ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ವೇತನ ಹೆಚ್ಚಳ ಸಂಬಂಧ ಸರ್ಕಾರ ಹಾಗೂ ಸಾರಿಗೆ ನಿಗಮಗಳ ಆಡಳಿತ ಮಂಡಳಿ ವಿರುದ್ಧ ಕಳೆದ ಮಾರ್ಚ್ನಲ್ಲಿ ಅರ್ಜಿ ಹಾಕಿದ್ದು ಆ ಪ್ರಕರಣದ ವಿಚಾರಣೆ ಇಂದು (ಜೂನ್ 11ರಂದು) ನಡೆದಿದ್ದು, ಇದೇ ಜೂನ್ 25ಕ್ಕೆ ಮುಂದೂಡಲಾಗಿದೆ.
ನೌಕರರ ವೇತನ ಹೆಚ್ಚಳದ ಬಗ್ಗೆ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ವಕೀಲ ಎಚ್.ಬಿ.ಶಿವರಾಜು ಹಾಕಿರುವ ಅರ್ಜಿ ಸಂಬಂಧದ ಪ್ರಕರಣ ಇಂದು ನಡೆದಿದ್ದು, ನೌಕರರ ಪರ ವಕೀಲರು ಹಾಗೂ ಸರ್ಕಾರ, ಸಾರಿಗೆ ಆಡಳಿತ ಮಂಡಲಿ ಪರ ವಕೀಲರು ಹಾಜರಾಗಿದ್ದರು. ಸಮಯದ ಅಭಾವದಿಂದ ಪ್ರಕರಣವನ್ನು ಇದೇ ಜೂನ್ 25ಕ್ಕೆ ನ್ಯಾಯಪೀಠ ಮುಂದೂಡಿದೆ.
ಇನ್ನು ವಿಚಾರಣೆ ಇದೇ ಜೂನ್ 9ರಂದು ನಡೆಯಬೇಕಿತ್ತು ಆದರೆ, ಕೆಲ ಕಾರಣಗಳಿಂದ ನ್ಯಾಯಪೀಠಕ್ಕೆ ಪ್ರಕರಣ ಬಂದಿರಲಿಲ್ಲ. ಹೀಗಾಗಿ ಇಂದು ಪ್ರಕರಣ ಕೋರ್ಟ್ಹಾಲ್ಗೆ ಬಂದಿದ್ದು, ಜೂನ್ 25ಕ್ಕೆ ಹೋಗಿದೆ.
ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಶೇ.15ರಷ್ಟು ಮೂಲ ವೇತನ ಹೆಚ್ಚಳ ಮಾಡಿರುವ 38 ತಿಂಗಳ ಹಿಂಬಾಕಿ ಹಾಗೂ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳವಾಗಬೇಕಿದ್ದು 16ತಿಂಗಳಗಳು ಕಳೆದರೂ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.
ನೌಕರರ ವೇತನ ಹೆಚ್ಚಳ ಸಂಬಂಧ 2025ರ ಮಾರ್ಚ್ 10ರಂದು ಹೈ ಕೋರ್ಟ್ನಲ್ಲಿ ವಕೀಲ ಶಿವರಾಜು ಹಾಗೂ ಅವರ ವಕೀಲರ ತಂಡ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು ಮಾಡಿಲ್ಲ. ಹೀಗಾಗಿ ನೌಕರರ ಸಹಿಯೊಂದಿಗೆ ಪಿಟಿಶನ್ ಫೈಲ್ ಮಾಡಿದ್ದಾರೆ.
ಇನ್ನು ಸರ್ಕಾರ ಸಾರಿಗೆ ನೌಕರರನ್ನು ಒಂದು ರೀತಿ ಮಲತಾಯಿಯಂತೆ ನೋಡುತ್ತಿದೆ. ಹೀಗಾಗಿ ನೌಕರರಿಗೆ ಸಿಗಬೇಕಿರುವ ಸೌಲಭ್ಯಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಹೀಗಾಗಿ ನೌಕರರು ತಮ್ಮ ವೇತನ ಸೌಲಭ್ಯ ಪಡೆಯಲೂ ಇನ್ನೂ ಸಾಧ್ಯವಾಗಿಲ್ಲ. ಈ ಎಲ್ಲವನ್ನು ಗಮನಿಸಿರುವ ಶಿವರಾಜು ಅವರು ನೌಕರರ ವೇತನಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Related


You Might Also Like
ಬೆಳ್ಳಂಬೆಳಗ್ಗೆ ಅನಿರೀಕ್ಷಿತ ಭೇಟಿ ನೀಡಿ ಹಾಜರಾತಿ ಪರಿಶೀಲಿಸಿದ ಆಯುಕ್ತರು: ಪೌರ ಕಾರ್ಮಿಕರ ಮೇಲ್ವಿಚಾರಕರಿಬ್ಬರ ಮೇಲೆ ಕ್ರಮ
ಬೆಂಗಳೂರು: ಸರ್ವಜ್ಞನಗರ ಕ್ಷೇತ್ರದ ಬಾಣಸವಾಡಿಯ ಬಿಎಸ್ಎನ್ಎಲ್ ಮಸ್ಟರಿಂಗ್ ಪಾಯಿಂಟ್ (ಭುವನಗಿರಿ ಪಾರ್ಕ್) ನಲ್ಲಿ ಇಂದು ಮುಂಜಾನೆ ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್...
ನಾಡಹಬ್ಬ ದಸರಾಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾ ಉಸ್ತುವಾರಿ ಸಚಿವ HCM
ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಅಧಿಕೃತವಾಗಿ ಆಹ್ವಾನಿಸಿದರು. ಇದೇ ಸೆ.22 ರಂದು ಪ್ರಾರಂಭವಾಗಲಿರುವ...
ಮೊಸಳೆಹೊಸಳ್ಳಿ ದುರಂತ: ಮೃತರ ಮನೆಗಳಿಗೆ ವ್ಹೀಲ್ ಚೇರ್ನಲ್ಲೇ ತೆರಳಿ ಸಾಂತ್ವನ ಹೇಳಿದ ಮಾಜಿ ಪ್ರಧಾನಿ ಎಚ್ಡಿಡಿ
ಹಾಸನ: ಜಿಲ್ಲೆಯ ಮೊಸಳೆಹೊಸಳ್ಳಿಯಲ್ಲಿ ಮೊನ್ನೆ ನಡೆದ ಅಪಘಾತ ಪ್ರಕರಣ ನಿಜಕ್ಕೂ ಘನಘೋರ. ಅಪಘಾತದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಚಂದನ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಮೂಲಕ...
ಸಾಲಬಾಧೆ-ಗಂಡ, ಇಬ್ಬರು ಮಕ್ಕಳು ಸೇರಿ ನಾಲ್ವರು ಆತ್ಮಹತ್ಯೆಗೆ ಯತ್ನ ಮೂವರು ಮೃತ: ಸಾವು ಬದುಕಿನ ನಡುವೆ ತಾಯಿ ಸೆಣಸಾಟ
ಹೊಸಕೋಟೆ: ಸಾಲಬಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಈ ಪೈಕಿ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ಗೊಣಕನಹಳ್ಳಿಯಲ್ಲಿ ಗ್ರಾಮದಲ್ಲಿ ನಡೆದಿದೆ. ಗಂಡ, ಇಬ್ಬರು ಮಕ್ಕಳನ್ನು...
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...