NEWSದೇಶ-ವಿದೇಶ

ವಿದೇಶದಲ್ಲಿ ಸಿಲುಕಿರುವ ಕನ್ನಡಿಗರ ಕರೆತರಲು ನೋಡೆಲ್ ಅಧಿಕಾರಿಗಳ ನೇಮಕ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ವಿದೇಶದಲ್ಲಿ ನೆಲೆಸಿರುವ ಕರ್ನಾಟಕದವರು ರಾಜ್ಯಕ್ಕೆ ಬರಲು ಬಯಸಿದರೆ ಅವರನ್ನು ಕರೆತರಲು ಬೇಕಾದ ವ್ಯವಸ್ಥೆ ಮಾಡುವ ಸಲುವಾಗಿ ರಾಜ್ಯಸರ್ಕಾರ ನೋಡಲ್‌ ಅಧಿಕಾರಿಗಳನ್ನು ನೇಮಕಮಾಡಿದೆ.

ಹಲವು ಭಾರತೀಯರು ವಿದೇಶಗಳಲ್ಲಿ ವ್ಯಾಸಂಗ ಇಲ್ಲವೆ ಕೆಲಸವನ್ನು ಮಾಡುತ್ತಿದ್ದು, ಈಗ ಕೋವಿಡ್‌-19 ಮಹಾಮಾರಿಯಿಂದ ತಮ್ಮ ಸ್ವದೇಶಕ್ಕೆ ಮರಳಲು ಸಾಧ್ಯವಾಗದೆ ಆತಂಕದಲ್ಲಿದ್ದಾರೆ.  ಅಲ್ಲದೆ ಭಾರತಕ್ಕೆ ಮರಳಲು ಯಾವುದೇ ಪ್ಯಾಸೆಂಜರ್ ವಿಮಾನ ಸಹ ಇಲ್ಲವಾಗಿದೆ. ಈ ನಿಟ್ಟಿನಲ್ಲಿ ಅಂತಹವರಿಗೆ ಸಹಾಯಹಸ್ತ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ವಿದೇಶದಲ್ಲಿ ಸಿಲುಕಿರುವವರ ಸಮಗ್ರ ಮಾಹಿತಿಯನ್ನು ಆಯಾ ದೇಶದ ರಾಯಭಾರಿಗಳನ್ನು ಸಂಪರ್ಕಿಸಿ ಪದೆದುಕೊಳ್ಳಲಾಗುತ್ತಿದೆ.

ವಿದೇಶಲ್ಲಿ ನೆಲಸಿರುವ ಭರತೀಯ ವಿದ್ಯಾರ್ಥಿಗಳು ಹಾಗೂ ಉದ್ಯೋಗಸ್ಥರು ಕರ್ನಾಟಕಕ್ಕೆ ಮರಳಲು ಅನುಕೂಲವಾಗುವಂತೆ ವಿಕೋಪ ನಿರ್ವಹಣಾ ಕಾಯ್ದೆ-2005ರನ್ವಯ ರಾಜ್ಯ ಸರ್ಕಾರ ನೋಡಲ್ ಅಧಿಕಾರಿಗಳಾಗಿ 1)ಉಮೇಶ್ ಕುಮಾರ್ , ಐ.ಪಿ.ಎಸ್ 2) ಸಿ.ಎನ್.ಮೀನಾ ನಾಗರಾಜ್, ಐ.ಎ.ಎಸ್ ಇವರನ್ನು ಕೇಂದ್ರ, ರಾಜ್ಯ ಸರ್ಕಾರಗಳ ಸಮನ್ವಯದಲ್ಲಿ ಕೆಲಸ ನಿರ್ವಹಿಸಲು ನೇಮಿಸಿದೆ.

ಈ ಸಂಬಂಧ ನೇಮಕಗೊಂಡಿರುವ ನೋಡಲ್ ಅಧಿಕಾರಿಗಳಿಗೆ ಎಲ್ಲಾ ಜಿಲ್ಲಾಡಳಿತಗಳು ಹಾಗೂ ಸಂಬಂಧಿಸಿದ ಇತರ ಇಲಾಖೆಗಳು ಸಹಕಾರ ನೀಡುವಂತೆ ಸೂಚಿಸಲಾಗಿದೆ ಎಂದು ಸರ್ಕಾರದ ಪ್ರಧಾನ  ಕಾರ್ಯದರ್ಶಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

1 Comment

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ