CrimeNEWSನಮ್ಮರಾಜ್ಯ

ಲೈಂಗಿಕ ಕಿರುಕುಳ ನೀಡಿ ಓಡುತ್ತಿದ್ದವನ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:ತರಕಾರಿ ತರಲು ಮನೆಯಿಂದ ಹೊರ ಬಂದ ಯುವತಿಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಕಾಮುಕನ ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಹಿಡಿದ ಯುವತಿ ಪೊಲೀಸರಿಗೆ ಒಪ್ಪಿಸಿದ್ದು ಸದ್ಯ ಆತ ಈಗ ಕಂಬಿ ಎಣಿಸುತ್ತಿದ್ದಾನೆ.

ನಡೆದ ಘಟನೆ: ಏಪ್ರಿಲ್‌ 25ರಂದು ತರಕಾರಿ ತರುವ ಸಲುವಾಗಿ ಮನೆಯಿಂದ ಹೊರ ಬರುತ್ತಿದ್ದ ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕ ಆಕೆಗೆ ಲೈಂಗಿಕ ಕಿರುಕುಳ ನೀಡಿ ಓಡಿಹೋಗುತ್ತಿದ್ದ ಆದರೆ ಆತನನನ್ನು ಯುವತಿ ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

25 ವರ್ಷದ ಯುವತಿ ತರಕಾರಿ ತರಲು ಮನೆಯಿಂದ ಒಂಟಿಯಾಗಿ ಹೋಗುತ್ತಿದ್ದರು. ಆಗ ಆರೋಪಿ ಯುವಕ ಯುವತಿಯ ಬಳಿ ಬಂದು ಗುಪ್ತಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಈವೇಳೆ ರಕ್ಷಣೆ ಗಾಗಿ ಆಕೆ ಕೂಗಾಡಿದ್ದಾರೆ. ಅಷ್ಟರಲ್ಲಿ ಜನ ಕೇಳಿಸಿಕೊಂಡು ಸಹಾಯಕ್ಕೆ ಧಾವಿಸುತ್ತಿದ್ದನ್ನು ತಿಳಿದ ಆರೋಪಿ ಓಡಿಹೋಗಲು ಶುರುಮಾಡಿದ್ದಾನೆ. ಈ ವೇಳೆ ಆಕೆಯಿಂದ ಬಿಡಿಸಿಕೊಳ್ಳಲು ಆಕೆಯ ಕೈಯನ್ನು ಕಚ್ಚಿಬಿಡಿಸಿಕೊಂಡು ಓಡಿದ್ದಾನೆ. ಆದರೂ ಆತನ ಬೆನ್ನಟ್ಟಿದ ಯುವತಿ ತಾನೇ ಆರೋಪಿಯನ್ನು ಹಿಡಿದುಕೊಂಡು ಮುಖ್ಯರಸ್ತೆಗೆ ಎಳೆದು ತಂದಿದ್ದಾರೆ. ಅಷ್ಟರಲ್ಲೇ ಸ್ಥಳೀಯರು ರಕ್ಷಣೆಗೆ ಬಂದಿದ್ದಾರೆ. ನಂತರ ಸ್ಥಳೀಯರು ಆತನನ್ನು ಥಳಿಸಿದ್ದರು ಎಂದು ಪೊಲೀಸರು ತಿಳಿಸಿದರು.

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಕಾಟನ್‌ ಪೇಟೆಯ ಸಿದ್ದಾರ್ಥ ನಗರದ ನಿವಾಸಿ ಮುಹಮ್ಮದ್ ಫಯಾಝ್ (21) ಬಂಧಿತ ಆರೋಪಿಯಾಗಿದ್ದಾನೆ.

ಈತ ಪ್ಲಂಬರ್ ಕೆಲಸ ಮಾಡುತ್ತಿದ್ದ, ಅಲ್ಲದೇ ಸರ ಕಳವು ಪ್ರಕರಣದಲ್ಲೂ ಭಾಗಿಯಾಗಿದ್ದ. ಈತನ ವಿರುದ್ಧ ಕೆಂಗೇರಿ ಸೇರಿ ಹಲವು ಠಾಣೆಗಳಲ್ಲಿ ಹಲವು ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
LATEST
ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ