ಬೆಂಗಳೂರು: ವಲಸೆ ಕಾರ್ಮಿಕರ ಸಮಸ್ಯೆ ಕುರಿತು ಬಿಲ್ಡರ್‌ಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಬಿಲ್ಡರ್‌ಗಳ ಸಭೆ ನಡೆಸಿದ ಸಿಎಂ, ರಾಜ್ಯದಲ್ಲಿ ಕೋವಿಡ್ 19 ಪರಿಸ್ಥಿತಿ ಇತರ ರಾಜ್ಯಗಳಿಗೆ ಹೋಲಿಸಿದರೆ, ಹತೋಟಿಯಲ್ಲಿದೆ. ಈ ನಿಟ್ಟಿನಲ್ಲಿ ಕೆಂಪು ವಲಯ ಹೊರತು ಪಡಿಸಿ, ವ್ಯಾಪಾರ, ಕಟ್ಟಡ ನಿರ್ಮಾಣ ಕಾಮಗಾರಿ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಮತ್ತೆ ಪ್ರಾರಂಭಿಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಅನಗತ್ಯ ಪ್ರಯಾಣವನ್ನು ನಿಯಂತ್ರಿಸಬೇಕಾಗಿದೆ ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟರು.
ಕೆಂಪು ವಲಯ ಹೊರತು ಪಡಿಸಿ, ಇತರ ಸ್ಥಳಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ಸಂಪೂರ್ಣವಾಗಿ ಪ್ರಾರಂಭಿಸುವಂತೆ ಸೂಚಿಸಲಾಗಿದೆ. ಕಾರ್ಮಿಕರಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ, ಉದ್ಯೋಗ ನೀಡಿ, ವೇತನ ನೀಡಿ ಅವರನ್ನು ಉಳಿಸಿಕೊಳ್ಳುವಂತೆ ಸಲಹೆ ನೀಡಿದರು.
ನಿರ್ಮಾಣ ಚಟುವಟಿಕೆಗಳು ಅಬಾಧಿತವಾಗಿ ನಡೆಸಲು ಎಲ್ಲ ಅಗತ್ಯ ಸಹಕಾರ ನೀಡಲು ಸರ್ಕಾರ ಸಿದ್ಧವಿದೆ. ಅವಧಿ ಮೀರಿದ ಚಟುವಟಿಕೆಗಳಿಗೆ ಪೊಲೀಸ್ ಇಲಾಖೆಯಿಂದ ಪಾಸ್ ವಿತರಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.
ಬೇರೆ ಜಿಲ್ಲೆಗಳಿಗೆ ತೆರಳಿರುವ ಕಾರ್ಮಿಕರನ್ನು ವಾಪಸ್ ಕರೆಸಲು ಅಗತ್ಯ ಪಾಸುಗಳನ್ನು ಸಹ ಒದಗಿಸಲಾಗುವುದು. ಕಾರ್ಮಿಕರು ವದಂತಿಗಳಿಗೆ ಕಿವಿಗೊಡದೆ, ಅನಗತ್ಯ ಪ್ರಯಾಣ ಮಾಡುವ ಯೋಜನೆ ಕೈಬಿಡಬೇಕಾಗಿದೆ. ಈ ರೀತಿ ಆತಂಕಕ್ಕೆ ಒಳಗಾಗಿರುವ ಕಾರ್ಮಿಕರ ಮನವೊಲಿಸಲು ಸಚಿವರಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ನೇಕಾರರ ಸಮಸ್ಯೆಗೆ ಸರ್ಕಾರ ಸ್ಪಂದನೆ
ಇನ್ನು ನೇಕಾರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿದ್ದು, ಪಿಎಂ-ಕಿಸಾನ್ ಮಾದರಿಯಲ್ಲಿ ನೇಕಾರರಿಗೆ ಆರ್ಥಿಕ ನೆರವು ನೀಡಲು ಕ್ರಮ ವಹಿಸಲಾಗುವುದು. ಅನುಷ್ಠಾನದ ಕುರಿತು ಶೀಘ್ರವೇ ಮಾರ್ಗಸೂಚಿ ರೂಪಿಸಲಾಗುವುದು ಎಂದರು.
ಮುಂದಿನ ವರ್ಷದಿಂದ ಸರ್ಕಾರದ ವಿವಿಧ ಇಲಾಖೆಗಳ ಸಮವಸ್ತ್ರಕ್ಕೆ ನೇಕಾರರು ನೇಯ್ದ ಬಟ್ಟೆ ಖರೀದಿಸಲು ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಲಾಗುವುದು.
Super idarinda Mandagatiya arthikatege swalpa vega banda age agvudu