ಹಾಸನ: ಜಿಲ್ಲೆಯಲ್ಲಿ ಇಂದಿನಿಂದ ಆಲೂಗೆಡ್ಡೆ ಬಿತ್ತನೆ ಬೀಜ ಮಾರಾಟ ಪ್ರಾರಂಭವಾಗಿದ್ದು, ರೈತರು ಮಳೆಯಾಧಾರಿತವಾಗಿ ಬಿತ್ತನೆ ಮಾಡಿ ಉತ್ತಮ ಬೆಳೆ ಪಡೆಯುವಂತಾಗಲಿ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಶುಭ ಹಾರೈಸಿದ್ದಾರೆ.
ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಆಲೂಗೆಡ್ಡೆ ಬಿತ್ತನೆ ಬೀಜಗಳ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಜಿಲ್ಲೆಯಲ್ಲಿ ಸುಮಾರು 15,000 ಹೆಕ್ಟೇರ್ ಪ್ರದೇಶದಲ್ಲಿ ಆಲೂಗೆಡ್ಡೆ ಬೆಳೆಯಲಾಗುತ್ತದೆ, ಅದಕ್ಕೆ ಅಗತ್ಯವಾದ ಸುಮಾರು 12 ಸಾವಿರ ಟನ್‍ಗಳಷ್ಟು ಬಿತ್ತನೆ ಬೀಜ ಈಗಾಗಲೇ ದಾಸ್ತಾನಿದ್ದು, ಬೇಡಿಕೆಯ ಆಧಾರದ ಮೇಲೆ ಪುನಃ ಬಿತ್ತನೆ ಬೀಜವನ್ನು ತರಿಸಲಾಗುತ್ತದೆ ಎಂದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಕೋವಿಡ್-19 ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ಸಂಕಷ್ಟದಲ್ಲಿರುವುದರಿಂದ ಜಿಲ್ಲಾಡಳಿತ ಹಲವಾರು ಸಭೆಗಳನ್ನು ನಡೆಸಿ ಬಿತ್ತನೆ ಬೀಜದ ಗರಿಷ್ಠ ಬೆಲೆಯನ್ನು ನಿಗಧಿ ಮಾಡಲಾಗಿದ್ದು, 2,150 ರೂ ನಿಂದ 2,250 ರೂಗಳ ವರೆಗೆ ಬೆಲೆ ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಎಲ್ಲಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕೇಂದ್ರಗಳಲ್ಲಿ ರಸಗೊಬ್ಬರ ಹಾಗೂ ಔಷಧಿ ಸೌಲಭ್ಯವನ್ನು ಮಾಡಲಾಗಿದ್ದು, ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೊರೊನಾ ತುರ್ತು ಪರಿಸ್ಥಿತಿಯಲ್ಲಿಯೂ ಪ್ರತಿದಿನ ಎ.ಪಿ.ಎಂ.ಸಿ ನಡೆಯಲಿದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಎಲ್ಲಾ ಅಗತ್ಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದಾರೆ, ಅಂತೆಯೇ ಮಾರಾಟಗಾರರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
Super