NEWSದೇಶ-ವಿದೇಶ

ಚೀನಾಪರ ಎಂದು ವಿಶ್ವ ಆರೋಗ್ಯ ಸಂಸ್ಥೆ ವಿರುದ್ಧ ಟ್ರಂಪ್‌ ವಾಗ್ದಾಳಿ

ವಿಜಯಪಥ ಸಮಗ್ರ ಸುದ್ದಿ

ಅಮೆರಿಕ:  ಕೊರೊನಾ ಸೋಂಕಿನ ವಿಷಯದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಚೀನಾದ ಹೇಳಿಕೆಗೆ ತಕ್ಕಂತೆ ತಾಳ ಹಾಕುತ್ತಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಗಂಭೀರ ಆರೋಪ ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಕೊರೊನಾ ಸೋಂಕು ಬಿಕ್ಕಟ್ಟಿನ ಈ ನಡುವೆ ಅಮೆರಿಕ ಹಾಗೂ ಚೀನಾ ನಡುವಣ ದ್ವಿಪಕ್ಷೀಯ ಬಾಂಧವ್ಯ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜತೆಗೆ ವಿಶ್ವ ಆರೋಗ್ಯ ಸಂಸ್ಥೆಯು (WHO) ಚೀನಾದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದಾರೆ.  ಅಲ್ಲದೆ WHOಗೆ ನೀಡುತ್ತಿರುವ ಆರ್ಥಿಕ ನೆರವಿನ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ಕೊರೊನಾ ಸೋಂಕಿನ ವಿಷಯದಲ್ಲಿ ಚೀನಾ ಪರವಾಗಿ ನಿಂತಿರುವ ವಿಶ್ವ ಆರೋಗ್ಯ ಸಂಸ್ಥೆಗೆ ನೀಡುವ ಆರ್ಥಿಕ ನೆರವನ್ನು ತಡೆ ಹಿಡಿದಿರುವ ಟ್ರಂಪ್, ಮತ್ತಷ್ಟು ಆರೋಪಗಳನ್ನು ಮಾಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ವಿಶ್ವ ಆರೋಗ್ಯ ಸಂಸ್ಥೆ ಹೀಗೆ ಉದ್ದೇಶಪೂರ್ವಕವಾಗಿ ಮಾಡಲಾಗಿದೆ ಎಂದು ನಾನು ನಂಬುವುದಲ್ಲ. ಬಹುಶಃ ಅಸಮರ್ಥತೆಯಿಂದಾಗಿ ಆಗಿರಬಹುದು. ಅದರ ಹೇಗೆ ಮಾತನಾಡೇಬೇಕೆಂಬುದು ಅವರಿಗೆ ತಿಳಿದಿಲ್ಲಎಂದು ಸಂದರ್ಶನ ಒಂದರಲ್ಲಿ ಟ್ರಂಪ್ ಹೇಳಿದ್ದಾರೆ.

ನಾವು ಚೀನಾದ ಒಳಗೆ ಹೋಗಬೇಕೆಂದು ವಿಶ್ವಸಂಸ್ಥೆ ಬಯಸಿರಲಿಲ್ಲ. ವಿಶ್ವ ಆರೋಗ್ಯ ಸಂಸ್ಥೆಗೆ ವಾರ್ಷಿಕವಾಗಿ 500 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ  ಚೀನಾದ ಕೈಗೊಂಬೆಯಂತೆ ವರ್ತಿಸುತ್ತಿರುವುದರಿಂದ ನಾನು ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ನಾವು 450 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತೇವೆ. ಚೀನಾ 38 ಮಿಲಿಯನ್ ಅಮೆರಿಕನ್ ಡಾಲರ್ ಪಾವತಿಸುತ್ತಿದೆ. ಹಾಗಾದರೂ ಏನು ಮಾಡಬೇಕೆಂದು ಚೀನಾ ಹೇಳುತ್ತಿದೆ. ಅದು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ್ದು ಇದು ಹೀಗೆ ಮುಂದುವರಿದರೆ ನಾವು ನೀಡುತ್ತಿರುವ ಹಣವನ್ನು ನಿಲ್ಲಿಸುವ ಬಗ್ಗೆ ಶೀಘ್ರದಲ್ಲೇ ನಿರ್ಧಾರ ಕೈ ತೆಗೆದುಕೊಳ್ಳುತ್ತೇವೆ ಎಂದು ಪದೇಪದೆ ಹೇಳಿಕೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ