NEWSಕೃಷಿನಮ್ಮಜಿಲ್ಲೆ

ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್‌ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ

ವಿಜಯಪಥ ಸಮಗ್ರ ಸುದ್ದಿ
  • ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ

ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ ಮೂಲಕ ಪರಿಸರ ಸಂರಕ್ಷಣೆಗೆ ನಾವೆಲ್ಲರೂ ಮುಂದಾಗಬೇಕಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

ನೆಲಮಂಗಲ ಬಳಿಯ ಕ್ಷೇಮವನದಲ್ಲಿಂದು ವಿಶ್ವ ಪರಿಸರ ದಿನದ ಅಂಗವಾಗಿ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಇಂದು ಜಗತ್ತಿನಾದ್ಯಂತ ಹಲವು ಸಭೆ, ಚರ್ಚಾಗೋಷ್ಠಿಗಳು ನಡೆಯುತ್ತಿದ್ದು, ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆಯ ಬಗ್ಗೆ ಚಿಂತನ ಮಂಥನ ನಡೆಯುತ್ತಿದೆ. ಅಲ್ಲೆಲ್ಲಾ ವ್ಯಕ್ತವಾಗುವ ಪರಿಹಾರ ಮರ ಬೆಳೆಸುವುದು ಎಂದು ಎಲ್ಲರೂ ಅಭಿಪ್ರಾಯಪಟ್ಟಿದ್ದಾರೆ ಎಂದರು.

ಪ್ರಕೃತಿ ನಮಗೆ ನೀಡಿರುವ ನೈಸರ್ಗಿಕ ಸಂಪನ್ಮೂಲವನ್ನು ವಿವೇಚನಾತ್ಮಕವಾಗಿ ಮತ್ತು ಹಿತಮಿತವಾಗಿ ಬಳಸಿದರೆ ಮಾತ್ರ ಮನುಷ್ಯ ಉಳಿಯಲು ಸಾಧ್ಯ ಎಂದ ಅವರು, ಜೀವನವೂ ಇರಬೇಕು, ಜೀವನೋಪಾಯವೂ ಇರಬೇಕು, ಅದೇ ರೀತಿ ಸುಸ್ಥಿರ ಅಭಿವೃದ್ಧಿಯೂ ಆಗಬೇಕು, ಪ್ರಕೃತಿಯೂ ಉಳಿಯಬೇಕು. ಆ ರೀತಿ ನಾವು ಬದುಕುವುದನ್ನು ಕಲಿಯಬೇಕು ಎಂದರು.

ಬೆಂಗಳೂರು ಒಂದು ಕಾಲದಲ್ಲಿ ಉದ್ಯಾನ ನಗರಿ ಆಗಿತ್ತು, ನಿವೃತ್ತರ ಸ್ವರ್ಗವಾಗಿತ್ತು. ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ನೀರಿನ ಸಮಸ್ಯೆ ಎದುರಾಗುತ್ತಿದೆ. ಉಸಿರಾಡುವ ಗಾಳಿಯೂ ವಿಷವಾಗುತ್ತದೆ. ಒಂದೂವರೆ ಕೋಟಿಗೂ ಹೆಚ್ಚು ವಾಹನಗಳಿದ್ದು ಅವುಗಳಿಂದ ಹೊರಹೊಮ್ಮುವ ಇಂಗಾಲದ ಡೈ ಆಕ್ಸೈಡ್ ನಿಂದ ತಾಪಮಾನ ಏರಿಕೆ ಆಗುತ್ತಿದೆ. ಹೀಗಾಗಿ ಪ್ರಕೃತಿ ಪರಿಸರ ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸುಧೀಂದ್ರ ಮಾತನಾಡಿ ಇಲ್ಲಿ ನೆಡಲಾಗುತ್ತಿರುವ ಪ್ರತಿಯೊಂದು ಸಸಿಯೂ ಬೆಳೆದು ಮರವಾಗುವಂತೆ ನೋಡಿಕೊಳ್ಳುವ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು, ಇದೇ ರೀತಿ ಎಲ್ಲರೂ ಗಮನ ಹರಿಸಿದರೆ ಹಸಿರು ರಾಜ್ಯದ ಕನಸು ನನಸಾಗುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಶಿವ ಶಂಕರ್, ಪ್ರಕೃತಿ ಪೌಂಡೇಶನ್ ಸ್ಥಾಪಕರಾದ ಲೋಕೇಶ್ ಗೌಡ, ಪ್ರಕೃತಿ ಪ್ರಸನ್ನ, ಡಿ.ಎಫ್.ಒ ಲೋಹಿತ್ ಹಾಗೂ ಸ್ಥಳೀಯ ಪ್ರತಿನಿಧಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ