ಬೆಂಗಳೂರು: ಸಿಗ್ನಲ್‌ನಲ್ಲಿ ಅಡ್ಡಬಂದ ಟೆಂಪೋಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸುವ ವೇಳೆ ಬ್ರೇಕ್ ಫೇಲ್ ಆಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಕಾಲಿಗೆ ಪೆಟ್ಟಾಗಿರುವ ಘಟನೆ ಬೆಂಗಳೂರಿನ SRS ಸಿಗ್ನಲ್ ಬಳಿ ಇಂದು ಮುಂಜಾನೆ ನಡೆದಿದೆ.
ಶನಿವಾರ ಮುಂಜಾನೆ 3:30ರಲ್ಲಿ ಈ ಅಪಘಾತ ಸಂಭವಿಸಿದ್ದು, ಈ ವೇಳೆ ಬಸ್‌ನಲ್ಲಿ ಸುಮಾರು 42 ಮಂದಿ ಪ್ರಯಾಣಿಕರಿದ್ದರು. ಘಟನೆಯಲ್ಲಿ ಒಬ್ಬ ಮಹಿಳೆ ಕಾಲಿಗೆ ಗಾಯವಾಗಿದೆ, ಇತ್ತ ಅವಘಡ ನಡೆದ ಕೂಡಲೇ ಸ್ಥಳೀಯರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದು, ಯಾವುದೆ ಪ್ರಾಣಹಾನಿಯಾಗಿಲ್ಲ.
ಹುಬ್ಬಳ್ಳಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಡಿವೈಡರ್ ಮೇಲೆ ಹತ್ತಿದೆ. ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ
ಇನ್ನು ಒಬ್ಬ ಮಹಿಳೆ ಕಾಲಿಗೆ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಉಳಿದಂತೆ ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವಿವರಿಸಿದ್ದಾರೆ.
Related
