KSRTC ಬಸ್ ಪಲ್ಟಿ: ಯುವತಿಗೆ ಕೈ ಮುರಿತ- ಒಬ್ಬರ ತಲೆಗೆ ಗಂಭೀರ ಪೆಟ್ಟು ಸೇರಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ತುಮಕೂರು: ಚಾಲಕನ ನಿಯಂತ್ರಣ ತಪ್ಪಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹೊಡೆದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡಿದ್ದರೆ, 20ಕ್ಕೂ ಹೆಚ್ಚು ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಾಲ್ಕಟ್ಟೆ ಕ್ರಾಸ್ ಬಳಿ ನಡೆದಿದೆ.
ಬಸ್ ಮಂಡ್ಯ ಸಾರಿಗೆ ವಿಭಾಗದ ಪಾಂಡವಪುರ ಘಟಕಕ್ಕೆ ಸೇರಿದ್ದಾಗಿದ್ದು, ಇಂದು (ಜುಲೈ 2ರ) ಮಧ್ಯಾಹ್ನ ಈ ಅವಘಡ ಸಂಭವಿಸಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಜಮೀಗೆ ಹೋಗಿ ಪಲ್ಟಿಹೊಡೆದಿದ್ದರಿಂದ ಓರ್ವ ಯುವತಿಯ ಕೈ ಬಸ್ ಕೆಳಗೆ ಸಿಕ್ಕಿಹಾಕಿಕೊಂಡು ಮುರಿತಕ್ಕೊಳಗಾಗಿದ್ದರೆ, ಮತ್ತೊಬ್ಬರಿಗೆ ತಲೆಗೆ ತೀವ್ರ ಪೆಟ್ಟಾಗಿದೆ ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದ್ದಾರೆ.
ಗಾಯಗೊಂಡ 20ಕ್ಕೂ ಹೆಚ್ಚು ಪ್ರಯಾಣಿಕರನ್ನು ಚಿಕ್ಕನಾಯಕನಹಳ್ಳಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಗಂಬೀರವಾಗಿ ಗಾಯಗೊಂಡಿರುವ 3-4 ಮಂದಿಯನ್ನು ತುಮಕೂರಿನ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾಲ್ಕಟ್ಟೆ ಕ್ರಾಸ್ನಿಂದ ಸುಮಾರು 600 ಮೀಟರ್ ದೂರದಲ್ಲಿರುವ ಈ ಸ್ಥಳದಲ್ಲಿ ಇಂದು ನಡೆದಿರುವ ಅಪಘಾತ ಇದು 19ನೇ ಅಪಘಾತವಾಗಿದೆ. ಈ ಅವಘಡಕ್ಕೆ ರಸ್ತೆ ಡಾಂಬರೀಕರಣ ಕಳಪೆಯಾಗಿರುವುದೇ ಕಾರಣ ಎಂದು ಸ್ಥಳೀಯ ಜನಪ್ರತಿನಿಧಿಗಳು ಆರೋಪಿಸಿದ್ದು, ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳು, ಇಂಜಿನಿಯರ್ಗಳಿಗೆ ಸರಿ ಪಡಿಸುವಂತೆ ಮನವಿ ಮಾಡಿದ್ದಾರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಇನ್ನು ಇದೇ ಸ್ಥಳದಲ್ಲಿ ಎದರು ರಸ್ತೆಯಲ್ಲಿ ಗುಣಮಟ್ಟದ ಡಾಂಬರೀಕರಣ ಮಾಡಿರುವುದರಿಂದ ಯಾವುದೇ ಅಪಘಾತವಾಗುತ್ತಿಲ್ಲ. ಆದರೆ ಈ ರಸ್ತೆಯಲ್ಲಿ ಯಾವುದೇ ತಿರುವು ಇಲ್ಲದಿದ್ದರೂ ಕೂಡ ವಾಹನಗಳು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿವೆ. ಇದರಿಂದ ಈಗಾಗಲೇ ಹಲವು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆದರೂ ಈ ಬಗ್ಗೆ ಯಾವುದೇ ದೂರು ದಾಖಲಾಗುತ್ತಿಲ್ಲ. ದೂರು ದಾಖಲಾಗುತ್ತಿದ್ದರೂ ವಿಮೆ ಕ್ಲೈ ಮಾಡಿಕೊಳ್ಳುವುದಕ್ಕಷ್ಟೇ ದಾಖಲಾಗುತ್ತಿದೆ. ಕಳಪೆ ರಸ್ತೆಯಿಂದ ಹೀಗಾಗುತ್ತಿದೆ ಎಂದು ಈವರೆಗೂ ಯಾವುದೇ ದೂರು ದಾಖಲಾಗಿಲ್ಲ ಎಂದು ಸ್ಥಳೀಯರು ಪೊಲೀಸರ ವಿರುದ್ಧವು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪಲ್ಟಿಯಾಗಿರುವುದನ್ನು ಕಂಡ ಸ್ಥಳೀಯರು ನೆರವಿಗೆ ಧಾವಿಸಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಈ ವೇಳೆ ಬಸ್ನಲ್ಲಿ 51ಕ್ಕೂ ಹೆಚ್ಚು ಜನ ಪ್ರಯಾಣ ಮಾಡುತ್ತಿದ್ದರು. ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಭಾರಿ ಅನಾಹುತ ತಪ್ಪಿದೆ ಎಂದು ಸ್ಥಳೀಯರು ಹೇಳಿದರು.
ಅವಘಡ ಸಂಬಂಧ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...