NEWSಬೆಂಗಳೂರು

ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೂರ್ವ ವಲಯ ವ್ಯಾಪ್ತಿಯ ಇಂದಿರಾನಗರದ 12ನೇ ಮುಖ್ಯ ರಸ್ತೆಯಿಂದ ಗಣಪತಿ ಎನ್‌ಕ್ಲೇವ್ ವರೆಗೆ ಪಾದಚಾರಿ ಮಾರ್ಗ ಪರಿಶೀಲನೆ ನಡೆಸುವ ವೇಳೆ ಮಾತನಾಡಿದ ಅವರು, ಮಳೆಗಾಲದ ವೇಳೆ ಒಳಚರಂಡಿಗಳ ಕವರ್ ಸ್ಲ್ಯಾಬ್ ಗಳಿಂದ ನೀರು ಉಕ್ಕಿ ಹರಿಯಲಿದೆ. ಆದ್ದರಿಂದ ರಸ್ತೆ ಭಾಗದಲ್ಲಿ ಒಳಚರಂಡಿಗಳ ಮೇಲ್ಭಾಗದಲ್ಲಿ ಅಳವಡಿಸಿರುವ ಕವರ್ ಸ್ಲ್ಯಾಬ್ ಗಳು ದುರಸ್ತಿಯಾಗಿದ್ದಲ್ಲಿ ಅವುಗಳನ್ನು ಕೂಡಲೇ ಬದಲಾಯಿಸಲು ಹೇಳಿದರು.

ಅನುಪಯುಕ್ತ ವಿದ್ಯುತ್ ಕಂಬಗಳ ತೆರವಿಗೆ ಸೂಚನೆ: ಇಂದಿರಾನಗರದ 100 ಅಡಿ ರಸ್ತೆಯ ಪಾದಚಾರಿ ಮಾರ್ಗದಲ್ಲಿ ಹಳೆಯ ಹಾಗೂ ಬಳಕೆಯಲ್ಲಿಲ್ಲದ ವಿದ್ಯುತ್ ಕಂಬಗಳಿದ್ದು, ಅದರಿಂದ ಪಾದಚಾರಿಗಳಿಗೆ ಅಡಚಣೆಯಾಗುತ್ತಿದೆ. ಆದ್ದರಿಂದ ಅವುಗಳನ್ನು ತ್ವರಿತವಾಗಿ ತೆರವುಗೊಳಿಸಲು ಸೂಚನೆ ನೀಡಿದರು.

ಕಟ್ಟಡ ಮಾಲೀಕರಿಗೆ ನೋಟಿಸ್: ಕಟ್ಟಡ ನಿರ್ಮಾಣ ಸ್ಥಳಗಳಲ್ಲಿ ಪಾದಚಾರಿ ಮಾರ್ಗಗಳಲ್ಲಿ ಕಟ್ಟಡ ನಿರ್ಮಾಣ ಸಾಮಗ್ರಿಗಳು ಹಾಕಿದ್ದು, ಇದರಿಂದ ನಾಗರಿಕರ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗಲಿದೆ. ಈ ಸಂಬಂಧ ಕಟ್ಟಡ ಮಾಲೀಕರಿಗೆ ನೋಟಿಸ್ ನೀಡಿ, ದಂಡ ವಿಧಿಸಲು ತಿಳಿಸಿದರು.

ಮೇಲ್ಸೇತುವೆ ಬಳಿ ಸ್ಕೈವಾಕ್ ನಿರ್ಮಿಸಲು ಚಿಂತನೆ: ಇಂದಿರಾನಗರದಿಂದ ಕೋರಮಂಗಲದ ಕಡೆ ಹೋಗುವ ದೊಮ್ಮಲೂರು ಮೇಲ್ಸೇತುವೆಯ ಮೇಲೆ ಪಾದಚಾರಿ ಮಾರ್ಗವಿಲ್ಲದಿರುವುದನ್ನು ಗಮನಿಸಿ, ಇದರಿಂದ ನಾಗರಿಕರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದು, ದೊಮ್ಮಲೂರು ಮೇಲ್ಸೇತುವೆ ಮೇಲೆ ಪಾದಚಾರಿ ಮಾರ್ಗ ನಿರ್ಮಾಣ ಮಾಡುವುದು ಅಥವಾ ಹಳೆಯ ವಿಮಾನ ನಿಲ್ದಾಣದ ರಸ್ತೆಗೆ ಪಾದಚಾರಿ ಮೇಲ್ಸೇತುವೆ (ಸ್ಕೈವಾಕ್) ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ತಿಳಿಸಿದರು.

ಪಾದಚಾರಿ ಒತ್ತುವರಿ ತೆರವಿಗೆ ತಾಕೀತು: ಪಾದಚಾರಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ, ಒತ್ತುವರಿ ತೆರವುಗೊಳಿಸಲು ಸೂಚಿಸಿದರು.

ರಸ್ತೆ ಗುಂಡಿ ಮುಚ್ಚಿ: ರಸ್ತೆಯಲ್ಲಿ ಉಂಟಾಗಿರುವ ರಸ್ತೆ ಗುಂಡಿಗಳಿಂದ ಸಾರ್ವಜನಿಕ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಕೂಡಲೇ ಎಲ್ಲಾ ಗುಂಡಿಗಳನ್ನು ಮುಚ್ಚಲು ಸೂಚಿಸಿದರು.

ಅಪಾಯಕಾರಿ ಮರಗಳ ತೆರವು ಮಾಡಿ: ರಸ್ತೆಗೆ ಚಾಚಿಕೊಂಡಿರುವ, ಒಣಗಿದ ಅಪಾಯಕಾರಿ ಮರ ಹಾಗೂ ರೆಂಬೆ -ಕೊಂಬೆಗಳನ್ನು ಗುರುತಿಸಿ ಅವುಗಳನ್ನು ಸೂಚಿಸಿದರು.

3 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ: ಪೂರ್ವ ವಲಯ ವ್ಯಾಪ್ತಿಯ ಸೋನಿ ಸಿಗ್ನಲ್‌ನಿಂದ ದೊಮ್ಮಲೂರು ಮೇಲ್ಸೇತುವೆ ಮೂಲಕ ಕೋರಮಂಗಲದ ಗಣಪತಿ ಎನ್‌ಕ್ಲೇವ್ ವರೆಗೆ 3.00 ಕಿ.ಮೀ ಪಾದಚಾರಿ ಮಾರ್ಗ ಪರಿಶೀಲನೆ ನಡೆಸಿದ ಅವರು ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಸೇರಿದಂತೆ ದುರಸ್ತಿಯ ಅಗತ್ಯವಿರುವ ಜಾಗಗಳಲ್ಲಿ ದುರಸ್ತಿ ಕಾರ್ಯ, ಅನಧಿಕೃತ ಕೇಬಲ್ ಗಳ ತೆರವು, ಅನಧಿಕೃತ ಬ್ಯಾನರ್ ಗಳ ತೆರವು, ಮಳೆ ಬಂದಾಗ ರಸ್ತೆಗಳಲ್ಲಿ ನೀರು ನಿಲ್ಲುವ ಜಾಗಗಳಲ್ಲಿ ಸಮಸ್ಯೆಗೆ ಪರಿಹಾರ ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ವೇಳೆ ಜಂಟಿ ಆಯುಕ್ತರಾದ ಸರೋಜ, ಮುಖ್ಯ ಅಭಿಯಂತರರಾದ ಸುಗುಣ, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪೊಲೀಸ್ ಅಧಿಕಾರಿಗಳು, ಪಾಲಿಕೆ, ಬೆಸ್ಕಾಂ, ಜಲಮಂಡಳಿ ಅಧಿಕಾರಿಗಳು, ಸೇನಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರ ಎಲ್ಲ ಸಂಘಟನೆಯವರು ಒಂದಾಗಿ ನೌಕರರಿಗೆ ಸಮಾನ ವೇತನ ಕೊಡಿಸಲು ಮುಂದಾಗಿ: ನೌಕರನ ಮನವಿ ಮಹಾರಾಷ್ಟ್ರ ಮಾದರಿಯಲ್ಲಿ ರಾಜ್ಯ ಸರ್ಕಾರವು ಕಬ್ಬು ಬೇಸಾಯದಲ್ಲಿ ಎಐ ತಂತ್ರಜ್ಞಾನ ಜಾರಿಗೆ ತರಲಿ: ಕುರುಬೂರು ಶಾಂತಕುಮಾರ್ ಹುಚ್ಚಮ್ಮ ದೇವಿಯ 650 ಕುರಿಗಳ ಮೆರವಣಿಗೆ, 12 ಟನ್ ಮಟನ್ ಸಾರು: ಇತಿಹಾಸ ನಿರ್ಮಿಸಿದ ಲಕ್ಷಕ್ಕೂ ಹೆಚ್ಚು ಭಕ್ತರಿಗೆ ಅನ್ನ... KSRTC: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಮಾಡುತ್ತಿರುವ ಪಾದಯಾತ್ರೆಗೂ ಅಡ್ಡಿ ಮಾಡುತ್ತಿರುವ ಜಂಟಿ ಸಂಘಟನೆ... ಸಾವಿರಾರು ಜನರನ್ನು ಅವರ ಗಮ್ಯಸ್ಥಾನಕ್ಕೆ ತಲುಪಿಸಲು ಆರೋಗ್ಯ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ನೌಕರರು... ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್