CRIMENEWSಬೆಂಗಳೂರು

ಭಾರಿ ಮಳೆಗೆ ರಾಜ್ಯ ರಾಜಧಾನಿಯಲ್ಲಿ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ರಾತ್ರಿ ಭಾರಿ ಮಳೆ ಆಗಿದ್ದು, ಪ್ರಮುಖ ರಸ್ತೆಗಳಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡುವಂತಾಗಿತ್ತು.

ಈ ಸಂದರ್ಭದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರವೊಂದು ಬಿದ್ದಿರುವ ಘಟನೆ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಸಂಭವಿಸಿದೆ. ಅದೃಷ್ಟವಶಾತ್‌ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ವಿವಿಧ ಪ್ರದೇಶಗಳಲ್ಲಿ 3.2 ಸೆಂ.ಮೀ.ವರೆಗೂ ಮಳೆಯಾಗಿದೆ. ಈ ಮಳೆ ಜತೆಗೆ ಭಾರಿ ಗಾಳಿಗೆ ಅಲ್ಲಲ್ಲಿ ಅವಾಂತರಗಳೂ ಸಂಭವಿಸಿವೆ. ಬೃಹತ್‌ ಮರಗಳು, ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ಮಳೆ ಗಾಳಿಯಿಂದ ರಾತ್ರಿ ಬಿದ್ದ ಮರಗಳನ್ನು ಈವರೆಗೂ ತೆರವು ಮಾಡದ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದಾರೆ.

ಇನ್ನೂ ಸಂಜೆ 6:10ರ ವೇಳೆ ಶೇಷಾದ್ರಿಪುರಂ ಕಾನೂನು ಕಾಲೇಜು ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದೆ. ಮರ ಬಿದ್ದ ರಭಸಕ್ಕೆ 3 ವಿದ್ಯುತ್ ಕಂಬಗಳು ಧರಾಶಾಯಿಯಾಗಿವೆ. ಆದರೆ, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇತ್ತ ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನು ಈವರೆಗೂ ಬಿಬಿಎಂಪಿ, ಬೆಸ್ಕಾಂ ಅಧಿಕಾರಿಗಳು ತೆರವು ಮಾಡಿಲ್ಲ. ಅಲ್ಲದೇ ಎಂಜಿ ರೋಡ್ ಬಳಿಯ ಶಾಂತಲಾ ರಸ್ತೆಯ ಮುಖ್ಯರಸ್ತೆಯಲ್ಲೂ ಬೃಹತ್‌ ಗಾತ್ರದ ಮರ ಬಿದ್ದು ವಾಹನ ಸವಾರರು ಪರದಾಡುವಂತಾಗಿತ್ತು.

ಇನ್ನೂ 4 ದಿನ ಭಾರೀ ಮಳೆ -ಎಚ್ಚೆರಿಕೆ: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳವರೆಗೆ ಅಂದರೆ ಜುಲೈ 15ರ ವರೆಗೆ ಭಾರಿ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಸಾರ್ವಜನಿಕರು ಎಚ್ಚರ ಹಿಸುವಂತೆ ಸಲಹೆ ನೀಡಲಾಗಿದೆ.

ರಾಜ್ಯದಲ್ಲಿ ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Megha
the authorMegha

Leave a Reply

error: Content is protected !!
Latest news
KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ...