ಮಂಡ್ಯ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಕರ್ನಾಟಕ ಸರ್ಕಾರದ ವತಿಯಿಂದ ಕೋವಿಡ್-19 ಮೊಬೈಲ್ ಫೀವರ್ ಕ್ಲಿನಿಕ್ ಬಸ್ಗೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಇಂದು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಚಾಲನೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail
ನಂತರ ಮಾತನಾಡಿದ ಅವರು, ಮೊಬೈಲ್ ಕ್ಲಿನಿಕ್ ಹಾಗೂ ಕೋವಿಡ್-19 ಟೆಸ್ಟಿಂಗ್ ಸೆಂಟರ್ ಕೂಡ ಆರಂಭವಾಗಿದ್ದು ಇದರಿಂದ ಸಾರ್ವಜನಿಕರಿಗೆ ಬಹಳ ಉಪಯುಕ್ತವಾಗುತ್ತದೆ. ಮಂಡ್ಯ ಜಿಲ್ಲೆಯಲ್ಲಿ ಇದುವರೆಗೂ 4500 ಜನರಿಗೆ ಟೆಸ್ಟ್ಗಳನ್ನು ಮಾಡಲಾಗಿದೆ. ಹೋಬಳಿ ಮಟ್ಟದಲ್ಲಿ ಪರೀಕ್ಷೆ ಮಾಡಲು ಆಸ್ಪತ್ರೆಗಳಿಗೆ ಪರೀಕ್ಷೆಗಾಗಿ ಕರೆತರುವ ಬದಲು ಅವರ ಸ್ಥಳದಲ್ಲಿಯೇ ಪರೀಕ್ಷೆಯನ್ನು ಮಾಡುವುದರಿಂದ ಎಲ್ಲರಿಗೂ ಅನುಕೂಲವಾಗುತ್ತದೆ ಎಂದರು.
ಪ್ರತಿ ಹಂತದಲ್ಲೂ ಇದನ್ನು ಸ್ಯಾನಿಟೈಸರ್ ಮಾಡುವ ಸೂಚನೆ ನೀಡಲಾಗಿದೆ. ಹೀಗಿರುವ 28 ಕೋವಿಡ್-19 ರೋಗಿಗಳಲ್ಲಿ ಇದುವರೆಗೂ 11 ಜನ ಡಿಸ್ಚಾರ್ಜ್ ಆಗಿದ್ದು, ಮತ್ತಿಬ್ಬರು ಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಸದ್ಯದಲ್ಲೇ ಬಿಡುಗಡೆಯಾಗಲಿದ್ದಾರೆ. ಉಳಿದ ಎಲ್ಲಾ ರೋಗಿಗಳು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಚೇಗೌಡ ಮಾತನಾಡಿ, ಐಸಿಎಂಆರ್ ನಿರ್ದೇಶದಂತೆ ಸಿದ್ಧಪಡಿಸಲಾಗಿದ್ದು, ಹಳ್ಳಿ ಹಳ್ಳಿಗಳಿಗೆ ತೆರಳಿ ಪರೀಕ್ಷೆ ಮಾಡಲಾಗುತ್ತದೆ. ಇದರಿಂದ ಸ್ಥಳೀಯ ಜನರಿಗೆ ಅನುಕೂಲವಾಗಲಿದ್ದು, ಸಮಯವು ಸಹ ಉಳಿತಾಯವಾಗುತ್ತದೆ ಎಂದರು. ಡಾ.ಬಾಲಕೃಷ್ಣ ಸೇರಿದಂತೆ ಕೆಎಸ್ಆರ್ಟಿಸಿ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಿ: https://play.google.com/store/apps/detail