CrimeNEWSದೇಶ-ವಿದೇಶ

16 ವಲಸೆ ಕಾರ್ಮಿಕರ ಸಾವು, ನಮಗೆ ನಾಚಿಕೆಯಾಗಬೇಕು ಎಂದ ರಾಹುಲ್‌ ಗಾಂಧಿ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ಮಹಾರಾಷ್ಟ್ರದ ಔರಂಗಾಬಾದ್​ನಲ್ಲಿ ಶುಕ್ರವಾರ ಮುಂಜಾನೆ 5 ಗಂಟೆಗೆ ಗೂಡ್ಸ್​ ರೈಲು ಹರಿದು ಮಧ್ಯಪ್ರದೇಶದ 16 ವಲಸೆ ಕಾರ್ಮಿಕರು ಮೃತಪಟ್ಟಿರುವುದಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರ ಸಂತಾಪ ಸೂಚಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ವಲಸೆ ಕಾರ್ಮಿಕರು ಅಸುನೀಗಿರುವ ವಿಷಯ ಕೇಳಿ ನನಗೆ ಆಘಾತವಾಯಿತು, ಜತೆಗೆ ಈ ಕಾರ್ಮಿಕರ ಸಾವಿನ ಪ್ರಕರಣದಿಂದ ನಮಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.

ಆ ದೇವರು ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ತಮ್ಮ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ಲಾಕ್​ಡೌನ್​ನಿಂದ ಮಹಾರಾಷ್ಟ್ರದಲ್ಲಿ ಸಿಲುಕಿಕೊಂಡಿದ್ದ ಮಧ್ಯಪ್ರದೇಶದ ಕಾರ್ಮಿಕರು ರೈಲ್ವೆ ಹಳಿ ಅನುಸರಿಸಿ ತಮ್ಮ ಊರಿಗೆ ಕಾಲ್ನಡಿಗೆ ಮೂಲಕ ತೆರಳುತ್ತಿದ್ದರು. ಈ ವೇಳೆ ಸುಸ್ತಾಗಿದ್ದರಿಂದ ವಿಶ್ರಾಂತಿಗೆಂದು ನಿನ್ನೆ ರಾತ್ರಿ ಹಳಿ  ಮೇಲೆಯೇ ಮಲಗಿದ್ದರು. ಇಂದು ಬೆಳಗ್ಗೆ ಜಾಲ್ನಾದಿಂದ ಔರಂಗಾಬಾದ್​ನತ್ತ ತೆರಳುತ್ತಿದ್ದ ಗೂಡ್ಸ್​ ರೈಲು ಮಲಗಿದ್ದ ಈ ಕಾರ್ಮಿಕರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ 16 ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಮಧ್ಯಪ್ರದೇಶ ಸರ್ಕಾರ 5 ಲಕ್ಷ ರೂ. ಪರಿಹಾರ ಧನ ಘೋಷಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ