NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್‌ ಮುಖಂಡ, ವಕೀಲ ಶಂಕರೇಗೌಡ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್‌ ಮುಖಂಡರು ಆಗ್ರಹಿಸಿದ್ದಾರೆ.

ಜಿಲ್ಲೆಯ ತಿ.ನರಸೀಪುರ ತಾಲೂಕಿನ ನಿವಾಸಿ ಜೆಡಿಎಸ್‌ ಮುಖಂಡರಾದ ವಕೀಲ ಶಂಕರೇಗೌಡ ಸಾರಿಗೆ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿ ಈ ಬಗ್ಗೆ ಸಿಎಂ ಅವರಿಗೆ ಒತ್ತಾಯ ಮಾಡಿದ್ದಾರೆ.

ಇದು ಸಾರಿಗೆ ನೌಕರರು ಕಳೆದ 2020ರಿಂದ ಈವರೆಗೂ  ವೇತನ ಹೆಚ್ಚಳವಿಲ್ಲದೆ, ಇನ್ನು ಹೆಚ್ಚಳವಾದ ಶೇ.15ರಷ್ಟು ವೇತನದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ಪಡೆಯದೆ ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು 18 ತಿಂಗಳುಗಳು ಕಳೆದರೂ ಮಾಡದೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಹೀಗೆ ಆದರೆ ನೌಕರರು ಜೀವನ ಸಾಗಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಈ ಬಗ್ಗೆ ಕಾಳಜಿ ವಹಿಸಿ ಹಗಲಿರುಳೆನ್ನದೆ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುವ ಸಾರಿಗೆ ನೌಕರರಿಗೆ ಸಿಗಬೇಕಿರುವ ನ್ಯಾಯಯುತ ಸೌಲಭ್ಯಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂಗೆ ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಜತೆಗೆ ಅಧಿವೇಶನದಲ್ಲೂ ಈ ಬಗ್ಗೆ ಸಿಎಂ ಹಾಗೂ ಸಾರಿಗೆ ಸಚಿವರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ನೌಕರರ ಬಗ್ಗೆ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾರಿಗೆ ನೌಕರರು ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದ ಸರ್ಕಾರದ ಯಶಸ್ಸಿಗೆ ಕಾರಣರಾಗಿದ್ದಾರೆ. ಆದರೆ, ವೇತನ ಹೆಚ್ಚಿಸುವಲ್ಲಿ ಸರ್ಕಾರ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಹಲವಾರು ಬಾರಿ ನೌಕರರ ಪರ ಸಂಘಟನೆಗಳು, ರಾಜಕಾರಣಿಗಳು, ಶಾಸಕರು ಸಂಸದರೂ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಜಿಪಂ, ತಾಪಂ ಸದಸ್ಯರು ಹಾಗೂ ಅಧ್ಯಕ್ಷರು ಸೇರಿದಂತೆ ವಿಪಕ್ಷದ ನಾಯಕರು ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಿ ಎಂದು ಒತ್ತಾಯ ಮಾಡಿದರೂ ಕೂಡ ತಾವು ಕಾಳಜಿ ವಹಿಸಿಲ್ಲದಿರುವುದು ಬಾರಿ ನೋವಿನ ಸಂಗತಿ ಎಂದು ಅಸಮಾಧಾನ ವ್ಯಾಕ್ತಪಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ