ಬೆಳಗಾವಿ: ನಗರ ಮೀಸಲು ಪಡೆ ಪೊಲೀಸ್ ಪೇದೆಯೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲಾಧಿಕಾರಿ ನಿವಾಸದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಜಿಲ್ಲಾಧಿಕಾರಿ ನಿವಾಸದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಪ್ರಕಾಶ ಗುರಮಠ (32) ಎಂಬುವರೆ ಆತ್ಮಹತ್ಯೆ ಮಾಡಿಕೊಂಡಿಕೊಂಡವರು. ಇವರ ದೇಹದಲ್ಲಿ ಎರಡು ಗುಂಡುಗಳು ಹೊಕ್ಕಿವೆ. ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದ್ದು, ಯಾವ ಕಾರಣಕ್ಕಾಗಿ ಹೀಗೆ ಮಾಡಿಕೊಂಡಿದ್ದಾರೆ ಎಂಬುವುದು ತಿಳಿದು ಬಂದಿಲ್ಲ. ಈ ಘಟನೆ ಮುಂಜಾನೆ ಜಿಲ್ಲಾಧಿಕಾರಿ ಗಮನಕ್ಕೆ ಬಂದಿದ್ದು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಜಿಲ್ಲಾಧಿಕಾರಿ ಡಾ. ಎಸ್.ಬಿ. ಬೊಮ್ಮನಹಳ್ಳಿ ಅವರ ನಿವಾಸಕ್ಕೆ ಭದ್ರತೆಯಲ್ಲಿದ್ದ ಈ ಪೇದೆ ಮೂಲತಃ ಎಂ.ಕೆ. ಹುಬ್ಬಳ್ಳಿ ಬಳಿಯ ಅಂಬಡಗಟ್ಟಿ ಗ್ರಾಮದವರು. ಪತ್ನಿ, ಇಬ್ಬರು ಪುತ್ರರು, ತಂದೆ-ತಾಯಿ ಇದ್ದು, ಸಹೋದರ ಇಂಜಿನಿಯರಿಂಗ್ ಓದುತ್ತಿದ್ದಾನೆ. 2012ರಲ್ಲಿ ಬೆಂಗಳೂರಿನಲ್ಲಿ ಕೆಲಸಕ್ಕೆ ಸೇರಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಕೆಲ ವರ್ಷಗಳ ಹಿಂದೆ ಬೆಳಗಾವಿಗೆ ವರ್ಗಾವಣೆ ಮಾಡಿಕೊಂಡು ಬಂದಿದ್ದರು. ಪ್ರಸ್ತುತ ಡಿಸಿ ನಿವಾಸದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
Yakappa bekitthu