NEWSವಿಜ್ಞಾನ

ಮೃಗಾಲಯಕ್ಕೆ ಎಸ್.ಟಿ.ಸೋಮಶೇಖರ್ ಬಳಗದಿಂದ  1.19 ಕೋಟಿ ರೂ. ದೇಣಿಗೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಈಗಾಗಲೇ ಮೈಸೂರು ಮೃಗಾಲಯಕ್ಕೆ 73.60 ಲಕ್ಷ ರೂ. ದೇಣಿಗೆ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವರು ಶನಿವಾರ ಎರಡನೇ ಬಾರಿಗೆ 45.30 ಲಕ್ಷ ರೂಪಾಯಿ ಚೆಕ್ ನೀಡಿದ್ದು, ಈ ಮೂಲಕ ಒಟ್ಟು 1 ಕೋಟಿ 18 ಲಕ್ಷ 90 ಸಾವಿರ ರೂಪಾಯಿಯನ್ನು ಮೃಗಾಲಯಕ್ಕೆ ಹಸ್ತಾಂತರ ಮಾಡಿದ್ದಾರೆ.

ಮೃಗಾಲಯದ ಸ್ಥಿತಿ-ಗತಿ ಪರಿಶೀಲನೆ ನಡೆಸಲು  ಆಹಾರ ಸಚಿವ ಗೋಪಾಲಯ್ಯ ನವರ ಜೊತೆ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದ್ದು, ಈ ವೇಳೆ ತಮ್ಮ ಕ್ಷೇತ್ರದ ಜನರಿಂದ ಸಂಗ್ರಹಿಸಿದ 45.30 ಲಕ್ಷ ರೂ. ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರ ಮಾಡಿದರು.

ಈ ವೇಳೆ ಮಾತನಾಡಿದ ಅವರು, ಮೈಸೂರು ಮೃಗಾಲಯದ ನಿರ್ವಹಣೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಾನು ಎಲ್ಲ ಸಚಿವರು, ವಿಧಾನಪರಿಷತ್ ಸದಸ್ಯರು ಹಾಗೂ ಶಾಸಕರು ಸೇರಿದಂತೆ ಸಮಾಜದ ಗಣ್ಯರು ಮತ್ತು ನಾಗರಿಕರಿಗೆ ಮನವಿ ಮಾಡಿ ಆರ್ಥಿಕ ಸಹಾಯ ಮಾಡುವಂತೆ ಈಗಾಗಲೇ ಕೋರಿದ್ದೇನೆ. ಅಲ್ಲದೆ, ನನ್ನ ಕ್ಷೇತ್ರದಿಂದ ಈಗ 2ನೇ ಬಾರಿ 45.30 ಲಕ್ಷ ರೂಪಾಯಿಯನ್ನು ಸಂಗ್ರಹಿಸಿ ಮೃಗಾಲಯಕ್ಕೆ ನೀಡುತ್ತಿದ್ದೇನೆ ಎಂದು ತಿಳಿಸಿದರು.

 8 ಲಕ್ಷ ರೂ. ದೇಣಿಗೆ ನೀಡಿದ ಸಚಿವ ಗೋಪಾಲಯ್ಯ
ಆಹಾರ ಸಚಿವ ಕೆ.ಗೋಪಾಲಯ್ಯ  ವೈಯಕ್ತಿಕವಾಗಿ ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣಿಗೆ 8 ಲಕ್ಷ ರೂ. ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ನೀಡಿದರು.

ಮೈಸೂರು ಜಯಚಾಮರಾಜೇಂದ್ರ ಮೃಗಾಲಯ ಪರಿಶೀಲನೆಗೆ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರೊಡನೆ ಭೇಟಿ ನೀಡಿದ ಸಚಿವ ಗೋಪಾಲಯ್ಯ ಅವರು, ಮೃಗಾಲಯವನ್ನು ಪರಿಶೀಲಿಸಿ ಅಲ್ಲಿನ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದ ಬಳಿಕ ಅವರು 8 ಲಕ್ಷ ರೂಪಾಯಿ ಹಾಗೂ ಮೃಗಾಲಯದ 300 ಮಂದಿ ಸಿಬ್ಬಂದಿಗೆ ತಲಾ 25 ಕೆ.ಜಿ. ಅಕ್ಕಿಯನ್ನು ದೇಣಿಗೆಯಾಗಿ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಮೂಲಕ ಹಸ್ತಾಂತರಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ