NEWSದೇಶ-ವಿದೇಶ

ಅಮೆರಿಕಾದಲ್ಲಿ ಯವನ ಅಟ್ಟಹಾಸ ಒಂದೇದಿನ 1,883 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್‌ಟನ್‌: ಕೊರೊನಾ ಸೋಂಕು ಹೊಡೆತಕ್ಕೆ ನಲುಗಿ ಹೋಗಿರುವ ಅಮೆರಿಕದಲ್ಲಿ ಕಳೆದ 24 ತಾಸಿನಲ್ಲಿ 1,883 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ಸಾವನ್ನಪ್ಪಿದವರ ಸಂಖ್ಯೆ 65 ಸಾವಿರ ಸಮೀಪಿಸಿದೆ.

ಜಾನ್‌ ಹಾಪ್ಕಿನ್ಸ್‌ ವಿವಿ ಮಾಹಿತಿ ಪ್ರಕಾರ, ಅಮೆರಿಕಾದ್ಯಂತ ಕೊರೊನಾ ಸೋಂಕಿತರ ಸಂಕ್ಯೆ 11,03,115ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟಾರೆ 64,820ಮಂದಿ ಮೃತಪಟ್ಟಿದ್ದಾರೆ. ಸೋಂಕಿನಿಂದಾಗಿ ಒಂದೇದಿನ ಅತಿ ಹೆಚ್ಚು ಮೃತಪಟ್ಟಿರುವ ದೇಶಗಳಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದೆ. ಇನ್ನು ಮೆಕ್ಸಿಕೊದಲ್ಲಿ 1.517 ಹೊಸ ಪ್ರಕರಣಗಳು ದೃಢಪಟ್ಟಿದ್ದು, 116ಮಂದಿ ಅಸುನೀಗಿದ್ದಾರೆ. ಇಲ್ಲಿ ಈವರೆಗೆ 20,741ಮಂದಿಗೆ ಸೋಂಕು ತಗುಲಿದ್ದು, 1,976ಮಂದಿ ಮೃತಪಟ್ಟಿದ್ದಾರೆ.

ವಿಶ್ವಾದ್ಯಂತ ಈವರೆಗೆ 33,41,350 ಜನರಿಗೆ ಸೋಂಕು ತಗುಲಿದೆ. 2,38,400 ಜನ ಅಸುನೀಗಿದ್ದಾರೆ. 10,51,900ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಸ್ಪೇನ್‌ನಲ್ಲಿ 2,13,438, ಇಟಲಿ, 2,07,432 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಈ ಎರಡೂ ದೇಶಗಳಲ್ಲಿ ಅನುಕ್ರಮವಾಗಿ 24,546 ಮತ್ತು 28,241 ಮಂದಿ ಮೃತಪಟ್ಟಿದ್ದಾರೆ.

ಸೋಂಕು ಮೊದಲಿ ಕಾಣಿಸಿಕೊಂಡ ಚೀನಾದಲ್ಲಿ ಇದುವರೆಗೆ 84 ಸಾವಿರ ಜನರಲ್ಲಿ ಸೋಂಕು ಪತ್ತೆಯಾಗಿದೆ. 4651 ಜನ ಸಾವನ್ನಪ್ಪಿದ್ದಾರೆ. 78 ಸಾವಿರಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ ಎಂದು ಹೇಳಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ