ನ್ಯೂಡೆಲ್ಲಿ: ಜಗತ್ತಿನ ಅನೇಕ ಕ್ಷೇತ್ರಗಳಲ್ಲಿ ಒತ್ತಡದ ಪರಿಸ್ಥಿತಿ ಎದುರಾಗಿ ಅಶಾಂತಿ ಮತ್ತು ಅಸ್ಥಿರತೆ, ಜಾಗತಿಕ ಸಂಘರ್ಷಕ್ಕೆ ಎಡೆಮಾಡಿಕೊಡುತ್ತಿದೆ. ಇಂತಹ ಪ್ರಕ್ಷುಬ್ದ ಪರಿಸ್ಥಿತಿ ನಿವಾರಣೆ ಆಗಬೇಕು. ಯೋಗ ಒಂದೆ ಶಾಂತಿಯ ಮಾರ್ಗವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಶಾಖಪಟ್ಟಣದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನುದ್ದೇಶಿಸಿ ಮಾತನಾಡಿದ ಅವರು, ಯೋಗ ಪ್ರಾಚೀನ ಭಾರತೀಯ ಸಂಪ್ರದಾಯದ ಜಾಗತಿಕ ಜೀವನಶೈಲಿಯಾಗಿ ರೂಪಾಂತರಗೊಂಡಿದೆ. 11 ವರ್ಷಗಳಲ್ಲಿ ಯೋಗ ಪ್ರಪಂಚದಾದ್ಯಂತದ ಕೋಟ್ಯಂತರ ಜನರ ಜೀವನಶೈಲಿಯ ಭಾಗವಾಗಿದೆ ಎಂದರು.
ಜಾಗತಿಕ ಏಕತೆಯ ಕ್ಷಣ, ರಾಷ್ಟ್ರ ಭಾಷೆ ಮತ್ತು ಸಂಸ್ಕೃತಿಯ ಗಡಿ ಮೀರಿ ಪ್ರಪಂಚದಾದ್ಯಂತ ಲಕ್ಷಾಂತರ ಜನರು ಯೋಗವನ್ನು ತಮ್ಮ ದಿನಚರಿಯ ಭಾಗವಾಗಿ ಸ್ವೀಕರಿಸುತ್ತಿದ್ದಾರೆ. ಜಾಗತಿಕ ಅಶಾಂತಿಗೆ ಯೋಗ ಶಾಂತಿಯ ದಿಕ್ಕನ್ನು ತೋರಿಸುತ್ತದೆ, ಜಗತ್ತನ್ನು ಒಂದುಗೂಡಿಸುವ ಶಕ್ತಿ ಯೋಗಕ್ಕಿದೆ ಎಂದು ಹೇಳಿದರು.
ಇನ್ನು ಇಡೀ ಜಗತ್ತು ಯೋಗ ಮಾಡುತ್ತಿದೆ. ಯೋಗ ಎಂದರೆ ಸೇರಿಸುವುದು ಎಂದರ್ಥ ಮತ್ತು ಯೋಗ ಇಡೀ ಜಗತ್ತನ್ನು ಹೇಗೆ ಸಂಪರ್ಕಿಸಿದೆ ಎಂಬುದನ್ನು ನೋಡುವುದು ಸಂತೋಷವಾಗಿದೆ. ಈ ವರ್ಷದ ’ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಧ್ಯೇಯವಾಕ್ಯ ಎಲ್ಲ ಜೀವಿಗಳು ಮತ್ತು ಗ್ರಹದ ನಡುವಿನ ಪರಸ್ಪರ ಸಂಬಂಧ ಎತ್ತಿ ತೋರಿಸುತ್ತದೆ . “ಭೂಮಿಯ ಮೇಲಿನ ಪ್ರತಿಯೊಂದು ಅಸ್ತಿತ್ವದ ಆರೋಗ್ಯಕ್ಕೆ ಯೋಗ ಪೂರಕವಾಗಿದೆ ಎಂದರು.
ಮಾನವನ ಯೋಗಕ್ಷೇಮ, ಮಣ್ಣಿನ ಆರೋಗ್ಯ, ನೀರು ನೀಡುವ ನದಿಗಳು, ಪರಿಸರ ವ್ಯವಸ್ಥೆಗಳನ್ನು ಹಂಚಿಕೊಳ್ಳುವ ಪ್ರಾಣಿಗಳ ಆರೋಗ್ಯ ಮತ್ತು ನಮ್ಮನ್ನು ಪೋಷಿಸುವ ಸಸ್ಯಗಳ ಆರೋಗ್ಯವನ್ನು ಅವಲಂಬಿಸಿರುತ್ತದೆ. ಯೋಗ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಸುಧಾರಿಸುವುದಲ್ಲದೆ, ಪರಿಸರ ಮತ್ತು ಪರಿಸರ ಸಮತೋಲನದ ಅರಿವನ್ನು ಹೆಚ್ಚಿಸುತ್ತದೆ. ಯೋಗ ಈ ಪರಸ್ಪರ ಸಂಬಂಧಕ್ಕೆ ನಮ್ಮನ್ನು ಜಾಗೃತಗೊಳಿಸುತ್ತದೆ ನಾವು ಪ್ರತ್ಯೇಕ ವ್ಯಕ್ತಿಗಳಲ್ಲ, ಬದಲಾಗಿ ಪ್ರಕೃತಿಯ ಭಾಗ ಎಂದರು.
ಯೋಗ ದಿನ ಸ್ಮರಿಸಲು ಭಾರತದಾದ್ಯಂತ ಮತ್ತು ಪ್ರಪಂಚದಾದ್ಯಂತದ ಹಲವಾರು ದೇಶಗಳಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು, ಕಾರ್ಯಾಗಾರಗಳು ಮತ್ತು ಸಾಮೂಹಿಕ ಯೋಗ ಕಾರ್ಯಕ್ರಮ ಆಯೋಜಿಸುತ್ತಿವೆ.ಇದು ಯೋಗಕ್ಷೇಮ ಮತ್ತು ಸಾಮೂಹಿಕ ಸಾಮರಸ್ಯದ ವಿಷಯ. ಭಾರತದ ಪ್ರಸ್ತಾವನೆಯ ಮೇರೆಗೆ, 175 ದಶಗಳು 2014ರಲ್ಲಿ ವಿಶ್ವಸಂಸ್ಥೆ ಒಪ್ಪಿಕೊಂಡ ನಂತರ, ಜೂನ್ 21ರಂದು ವಾರ್ಷಿಕವಾಗಿ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಜಾಗತಿಕ ಯೋಗ ಆಂದೋಲನದಲ್ಲಿ ಹೊಸ ಅಧ್ಯಾಯ ಆರಂಭಿಸಲು ಕರೆ ನೀಡಿದ ಪ್ರಧಾನಿ ಮೋದಿ, ಆಂತರಿಕ ಶಾಂತಿ ಜಾಗತಿಕ ನೀತಿಯಾಗುವ “ಮಾನವೀಯತೆಗಾಗಿ ಯೋಗ 2.0” ಅನ್ನು ಜಗತ್ತಿಗೆ ಪರಿಚಯಿಸುತ್ತದೆ. “ಯೋಗ ಗಡಿಗಳು, ಹಿನ್ನೆಲೆಗಳು, ವಯಸ್ಸು ಅಥವಾ ಸಾಮರ್ಥ್ಯವನ್ನು ಮೀರಿ ಎಲ್ಲರಿಗೂ ಆಗಿದೆ” ಎಂದು ಅವರು ದೃಢಪಡಿಸಿದ್ದಾರೆ.
ಬ್ರೈಲ್ ಲಿಪಿಯಲ್ಲಿ ಯೋಗ ಶಾಸ್ತ್ರಗಳನ್ನು ಕಲಿಯುತ್ತಿರುವ ವಿಕಲಚೇತನ ವ್ಯಕ್ತಿಗಳು, ಬಾಹ್ಯಾಕಾಶದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ವಿಜ್ಞಾನಿಗಳು ಮತ್ತು ಹಳ್ಳಿಗಳಲ್ಲಿ ಯೋಗ ಒಲಿಂಪಿಯಾಡ್‌ಗಳಲ್ಲಿ ಭಾಗವಹಿಸುತ್ತಿರುವ ಯುವಕರನ್ನು ನೋಡಿದರೆ ಹೆಮ್ಮೆಯಾಗುತ್ತಿದೆ. “ನೌಕಾಪಡೆಯ ಎಲ್ಲಾ ಹಡಗುಗಳಲ್ಲಿ ಅತ್ಯುತ್ತಮ ಯೋಗ ಕಾರ್ಯಕ್ರಮವನ್ನು ಪ್ರದರ್ಶಿಸಲಾಗುತ್ತಿದೆ ಎಂದು ತಿಳಿಸಿದರು.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...