CrimeNEWSನಮ್ಮಜಿಲ್ಲೆ

ಸ್ವಲ್ಪ ಸುತ್ತಾಡಿ ಬರುತ್ತೇವೆ ಎಂದ್ಹೋದ ನವದಂಪತಿ  ಶವವಾಗಿ ಪತ್ತೆ 

ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿತ್ತು

ವಿಜಯಪಥ ಸಮಗ್ರ ಸುದ್ದಿ

ಹಾಸನ: ಮನೆಯಲ್ಲಿ ಕೂತು ಬೋರ್‌ ಆಗುತ್ತಿದೆ ಆದ್ದರಿಂದ ಹೊರಗಡೆ ಹೋಗಿ ಸುತ್ತಾಡಿಕೊಂಡು ಬರುತ್ತೇವೆ ಎಂದು ಹೇಳಿ ಹೋದ ನವದಂಪತಿಯ ಹೇಮಾವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಮನಕಲಕುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆನ್ನಲಿ ಗ್ರಾಮದಲ್ಲಿ ನಡೆದಿದೆ.

ಬೇಲೂರು ತಾಲೂಕು ಮುರಹಳ್ಳಿ ಗ್ರಾಮದ ಅರ್ಥೇಶ್ (27), ಹೆನ್ನಲಿ ಗ್ರಾಮದ ಕೃತಿಕಾ (23) ಮೃತ ನವ ದಂಪತಿ. ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿತ್ತು. ಅರ್ಥೇಶ್ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಸ್ವಗ್ರಾಮ ಮುರಹಳ್ಳಿಗೆ  ಕೆಲವು ದಿನಗಳ ಹಿಂದಷ್ಟೆ ಬಂದಿದ್ದ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಬುಧವಾರ ಹೆನ್ನಲಿ ಗ್ರಾಮದಲ್ಲಿರುವ ಪತ್ನಿ ಕೃತಿಕಾ ಮನೆಗೆ ಹೋಗಿದ್ದ. ಗುರುವಾರ ಸಂಜೆ ದಂಪತಿ ತಿರುಗಾಡಿಕೊಂಡು ಬರುತ್ತೇವೆ ಎಂದು ಬೈಕ್‍ನಲ್ಲಿ ಹೊರ ಹೋಗಿದ್ದರು. ಆದರೆ ಸಂಜೆ ಆದರೂ  ಮನೆಗೆ ವಾಪಸ್ ಬರಲಿಲ್ಲವಲ್ಲ ಎಂದು ಮನೆಯವರು ಫೋನ್ ಮಾಡಿದ್ದಾರೆ. ಈ ವೇಳೆ ಇಬ್ಬರ ಮೊಬೈಲ್ ಫೋನ್‌ಗಳು ಸ್ಬಿಚ್ ಆಫ್ ಆಗಿದ್ದವು. ಗಾಬರಿಗೊಂಡ ಮನೆಯವರು ಅವರನ್ನು ಹುಡುಕಲು ಮುಂದಾಗಿ  ಹೇಮಾವತಿ ನದಿ ಸಮೀಪ ಬಂದಿದ್ದಾರೆ. ಈ ವೇಳೆ  ರಸ್ತೆಯಲ್ಲಿ ಬೈಕ್ ನಿಲ್ಲಿಸಿದ್ದು ಕಾಣಿಸಿದೆ.

ಬೈಕ್‌ ನಿಲ್ಲಿಸಿದ್ದರಿಂದ ನದಿ ದಡದ ಬಳಿಗೆ ಹೋಗಿ ನೋಡಿದ್ದಾರೆ. ಆ ವೇಳೆ ನದಿಯಲ್ಲಿ ಮೀನುಗಾರರು ಹಾಕಿದ್ದ ಬಲೆಗೆ ಕೃತಿಕಾ, ಅರ್ಥೇಶ್ ಮೃತದೇಹ ಸಿಕ್ಕಿಕೊಂಡಿದ್ದು ಪತ್ತೆಯಾಗಿದೆ. ಆದರೆ ಈ ನವದಂಪತಿ ಸಾವಿನ ಬಗ್ಗೆ ಹಲವು ಅನುಮಾನಗಳು ಹುಟ್ಟಿಕೊಂಡಿದ್ದು, ನದಿಯ ಬಳಿ ಸೆಲ್ಫಿ ತೆಗೆಯಲು ಹೋದಾಗ ಕಾಲು ಜಾರಿ ಬಿದ್ದು ಮೃತಪಟ್ಟಿರಬಹುದೆ ಇಲ್ಲ ಹೇಗೆ ಮೃತಪಟ್ಟಿದ್ದಾರೆ ಎಂಬ ಬಗ್ಗೆ ಪೊಲೀಸರ ತನಿಖೆ ನಂತರ ಸತ್ಯಾಸತ್ಯತೆ  ತಿಳಿಯ ಬೇಕಿದೆ.

ಸ್ಥಳದಲ್ಲಿ ನವದಂಪತಿ ಶವವಾಗಿ ಬಿದ್ದಿರುವುದನ್ನು ನೋಡಿದ ಸಂಬಂಧಿಕರ  ಆಕ್ರಂದನ ಮುಗಿಲುಮುಟ್ಟುವಂತಿತ್ತು.

ವಿಷಯ ತಿಳಿದ ಸಕಲೇಶಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

1 Comment

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ