NEWSನಮ್ಮಜಿಲ್ಲೆಬೆಂಗಳೂರು

ನೀರಿನ ಪೈಪ್‌ಲೈನ್ ದುರಸ್ತಿ ಕಳಪೆ: ಜಲಮಂಡಳಿ ಅಧಿಕಾರಿಗಳ ತರಾಟೆಗೆ ತೆಗೆದುಕೊಂಡ ಆಯುಕ್ತೆ ಸ್ನೇಹಲ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜಲಮಂಡಳಿ ವತಿಯಿಂದ ಆಸೆನ್ಷನ್ ಚರ್ಚ್ ರಸ್ತೆಯಲ್ಲಿ ನೀರಿನ ಪೈಪ್‌ಲೈನ್ ದುರಸ್ತಿ ಕಾರ್ಯ ಮಾಡಿದ್ದರೂ ಕೂಡ ಕುಸಿಯುತಿದ್ದು, ಅದನ್ನು ತ್ವರಿತವಾಗಿ ಮರುಸ್ಥಾಪಸಲು ತಕ್ಷಣ ಕ್ರಮವಹಿಸಿ ಎಂದು ಬಿಬಿಎಂಪಿ ಪೂರ್ವ ವಲಯ ಆಯುಕ್ತೆ ಸ್ನೇಹಲ್ ಜಲಮಂಡಳಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಪೂರ್ವ ವಲಯ ವ್ಯಾಪ್ತಿಯ ಪುಲಕೇಶಿನಗರ ಪೊಲೀಸ್ ಠಾಣೆಯಿಂದ ಡೇವಿಸ್ ರಸ್ತೆ ಮತ್ತು ವೀಲರ್ ರಸ್ತೆ ಮಾರ್ಗವಾಗಿ ಹೆಣ್ಣೂರು ಮುಖ್ಯ ರಸ್ತೆಯವರೆಗೆ ಇಂದು ನಡೆದ ಪರಿಶೀಲನೆ ಬಳಿಕ ಅವರು ಮಾತನಾಡಿದರು.

ಚರಂಡಿ ಸ್ಲ್ಯಾಬ್ ಬದಲಾಯಿಸಿ: ಪುಲಕೇಶಿನಗರ ಪೊಲೀಸ್ ಠಾಣೆ ಕೆಳಸೇತುವೆ ಬಳಿ ಚರಂಡಿ ಸ್ಲ್ಯಾಬ್ ಗಳು ಹಾಳಾಗಿದ್ದು, ವಾಹನ ಚಾಲನೆ ಮತ್ತು ಪಾದಚಾರಿ ಸಂಚಾರಕ್ಕೆ ಅಡ್ಡಿಯಾಗುತ್ತಿರುವುದನ್ನು ಗಮನಿಸಿದರು. ಈ ಪೈಕಿ ಹಾಳಾಗಿರುವ ಸ್ಲ್ಯಾಬ್ ಗಳನ್ನು ತಕ್ಷಣ ಬದಲಾಯಿಸಿ, ಪಾದಚಾರಿ ಮಾರ್ಗವನ್ನು ಸುರಕ್ಷಿತಗೊಳಿಸಲು ಸೂಚಿಸಿದರು.

ಮರಗಳ ಸುತ್ತಲಿನ ಇಟ್ಟಿಗೆ ಗೋಡೆ ತೆರವುಗೊಳಿಸಿ: ಬಾಣಸವಾಡಿ ಪಾದಚಾರಿ ಮಾರ್ಗದ ಮರಗಳ ಸುತ್ತ ಇಟ್ಟಿಗೆ ಗೋಡೆಗಳನ್ನು ನಿರ್ಮಿಸಲಾಗಿದ್ದು, ಅವುಗಳನ್ನು ತಕ್ಷಣ ತೆರವುಗೊಳಿಸಿ, ಮರದ ಸುತ್ತಲೂ ಇಂಟರ್‌ ಲಾಕ್ ಟೈಲ್ಸ್ ಅಳವಡಿಸಲು ಸೂಚಿಸಿದರು.

ಪಾದಚಾರಿ ಮಾರ್ಗದ ಸ್ವಚ್ಛತಾ ಅಭಿಯಾನ: ಹಚಿನ್ಸ್ ರಸ್ತೆಯಿಂದ ಪಾದಚಾರಿ ಮಾರ್ಗದ ಪರಿಶೀಲನೆಯ ವೇಳೆ ಪಾದಚಾರಿ ಮಾರ್ಗಗಳ ವಿಶೇಷ ಸ್ವಚ್ಛತಾ ಅಭಿಯಾನ ಆರಂಭಿಸಬೇಕು. ಈ ಅಭಿಯಾನದಲ್ಲಿ ಅನಧಿಕೃತವಾಗಿ ಓ.ಎಫ್.ಸಿ ಅಳವಡಿಸಿರುವರಿಗೆ ನೋಟಿಸ್ ನೀಡಿ ತೆರವು ಮಾಡುವುದು, ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಸ್ವಚ್ಛತೆ ಕಾರ್ಯ ಕೈಗೊಳ್ಳಲು ಸೂಚಿಸಿದರು.

ಅನಧಿಕೃತವಾಗಿ ಪಾರ್ಕ್ ಮಾಡಿರುವ ವಾಹನಗಳ ಮೇಲೆ ದಂಡ: ಪಾದಚಾರಿ ಮಾರ್ಗದ ಮೇಲೆ ಅನಧಿಕೃತವಾಗಿ ನಿಲ್ಲಿಸಲಾಗಿದ್ದ ವಾಹನಗಳಿಗೆ ದಂಡ ವಿಧಿಸುವಂತೆ ಮತ್ತು ಸ್ಥಳೀಯ ಸಂಚಾರಿ ಪೊಲೀಸರಿಗೆ ಅವುಗಳನ್ನು ತಕ್ಷಣ ತೆರವುಗೊಳಿಸುವಂತೆ ನಿರ್ದೇಶನ ನೀಡಿದರು.

2.5 ಕಿ.ಮೀ ನಡಿಗೆ ಮೂಲಕ ಪರಿಶೀಲನೆ: ಪುಲಕೇಶಿನಗರ ಪೊಲೀಸ್ ಠಾಣೆಯಿಂದ ಹೆಣ್ಣೂರು ಮುಖ್ಯ ರಸ್ತೆವರೆಗೆ, ಡೇವಿಸ್ ರಸ್ತೆ ಮತ್ತು ವೀಲರ್ ರಸ್ತೆ ಮಾರ್ಗವಾಗಿ ಸುಮಾರು 2.5 ಕಿಮೀ ದೂರದ ಪರಿಶೀಲನೆ ನಡೆಸಿದರು. ಈ ವೇಳೆ ಕಂಡುಬಂದ ಸಮಸ್ಯೆಗಳ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯ ಮತ್ತು ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆಯ ಎ.ಜಿ.ಎಂ, ಜಲಮಂಡಳಿ, ಬೆಸ್ಕಾಂ, ಪೊಲೀಸ್ ಇಲಾಖೆ ಸಂಚಾರ ವಿಭಾಗದವರು ಸೇರಿದಂತೆ ಇತರ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ