ಕೆಎಸ್‌ಆರ್‌ಟಿಸಿ ನೌಕರರಿಗೆ ಉಚಿತ ಆರೋಗ್ಯ ಯೋಜನೆ ಕುರಿತ ಸಂಪೂರ್ಣ ಮಾಹಿತಿ: https://ksrtcarogya.in/ 
ಕಡಲೂರು: ಶಾಲಾ ವಾಹನಕ್ಕೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದು, 10 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ರೈಲು ಬರುವ ವೇಳೆ ಗೇಟ್ ದಾಟುವಾಗ ರೈಲ್ವೆ ಗೇಟ್ ಮುಚ್ಚಿರಲಿಲ್ಲ ಎಂದು ಪ್ರಾಥಮಿಕ ವರದಿಗಳಿಂದ ತಿಳಿದು ಬಂದಿದೆ.
ಮಂಗಳವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದಾಗ ಬಸ್ ಚಾಲಕ ರೈಲು ಬರುವುದನ್ನು ಗಮನಿಸದೇ ಹಳಿ ದಾಟಲು ಯತ್ನಿಸಿದ ಪರಿಣಾಮ ಈ ದುರಂತ ನಡೆದಿದೆ.
ಇತ್ತ ರೈಲು ಡಿಕ್ಕಿಯಾದ ರಭಸಕ್ಕೆ ಬಸ್ ಸಪೂರ್ಣ ನಜ್ಜುಗುಜ್ಜಾಗಿದ್ದು, ಹಲವಾರು ಅಡಿಗಳಷ್ಟು ದೂರ ಹೋಗಿ ಬಿದ್ದಿದೆ. ಈ ಘಟನೆ ಬಗ್ಗೆ ಸ್ಥಳೀಯರು ಆಕ್ರೋಶ ಹೊರಹಾಕಿದ್ದು, ರೈಲ್ವೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅವಘಡ ಸಂಭವಿಸಿದೆ. ರೈಲ್ವೇ ಕ್ರಾಸಿಂಗ್‌ನಲ್ಲಿದ್ದ ಗೇಟ್‌ಕೀಪರ್ ನಿದ್ರಿಸುತ್ತಿದ್ದ. ಸಮಯಕ್ಕೆ ಸರಿಯಾಗಿ ಗೇಟ್ ಮುಚ್ಚದ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.
ಇನ್ನು ಈ ಘಟನೆ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಸಾವುನೋವುಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Related
