NEWS

ದೇಶದಲ್ಲಿ ಕೊರೊನಾ ರಣಕೇಕೆ, 40 ಸಾವಿರ ಸಮೀಪದಲ್ಲಿ ಸೋಂಕಿತರ ಸಂಖ್ಯೆ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಚೀನಾದಲ್ಲಿ ಹುಟ್ಟಿ ಇದೀಗ ಇಡೀ ವಿಶ್ವಕ್ಕೇ ಕಂಟಕವಾಗಿ ಪರಿಣಮಿಸಿರುವ ಕೊರೊನಾ ಭಾರತದಲ್ಲಿಯೂ ರಣಕೇಕೆ ಹಾಕುತ್ತಿದೆ.

ಈ ವಿಶ್ವಮಹಾಮಾರಿಗೆ ಇಲ್ಲಿಯವರೆಗೂ 1,218 ಮಂದಿ ಬಲಿಯಾಗಿದ್ದು, 37,336 ಮಂದಿ ಸೋಂಕಿಗೊಳಗಾಗಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

37,336 ಮಂದಿ ಸೋಂಕಿತರ ಪೈಕಿ ಈ ವರೆಗೂ 9,950 ಮಂದಿ ಗುಣಮುಖರಾಗಿದ್ದು, ಪ್ರಸ್ತುತ ದೇಶದಲ್ಲಿ ಇನ್ನೂ 26,167 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೊರೊನಾ ಮಟ್ಟಹಾಕಲು ಈ ಹಿಂದೆ ಕೇಂದ್ರ ಸರ್ಕಾರ 21 ದಿನಗಳ ಕಾಲ ದೇಶದಾದ್ಯಂತ ಲಾಕ್’ಡೌನ್’ಗೆ ಆದೇಶ ನೀಡಿತ್ತು. ಲಾಕ್’ಡೌನ್ ನಡುವಲ್ಲೂ ಈ ಹೆಮ್ಮಾರಿ ತನ್ನ ಆರ್ಭಟ ಮುಂದುವರಿಸಿದೆ. ಇದರಿಂದ ಮತ್ತೆ  ಕೇಂದ್ರ ಸರ್ಕಾರ 14 ದಿನಗಳಿಗೆ ಲಾಕ್’ಡೌನ್ ವಿಸ್ತರಣೆ ಮಾಡಿದೆ. ಆದರೆ, ಕೊರೊನಾ ವಿರುದ್ದದ ಹೋರಾಟದ ಜೊತೆಗೇ ಆರ್ಥಿಕ ಚಟುವಟಿಕೆಗಳನ್ನೂ ಹಂತಹಂತವಾಗಿ ಆರಂಭಿಸುವ ಉದ್ದೇಶದೊಂದಿಗೆ ಕೇಂದ್ರ ಸರ್ಕಾರ ಹೆಚ್ಚಿನ ವಿನಾಯಿತಿಗಳನ್ನು ಪ್ರಕಟಿಸಿದೆ.

ಇದು ದೇಶದ ಜನತೆಗೆ ಮಾರಕವಾಗುವುದೋ ಅಥವಾ ವರವಾಗುವುದೋ ಎಂದು  ಸದ್ಯ ಇರುವ ಕುತೂಹಲವಾಗಿದೆ. ಈ ನಡುವೆ ಆತಂಕವು ನಾಗರಿಕರ ಮನದಲ್ಲಿ ಮನೆಮಾಡಿದೆ. ಅದು ಏನೇಆಗಲಿ ಈ ಮಹಾಮಾರಿಗೆ ಕಡಿವಾಣಹಾಕುವ ಮೂಲಕ ದೇಶದ ಜನರು ನಿಟ್ಟುಸಿರು ಬಿಡುವಂತಾಗಬೇಕು.

Leave a Reply

error: Content is protected !!
LATEST
ಡಿ.9ರಿಂದ ವಿಧಾನಮಂಡಳ ಅಧಿವೇಶನ, ಉಕ ಪ್ರಗತಿಗೆ ಒತ್ತು: ಸ್ಪೀಕರ್ ಖಾದರ್ ವಿವಿಧ ಬೇಡಿಕೆಗಳ  ಈಡೇರಿಸಿ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ: ಅಧಿಕಾರಿಗಳ ವಿರುದ್ಧ ಆಕ್ರೋಶ ಸರ್ಕಾರದ ತಾತ್ಸಾರದಿಂದಾಗಿ ಆರ್ಥಿಕವಾಗಿ ಸಬಲವಾಗಿದ್ದರೂ ಸಂಕಷ್ಟದ ಪರಿಸ್ಥಿತಿ ತಲುಪಿದ KSRTC ಸಾರಿಗೆ ನಿಗಮಗಳು! KSRTC ಚಾಲನಾ ಸಿಬ್ಬಂದಿ ಕಾರ್ಮಿಕರಲ್ಲ ನೌಕರರು - ಹುದ್ದೆ ಅರಿವಿಲ್ಲದವರು ಕಾರ್ಮಿಕ ಪದ ಬಳಸುತ್ತಿದ್ದಾರೆ..! ಸಾರಿಗೆ ಸಿಬ್ಬಂದಿಗಳಿಗೆ ಮೋಸ ಮಾಡಿರುವ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗರ ತರಾಟೆಗೆ ತೆಗೆದುಕೊಂಡ ರಾಮಲಿಂಗಾರೆಡ್ಡಿ ನ.27 "ನಿಧಿ ಆಪ್ಕೆ ನಿಕಟ್" ಇಪಿಎಸ್ ಪಿಂಚಣಿದಾರರ ಪ್ರತಿಭಟನೆ ಬೆಂಗ್ರಾ: ವಿವೇಕಾನಂದರ ಜನ್ಮ ದಿನ ಅಂಗವಾಗಿ ನ.30ರಂದು ಯುವ ಜನೋತ್ಸವ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲೇ ಸರಿ ಸಮಾನ ವೇತನ ಘೋಷಣೆ ಮಾಡಿದೆ: ಸರ್ಕಾರ ಕೊಡಲು ಸಿದ್ಧವಿದ್ದರೂ ಕ್ರಿಯಾ ಸಮಿತಿ ಕ್... ಸರಿಸಮಾನ ವೇತನದ ನಿರ್ಧಾರ: ನಮಗೆ ಸಾರಿಗೆ ಸಚಿವರು ಕೊಟ್ಟ ಭರವಸೆ ಶೀಘ್ರ ಈಡೇರಲಿದೆ ಎಂದ ಅಧಿಕಾರಿ, ಮೇಲ್ವಿಚಾರಕರ ಮುಖಂಡ... KSRTC: ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ - ಎಂಡಿಗೆ ಮನವಿ