ಬೆಳಗಾವಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.
ಕಲಬುರಗಿ ಜಿಲ್ಲೆಯ ಅಪ್ಜಲಪುರ ಮೂಲದವರಾದ ಗೀರಿಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಅಪಘಾತದಲ್ಲಿ ಅಸುನೀಗದವರು. ಇನ್ನು ರಾಧಿಕಾ ಮ್ಯಾಲೇಶಿ ಎಂಬುವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಹೊರವಲಯದಲ್ಲಿ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದವರೆಲ್ಲ ಕೊಲ್ಲಾಪುರ ಮಹಾಲಕ್ಷ್ಮಿ ದೇವಿ ದರ್ಶನ ಮಾಡಿ ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಥಣಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ ಬಳಿಕ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.
Related

Megha