NEWSನಮ್ಮರಾಜ್ಯ

ಏ.30- ಸಂಜೆವೇಳೆಗೆ 30 ಕೊರೊನಾ ಸೋಂಕಿತರು ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿಇಂದು  ಬೆಳಗ್ಗೆ  22 ಕೊರೊನಾ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗಿದ್ದವು. ಆದರೆ ಸಂಜೆ ವೇಳೆಗೆ ಮತ್ತೆ 8 ಹೊಸ ಪ್ರಕರಣಗಳು  ಪತ್ತೆಯಾಗುವ  ಮೂಲಕ ಸೋಂಕಿತರ ಸಂಖ್ಯೆ 565ಕ್ಕೆ ಏರಿಕೆಯಾಗಿದೆ.  ಇವುಗಳಲ್ಲಿ 21 ಜನರು ಮೃತಪಟ್ಟಿದ್ದು, 223 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ.

ಬೆಳಗಾವಿಯಲ್ಲಿ ಅತಿ ಹೆಚ್ಚು ಅಂದರೆ 14 ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಸಂಜೆ ವೇಳೆಗೆ ಏಳು ಹೊಸ ಕೊರೊನಾ ಪಾಸಿಟಿವ್‌ ಪ್ರಕರಣ ಪತ್ತೆಯಾಗುವ  ಮೂಲಕ ಇಂದು 10 ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ವಿಜಯಪುರದಲ್ಲಿ ಎರಡು,  ದಾವಣಗೆರೆಯಲ್ಲಿ ಒಂದು,  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು, ತುಮಕೂರಿನಲ್ಲಿ ಒಂದು  ಮತ್ತು ಕಲಬುರಗಿಯಲ್ಲಿ ಒಂದು ಹೊಸ ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದೆ.

ನಿನ್ನೆ ವರೆಗೂ ಗ್ರೀನ್‌ ಜೋನ್‌ಆಗಿದ್ದ ದಾವಣಗೆರೆಯಲ್ಲಿ ಇಂದಿನವರೆಗೆ ನಾಲ್ಕು  ಹೊಸ ಕೊರೊನಾ ಪ್ರಕರಣ ದೃಢಪಟ್ಟಿರುವುದರಿಂದ ಇಲ್ಲಿನ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯದಲ್ಲಿ ಒಟ್ಟಾರೆ 565 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು ಈ ಪೈಕಿ 223 ಮಂದಿ ಗುಣಮುಖರಾಗಿದ್ದಾರೆ. ಇನ್ನು 320  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇದುವರೆಗೂ 21 ಮಂದಿ ಮೃತಪಟ್ಟಿದ್ದಾರೆ. ಆದರೆ ಬೆಳಗಾವಿಯಲ್ಲಿ 14 ಹೊಸ ಪ್ರಕರಣಗಳು ಪತ್ತೆಯಾಗುವ ಮೂಲಕ  ತನ್ನ ರುದ್ರನರ್ತನವನ್ನು ಕೊರೊನಾ ವೈರಸ್‌ ಮುಂದುವರಿಸಿದೆ. ಈ ನಡುವೆ ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ ಪ್ರಕರಣ ವರದಿಯಾಗಿಲ್ಲ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ