NEWSನಮ್ಮರಾಜ್ಯ

ಮೇ 6- ರಾಜ್ಯದಲ್ಲಿ 19 ಹೊಸ ಕೊರೊನಾ ಸೋಂಕು ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬಾಗಲಕೋಟೆಯ ಬಾದಾಮಿಯಲ್ಲಿ ಇಂದು ಒಂದೇ ದಿನ 13 ಹೊಸ ಕೊರೊನಾ ಪಾಲಿಸಿಟಿವ್‌ ಸೇರಿ ರಾಜ್ಯದಲ್ಲಿ ಹೊಸದಾಗಿ 19 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ.

ಇವುಗಳಲ್ಲಿ 29 ಜನರು ಮೃತಪಟ್ಟಿದ್ದು, 345 ಜನರು ರೋಗದಿಂದ ಮುಕ್ತಗೊಂಡು ಮನೆಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಎರಡು, ದಕ್ಷಿಣ ಕನ್ನಡಲ್ಲಿ ಮೂರು ಮತ್ತು ಕಲಬುರಗಿಯಲ್ಲಿಒಂದು ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದೆ.

ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ 692 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈ ಪೈಕಿ 345 ಮಂದಿ ಗುಣಮುಖರಾಗಿದ್ದಾರೆ. ಇನ್ನು 318  ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದುವರೆಗೂ 29 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ ಯಾವುದೇ ಪಾಸಿಟಿವ್‌ಪ್ರಕರಣ ವರದಿಯಾಗಿಲ್ಲ.

ದೇಶದಲ್ಲಿ 49,436 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 49,436 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 1,695 ಮಂದಿ ಮೃತಪಟ್ಟಿದ್ದಾರೆ. 14,183 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 37,30,023 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,58,394 ಜನರು ಮೃತಪಟ್ಟಿದ್ದಾರೆ. 12,45,723 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ