ಔರಂಗಾಬಾದ್: ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಗೂಡ್ಸ್ ರೈಲು ಹರಿದು 16 ಮಂದಿ ವಲಸೆ ಕಾರ್ಮಿಕರು ಮೃತಪಟ್ಟು, ಐವರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ವಲಸೆ ಕಾರ್ಮಿಕರು ಊರಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇರುವ ಸಮಯದಲ್ಲಿಔರಂಗಾಬಾದ್ನ ಕರ್ಮಡ್ ಪೊಲೀಸ್ ಠಾಣೆ ಸರಹದ್ದಿನ ಪರ್ಬನಿ-ಮನ್ಮಡ್ ವಲಯದಲ್ಲಿ ಈ ದುರಂತ ನಡೆದಿರುವುದು ಜನರನ್ನು ಬೆಚ್ಚಿ ಬೀಳಿಸಿದೆ.
ಘಟನೆ ವಿವರ
ಗೂಡ್ಸ್ ರೈಲು ಜಲ್ನಾದಿಂದ ಔರಂಗಾಬಾದ್ ಕಡೆಗೆ ಸಂಚರಿಸುತ್ತಿತ್ತು. ಈ ವೇಳೆ ಛತ್ತೀಸ್ ಗಢ ಮೂಲಕ ಬಂದ ವಲಸೆ ಕಾರ್ಮಿಕರು ಹಳಿ ಮೇಲೆ ವಿಶ್ರಾಂತಿ ತೆಗೆದುಕೊಳ್ಳುವ ಸಲುವಾಗಿ ಮಲಗಿದ್ದರು. ಈ ವೇಳೆ ಏಕಾಏಕಿ ಬಂದ ರೈಲು 16 ಜನರ ಮೇಲೆ ಹರಿದ್ದಿದ್ದು ಅಷ್ಟೂಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಎಚ್ಚರಗೊಂಡ 5 ಮಂದಿ ತಕ್ಷಣಕ್ಕೆ ಹೊರ ಬಂದಿದ್ದಾರೆ. ಈ ವೇಳೆ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ಆದರೆ 21 ಮಂದಿಯೂ ಏಕೆ ಹಳಿ ಮೇಲೆ ಮಲಗಿದ್ದರು ಎಂಬ ಬಗ್ಗೆ ಇನ್ನು ತಿಳಿದು ಬಂದಿಲ್ಲ ಜತೆಗೆ ಅಪಘಾತ ಸಂಭವಿಸಿರುವ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದೆ ಎಂದು ಔರಂಗಾಬಾದ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಕ್ಷಡ ಪಾಟೀಲ್ ತಿಳಿಸಿದ್ದಾರೆ.
ಸ್ಥಳೀಯ ಪೊಲೀಸರು ಮತ್ತು ರೈಲ್ವೆ ಪೊಲೀಸ್ ಪಡೆ ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದು ಈ ಕುರಿತು ಹೆಚ್ಚಿನ ಮಾಹಿತಿ ಸಿಗಬೇಕಿದ್ದು, ಆ ಬಳಿಕ ಅಪಘಾತಕ್ಕೆ ಕಾರಣ ಏನು ಎಂಬುವುದು ಸ್ಪಷ್ಟವಾಗಲಿದೆ ಎಂದು ದಕ್ಷಿಣ ಮಧ್ಯ ರೈಲ್ವೆ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.
ಹಳಿ ಮೇಲೆ ಕಾರ್ಮಿಕರು ಮಲಗಿರುವುದನ್ನು ಕಂಡು ಗೂಡ್ಸ್ ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಆಕಸ್ಮಿಕವಾಗಿ ರೈಲು ಕಾರ್ಮಿಕರ ಮೇಲೆ ಹರಿದುಹೋಯಿತು. ಈ ಬಗ್ಗೆ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ರೈಲ್ವೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದೆ.
ಗೂಡ್ಸ್ ರೈಲು ಅಪಘಾತದಿಂದ 16 ಜನರು ಮೃತಪಟ್ಟು 5 ಮಂದಿ ಗಾಯಗೊಂಡಿರುವುದು ತೀವ್ರ ನೋವುಂಟುಮಾಡಿದೆ. ಈ ಕುರಿತು ರೈಲ್ವೆ ಸಚಿವ ಪಿಯೂಷ್ ಗೋಯಲ್ ಬಳಿ ಮಾತನಾಡಿದ್ದೇನೆ. ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿದ್ದು ಮೃತರ ಕುಟುಂಬಕ್ಕೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail