NEWSದೇಶ-ವಿದೇಶ

ವಲಸೆ ಕಾರ್ಮಿಕರ ಕುರಿತು ಒಡಿಶಾ ಸಿಎಂ ಜತೆ ಮುಖ್ಯಮಂತ್ರಿ ಬಿಎಸ್ ವೈ ಚರ್ಚೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಒಡಿಶಾಕ್ಕೆ ಕಳುಹಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದರು.

ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಕಾರ್ಮಿಕರು ಹಸಿವಿನಿಂದ ಬಳಸದಂತೆ ಎಚ್ಚರ ವಹಿಸಲಾಗಿದೆ. ಪ್ರಸ್ತುತ ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ವಿವಿಧ ವಲಯಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ಮರು ಪ್ರಾರಂಭ ಮಾಡಲಾಗುತ್ತಿದೆ. ಇದರಿಂದ ಬಹುತೇಕ ಕಾರ್ಮಿಕರಿಗೆ ಮತ್ತೆ ಉದ್ಯೋಗ ದೊರೆಯಲಿದೆ ಎಂದು ಬಿಎಸ್‌ವೈ ತಿಳಿಸಿದರು.

ಹೊರ ರಾಜ್ಯಗಳಿಗೆ ಕಾರ್ಮಿಕರನ್ನು ಕಳುಹಿಸುವ ಕುರಿತು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಅವರು ಒಡಿಶಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಸಮನ್ವಯ ನಿರ್ವಹಿಸುವರು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಒಡಿಶಾ ರಾಜ್ಯಕ್ಕೆ ಹಿಂತಿರುಗುವ ಕಾರ್ಮಿಕರ ವಿವರ, ಅವರ ಆರೋಗ್ಯ ತಪಾಸಣೆ ಹಾಗೂ ಅವರ ಕ್ವಾರಂಟೈನ್ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಚರ್ಚಿಸಲಾಯಿತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಒಡಿಶಾ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಪಾಲ್ಗೊಂಡಿದ್ದರು.

ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ಸಿಎಂ ಬಿಎಸ್‌ವೈ ವಿಡಿಯೋ ಕಾನ್ಫರೆನ್ಸ್

  1. ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಸೂಚಿಸಲಾಯಿತು.
  2. ಕಂಟೇನ್ ಮೆಂಟ್ ಝೋನ್ ಹೊರತು ಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ತಿಳಿಸಲಾಯಿತು.
  3. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಸೂಚಿಸಲಾಯಿತು.
  4. ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆ ಎಸ್ ಆರ್ ಟಿ ಸಿ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಯಿತು. ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡುವಂತೆ ತಿಳಿಸಲಾಯಿತು.
  5. ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂತಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಯಿತು.
  6. ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು.
  7. ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ