NEWSನಮ್ಮಜಿಲ್ಲೆ

ಆಹಾರ ಘಟಕಗಳ ಮೇಲೆ ತಪಾಸಣೆ ಹೆಚ್ಚಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ತಾಕೀತು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು ಗ್ರಾಮಾಂತರ: ಆಹಾರ ಘಟಕಗಳಾದ ಹೋಟೆಲ್, ಡಾಬಾ, ಬೇಕರಿ, ಬೀದಿಬದಿ, ರಸ್ತೆ ಬದಿ ಕ್ಯಾಂಟೀನ್, ಇತರೆ ಆಹಾರ ಸಂಬಂಧಿತ ಘಟಕಗಳಿಗೆ ಅನಿರೀಕ್ಷಿತ ದಾಳಿ ನಡೆಸಿ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದುಕೊಳ್ಳದ ಆಹಾರ ಘಟಕಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಮಟ್ಟದ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆದ್ದಾರಿಗಳಲ್ಲಿನ ಡಾಭಾ, ರಸ್ತೆ ಬದಿ ಹೋಟೆಲ್, ಕ್ಯಾಂಟೀನ್ ಗಳಲ್ಲಿ ಆಹಾರ ಸುರಕ್ಷತೆ ಕ್ರಮಗಳು, ಆಹಾರದ ಗುಣಮಟ್ಟ ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿರುತ್ತಾರೆ. ಅಂತಹ ಸ್ಥಳಗಳಲ್ಲಿ ಆಹಾರ ಸೇವನೆಯು ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಹಾಗೇಯೇ ಕೆಲವು ಆಹಾರ ಘಟಕಗಳು ಲೈಸೆನ್ಸ್( ಪರವಾನಗಿ) ಪಡೆಯದೇ ನಡೆಸುತ್ತಿರುತ್ತಾರೆ. ಅಂತಹ ಜಾಗಗಳಲ್ಲಿ ಹೆಚ್ಚು ದಾಳಿ ನಡೆಸಿ ಕಳಪೆ ಆಹಾರ ತಯಾರಿಕೆ ಘಟಕಗಳು ಕಂಡು ಬಂದಲ್ಲಿ ದಂಡ ವಿಧಿಸುವುದರ ಜೊತೆಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜು, ಅಂಗನವಾಡಿ, ವಸತಿ ನಿಲಯಗಳಲ್ಲಿ ಆಗಿಂದಾಗ್ಗೆ ತಪಾಸಣೆ ನಡೆಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ಸುರಕ್ಷತೆ ಹಾಗೂ ಗುಣಮಟ್ಟ ಇಲಾಖೆ ಅಂಕಿತಾಧಿಕಾರಿ ಮಾತನಾಡಿ ಏಪ್ರಿಲ್ ಮಾಹೆಯಿಂದ ಮೇ ಮಾಹೆಯವರೆಗೆ ಜಿಲ್ಲೆಯಲ್ಲಿ 115 ಆಹಾರ ಘಟಕಗಳಲ್ಲಿ ತಪಾಸಣೆ ನಡೆಸಿ, 44 ಘಟಕಗಳಿಗೆ ನೋಟಿಸ್ ನೀಡಲಾಗಿದೆ. 07 ಘಟಕಗಳಿಗೆ ದಂಡ ವಿಧಿಸಿ 33,000 ರೂ.ದಂಡ ಸಂಗ್ರಹಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ನಗರಾಭಿವೃದ್ಧಿ ಇಲಾಖೆ ಯೋಜನಾ ನಿರ್ದೇಶಕರಾದ ರಮೇಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬೈಲಾಂಜನಪ್ಪ, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Megha
the authorMegha

Leave a Reply

error: Content is protected !!
Latest news
ನಾಲ್ಕೂ ರಸ್ತೆ ಸಾರಿಗೆ ಸಂಸ್ಥೆ ಎಂಡಿಗಳಿಗೆ ಪತ್ರ ಬರೆದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಾಳೆ ವೇತನ ಹೆಚ್ಚಳದ 11 ತಿಂಗಳ ಹಿಂಬಾಕಿಯ ವ್ಯತ್ಯಾಸ ತಿಳಿಯಲು ಸಾರಿಗೆ ನೌಕರರಿಂದ NWKRTC ಎಂಡಿ ಭೇಟಿ GBA East ತ್ಯಾಜ್ಯ ವಿಲೇವಾರಿ ಅಕ್ರಮ: 6 ವಾಹನಗಳ ವಶ- FIR ದಾಖಲು NWKRTC: ಧಾರವಾಡ ಗ್ರಾ.ವಿಭಾಗದ ನಿವೃತ್ತ ಅಧಿಕಾರಿಗಳಿಗೆ ಹೃದಯಸ್ಪರ್ಷಿ ಬೀಳ್ಕೊಡುಗೆ KSRTC: ಮೂರು ದಶಕಗಳ ಸುದೀರ್ಘ ಸೇವೆ ಬಳಿಕ ಸಂಸ್ಥೆಯ ಬಸ್‌ ಚಾಲಕ ನಿವೃತ್ತಿ-  ಮರೆಯಲಾಗದ ಸಂದರ್ಭ ಸೆರೆ! ಇಂಧನ, ಗ್ಯಾಸ್ ಬೆಲೆಯೇರಿಕೆ, ವಿದ್ಯುತ್ ಖಾಸಗೀಕರಣ ವಿರೋಧಿಸಿ ರಾರೈಸಂ ಪ್ರತಿಭಟನೆ -ಸರ್ಕಾರಗಳ ವಿರುದ್ಧ ಘೋಷಣೆ KKRTC: ಬಸ್ ನಿಲ್ದಾಣದಲ್ಲಿ ಮಹಿಳೆ ಜತೆ ಅನುಚಿತ ವರ್ತನೆ-ಕಿಡಿಗೇಡಿಗೆ ಚಪ್ಪಲಿ ಏಟು ಪ್ರಮಾಣ ವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ – ಜೂ.3ರಂದು ನೂತನ ಸಿಎಂಆಗಿ ಗದ್ದುಗೆ ಏರಲಿರುವ ಡಿ.ಕೆ.ಶಿವಕುಮಾರ್‌ ಪೆಟ್ರೋಲ್‌, ಡೀಸೆಲ್‌ ಬಳಿಕ CNG ದರದಲ್ಲೂ ಏರಿಕೆ- ಎರಡನೇ ಬಾರಿಗೆ 2ರೂ. ಹೆಚ್ಚಳ -ಗ್ರಾಹಕರಿಗೆ ಶಾಕ್‌ ಕೊಟ್ಟ MGL ಆದೇಶ ಕಾಯ್ದಿರಿಸಿದ 3 ತಿಂಗಳೊಳಗಾಗಿ ಎಲ್ಲ ಕೋರ್ಟ್‌ಗಳಲ್ಲೂ ಅಂತಿಮ ತೀರ್ಪು ಹೊರಬೀಳಬೇಕು: ಸುಪ್ರೀಂ ಮಹತ್ವದ ಆದೇಶ