ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಹಾಗೂ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಸಹಯೋಗದೊಂದಿಗೆ ಜೂನ್-2025ರ ಮಾಹೆಯ ಸಂಸ್ಥೆಯ 100ಕ್ಕೂ ಹೆಚ್ಚು ಅರ್ಹ ನೌಕರರಿಗೆ ಪ್ರಯಾಸ್ ಯೋಜನೆಯಡಿ ಪಿಂಚಣಿ ಪಾವತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು.
ಇಂದು ಸಂಸ್ಥೆಯ ಕೇಂದ್ರ ಕಚೇರಿಯಲ್ಲಿ ಆಯೋಜಿಸಿದ್ದ ಪಿಂಚಣಿ ಪಾವತಿ ಆದೇಶ ಪತ್ರ ವಿತರಿಸುವ ಸಮಾರಂಭದಲ್ಲಿ ಅರ್ಹ ನೌಕರರು ಹಾಜರಿದ್ದು ಸಚಿವರಿಂದ ಪಿಂಚಣಿ ಪಾವತಿ ಆದೇಶ ಪತ್ರವನ್ನು ಸ್ವೀಕರಿಸಿದರು.
ಈ ವೇಳೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆರ್.ರಾಮಚಂದ್ರನ್, ನಿರ್ದೇಶಕರು (ಮಾ.ತಂ) ಎಂ.ಶಿಲ್ಪಾ, ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತ ಮಿಹಿರ್ ಕುಮಾರ್ ಮತ್ತು ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.
Related

Megha