NEWSಕೃಷಿನಮ್ಮರಾಜ್ಯ

ಮಾವಿನ ಬೆಂಬಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್‌.ಮುನಿಯಪ್ಪ ಒತ್ತಾಯಿಸಿದ್ದಾರೆ.

ಇಂದು ನಡೆದ ಸಚಿವ ಸಂಪುಟದ ಸಭೆಯಲ್ಲಿ, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಾವಿನ ಹಣ್ಣಿಗೆ ಏಷ್ಯಾ ಖಂಡದಲ್ಲೇ ಅತಿ ಹೆಚ್ಚು ಪ್ರಸಿದ್ದಿಯಾಗಿದ್ದು ರೈತರು ನಿರ್ದಿಷ್ಟ ಬೆಲೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಈಗಾಗಲೇ ನೆರೆಯ ಆಂಧ್ರ ಪ್ರದೇಶ ಸರ್ಕಾರವು ನಮ್ಮ ತೋತಾಪುರಿ ಮಾವಿನ ಹಣ್ಣಿನ ಮಾರಾಟಕ್ಕೆ ನಿರ್ಬಂಧವಿದಿಸಿದ್ದು ಮಾವಿಗೆ ಬೆಲೆ ಇಲ್ಲದೆ ರೈತರು ಕಂಗಾಲಾಗಿದ್ದಾರೆ ಎಂದರು.

ಇನ್ನು ಈಗಾಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ. ಇತ್ತ ನಮ್ಮ ಸರ್ಕಾರವು ರೈತರ ಪರವಾಗಿದ್ದು ರೈತರು ಬೆಳೆದ ಬೆಳೆಗೆ ಸಹಕಾರಿಯಾಗಲು ಬೆಂಬೆಲ ಬೆಲೆ ನಿಗದಿಪಡಿಸಲು ಮುಖ್ಯಮಂತ್ರಿಗಳು ಮನಸ್ಸು ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್, ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ.ಸುಧಾಕರ್ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಧ್ವನಿಗೂಡಿಸಿದರು.

Megha
the authorMegha

Leave a Reply

error: Content is protected !!
Latest news
ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮೆ ಆಗದಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಗ್ಯಾರಂಟಿ ಯೋಜನೆ ಅಧ್ಯಕ್ಷ ತಾಕೀತು