ್ಕೆ ವಿಶ್ವದ ಹಲವು ರಾಷ್ಟ್ರಗಳು ಗೌರವ ಸಲ್ಲಿಸುತ್ತಿವೆ. ಅಲ್ಲದೇ ದೇಶದಲ್ಲಿ ತೆಗೆದುಕೊಂಡ ಮುಂಜಾಗ್ರತಾ ಕ್ರಮಗಳನ್ನು ಸ್ವಾಗತಿಸುವ ಮೂಲಕ ಹೊಗಳುತ್ತಿವೆ. ಅದೇ ರೀತಿ ದೇಶ ವಾಸಿಗಳು ಗೌರವಯುತವಾಗಿ ನಡೆದುಕೊಂಡಿರುವುದಕ್ಕೆ ತುಂಬ ಹೆಮ್ಮೆಯಿದೆ ಎಂದರು.

ಇನ್ನು ಇಂದು ಜಗಜ್ಯೋತಿ ಬಸವೇಶ್ವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದು, ಎಲ್ಲರೂ ಬಸವಣ್ಣನವರ ತತ್ವಾದರ್ಶ ಪಾಲಿಸಕಬೇಕು. ಅಲ್ಲದೆ ವಿಶ್ವಗುರುವಿನ ವಚನಗಳನ್ನು ಪಠಿಸುವ ಮೂಲಕ ಜಾತಿ ಮೇಲು ಕೀಳೆಂಬ ಭಾವನೆಯಿಂದ ಹೊರಬಂದು ನಾವು ಭಾರತೀಯರು ಎಂದು ಒಗ್ಗಟ್ಟಿನಿಂದ ದೇಶವನ್ನು ಮುನ್ನಡೆಸೋಣ ಎಂದು ಕರೆ ನೀಡಿದರು.

ನಮ್ಮ ಪಾರಂಪರಿಕ ಸಿದ್ಧಾಂತವನ್ನು ಪಾಲಿಸೋಣ, ಆಯುರ್ವೇದವನ್ನು ಕಡೆಗಣಿಸುವುದು ಸರಿಯಲ್ಲ. ನಾವು ಕಡೆಗಣಿಸಿದ್ದನ್ನು ವಿಶ್ವ ಅಂಗಿಕರಿಸುತ್ತಿದೆ. ನಮ್ಮ ಸಂಸ್ಕೃತಿಯನ್ನು ಮೊದಲು ನಾವು ಪಾಲಿಸಲು ಮರೆಯದಿರೋಣ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಂಡು  ಕೊರೊನಾ ವಿರುದ್ಧ ಸಮರ ಸಾರೋಣ ಎಂದು ಸಲಹೆ ನೀಡಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ