NEWSಆರೋಗ್ಯ

ಪಡಿತರ ಕಾರ್ಡುದಾರರಿಗೆ ಅಕ್ಕಿಯ ಜತೆ ತೊಗರಿಬೇಳೆ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ: ಕೋವಿಡ್-2019ರ ಕೋರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಜಿಲ್ಲೆಯು “ಲಾಕ್‍ಡೌನ್” ಇರುವುದರಿಂದ ಜಿಲ್ಲೆಯ ಎಲ್ಲ ಎಎವೈ ಮತ್ತು ಬಿಪಿಎಲ್ ಮತ್ತು ಎಪಿಎಲ್ (Non-Willingness)ಪಡಿತರ ಚೀಟಿದಾರರಿಗೆ ಹಾಗೂ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಕೋರಿ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದವರಿಗೆ ಕೇಂದ್ರ ಸರಕಾರದಿಂದ “ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ”ಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು “ಮೇ-2020” ನೇ ಮಾಹೆಯಲ್ಲಿ 01 ನೇ ತಾರೀಕಿನಿಂದ ಜಿಲ್ಲೆಯ ಎಲ್ಲ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ತಿಳಿಸಿದ್ದಾರೆ.

ಅಂತ್ಯೋದಯ ಅನ್ನ ಕಾರ್ಡುದಾರರಿಗೆ ಉಚಿತವಾಗಿ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.  ಬಿಪಿಎಲ್ ಪಡಿತರ ಪಡಿತರ ಪ್ರತಿ ಯುನಿಟ್‍ಗೆ 10 ಕೆ.ಜಿ. ಅಕ್ಕಿ ಹಾಗೂ ಪ್ರತಿ ಪಡಿತರ ಚೀಟಿಗೆ  ಒಂದು ಕೆ.ಜಿ. ತೊಗರಿಬೇಳೆ ನೀಡಲಾಗುವುದು.

ಎ.ಪಿ.ಎಲ್   (Non-Willingness) ಏಕ ಸದಸ್ಯ ಪ.ಚೀಟಿಗೆ 05 ಕೆಜಿ ಅಕ್ಕಿ  ಮತ್ತು 2 ಮತ್ತು 02ಕ್ಕಿಂತ ಹೆಚ್ಚಿನ ಸದಸ್ಯರ ಪಡಿತರ ಚೀಟಿಗೆ 10 ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು. ಹೊಸದಾಗಿ ಬಿಪಿಎಲ್  ಕಾರ್ಡಿಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ ಉಚಿತವಾಗಿ ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿ, ಹೊಸದಾಗಿ ಎಪಿಎಲ್ ಕಾರ್ಡ್‍ಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳಿಗೆ  ಪ್ರತಿ ಅರ್ಜಿಗೆ 10 ಕೆ.ಜಿ. ಅಕ್ಕಿಯನ್ನು ಪ್ರತಿ ಕೆಜಿ.ಗೆ 15 ರೂ.ಗಳಂತೆ ನೀಡಲಾಗುವುದು.

(Portability) ಅಂತರ್‍ರಾಜ್ಯ/ಅಂತರ್‍ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ  ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ನ್ಯಾಯಬೆಲೆ ಅಂಗಡಿಯಲ್ಲಿ ಮೇಲ್ಕಾಣಿಸಿದ ವರ್ಗದ ಪಡಿತರ ಚೀಟಿದಾರರಿಗೆ ಆಹಾರಧಾನ್ಯವನ್ನು ಓ.ಟಿ.ಪಿ. ಮುಖಾಂತರವೇ ವಿತರಿಸಲಾಗುತ್ತದೆ ಮತ್ತು ಜಿಲ್ಲೆಯ ಎಲ್ಲ ಪಡಿತರ ಚೀಟಿದಾರರು ಕೋವಿಡ್-2019ರ ನಿಯಮಗಳ ಪ್ರಕಾರ ಮಾಸ್ಕ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಆಹಾರಧಾನ್ಯವನ್ನು ಪಡೆಯಲು ತಿಳಿಸಲಾಗಿದೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ