NEWSಆರೋಗ್ಯನಮ್ಮರಾಜ್ಯ

ಇಂದು ಸಂಜೆವೇಳೆಗೆ ರಾಜ್ಯದಲ್ಲಿ 11 ಕೊರೊನಾ ಹೊಸ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಇಂದು ರಾಜ್ಯದಲ್ಲಿ ಹೊಸದಾಗಿ 11 ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 534ಕ್ಕೆ ಏರಿಕೆಯಾಗಿದೆ. ಬೆಳಗ್ಗೆ 9 ಮಂದಿ ಸೋಂಕಿಗೆ ತುತ್ತಾಗಿದ್ದರು. ಇದೀಗ ಹೊಸದಾಗಿ 2 ಪ್ರಕರಣಗಳು ಮಾತ್ರ ಪತ್ತೆಯಾಗಿವೆ.

ಮೈಸೂರು, ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಒಂದೊಂದು ಪ್ರಕರಣಗಳು ಪತ್ತೆಯಾಗಿವೆ. ಇಂದು ಕಲಬುರಗಿಯಲ್ಲಿ ಒಟ್ಟಾರೆ 8 ಪ್ರಕರಣಗಳು ಪತ್ತೆಯಾಗಿವೆ. ದಾವಣಗೆರೆ ಇದುವರೆಗೂ ಗ್ರೀನ್‌ ಜೋನ್‌ಆಗಿತ್ತು. ಇಂದು ಒಂದು ಹೊಸ ಕೊರೊನಾ ಪ್ರಕರಣ ದೃಢಪಟ್ಟಿರುವುದರಿಂದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯದಲ್ಲಿ ಒಟ್ಟಾರೆ 534 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 216 ಮಂದಿ ಗುಣಮುಖರಾಗಿದ್ದಾರೆ. ಇನ್ನು 297 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ತುಮಕೂರಿನಲ್ಲಿ 74 ವರ್ಷದ ವೃದ್ಧರೊಬ್ಬರು ಕೊರೊನಾಗೆ ಬಲಿಯಾಗಿದ್ದು, ಅವರು ಸೇರಿದಂತೆ ಇದುವರೆಗೂ 21 ಮಂದಿ ಮೃತಪಟ್ಟಿದ್ದಾರೆ.

ಆದರೆ ಕಲಬುರಗಿಯಲ್ಲಿ ನಿನ್ನೆ 6 ಹೊಸ ಪ್ರಕರಣಗಳು ಪತ್ತೆಯಾಗಿದ್ದವು ಮತ್ತೆ ಇಂದು ಎಂಟು ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ ಕಲಬುರಗಿಯಲ್ಲಿ ತನ್ನ ರುದ್ರನರ್ತನವನ್ನು ಕೊರೊನಾ ವೈರಸ್‌ ಮುಂದುವರಿಸಿದೆ. ಈ ನಡುವೆ ಬೆಂಗಳೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

ಇನ್ನು ಬೀದರ್‌, ವಿಜಯಪುರದಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿಲ್ಲ. ಇನ್ನು ದೇಶದಲ್ಲಿ ಕೊರೊನಾ ಪೀಡಿದರ ಸಂಖ್ಯೆ 30 ಸಾವಿರ ಗಡಿ ದಾಟಿದ್ದು, ಒಂದೆಡೆ ಜನರಲ್ಲಿ ಆತಂಕ ಸೃಷ್ಟಿಸಿದೆ.

ದೇಶದಲ್ಲಿ 31,334 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 31,334 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,007 ಮಂದಿ ಮೃತಪಟ್ಟಿದ್ದಾರೆ. 7,696 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 31,40,285  ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,18,028 ಜನರು ಮೃತಪಟ್ಟಿದ್ದಾರೆ. 9,59,630 ಮಂದಿ ರೋಗದಿಂದ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ NWKRTC: ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್‌- ಚಾಲನಾ ಸಿಬ್ಬಂದಿಗಳಿಗೆ ಗಾಯ ನಿರುದ್ಯೋಗಿ ಯುವಕ - ಯುವತಿಯರಿಗೆ ಮಾತ್ರ: PM ಇಂಟರ್ನ್​ಶಿಪ್ಪ್‌ಗೆ ಅರ್ಜಿ ಹಾಕಿ -ಪ್ರತಿ ತಿಂಗಳು ₹5000 ಭತ್ಯೆ ಪಡೆಯಿರ... KSRTC ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ಧ, ನಾವು ದಿನಾಂಕ ಘೋಷಣೆ ಮಾಡುತ್ತೇವೆ -ಸರ್ಕಾರಕ್ಕೆ ಜಂಟಿ ಕ್ರಿಯಾ ಸಮಿತಿ ಎಚ್... KSRTC: ಮೊಬೈಲ್‌ನಲ್ಲಿ ಮಾತನಾಡಿಕೊಂಡು ಬಸ್‌ ಚಾಲನೆ - ಚಾಲಕನ ನಿರ್ಲಕ್ಷ್ಯಕ್ಕೆ ಕಿಡಿ KSRTC ಕೋಲಾರ: ನೌಕರರ ಪರ ನಿಲ್ಲಬೇಕಾದ ಕಾರ್ಮಿಕ ಕಲ್ಯಾಣ ಅಧಿಕಾರಿಯೇ ವಿರುದ್ಧ ನಿಂತರೆ ಎಲ್ಲಿ ಸಿಗಲಿದೆ ನ್ಯಾಯ?