NEWSನಮ್ಮಜಿಲ್ಲೆ

ಧಾರವಾಡದಲ್ಲಿ 9 ಕೋವಿಡ್ ಪಾಸಿಟಿವ್ ಪ್ರಕರಣ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ :  ಗುಜರಾತಿನ ಅಹಮದಾಬಾದ್ ನಗರದಿಂದ ಜಿಲ್ಲೆಗೆ ಆಗಮಿಸಿರುವ 9 ಜನರಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಗುಜರಾತಿನಿಂದ ಆಗಮಿಸಿದ ಈ ಎಲ್ಲಾ ವ್ಯಕ್ತಿಗಳನ್ನು ಜಿಲ್ಲೆಯ ಆಗಮನ ಕೇಂದ್ರದಲ್ಲಿ ನೋಂದಣಿ ಮಾಡಿಕೊಂಡು ಸಾಂಸ್ಥಿಕ ಕೊರೊಂಟೈನ್‍ಲ್ಲಿ ಪ್ರತ್ಯೇಕವಾಗಿ ಇರಿಸಲಾಗಿತ್ತು. ಮತ್ತು ಅವರು ಬಂದ ಕೂಡಲೇ ಮೂಗು ಮತ್ತು ಗಂಟಲು ದ್ರವ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಸೋಂಕು ದೃಢಪಟ್ಟಿರುವುದರಿಂದ ಹುಬ್ಬಳ್ಳಿಯ ಕಿಮ್ಸ್‍ನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕೋವಿಡ್ ಪಾಸಿಟಿವ್ ಹೊಂದಿರುವ ವ್ಯಕ್ತಿಗಳನ್ನು ಪಿ- 879 (55), ಪಿ-880 (31), ಪಿ-881 (25), ಪಿ-882 (70), ಪಿ-883 (26), ಪಿ-884 (18), ಪಿ-885 (19), ಪಿ-886 (20), ಪಿ-887 (27) ಎಂದು ಗುರುತಿಸಲಾಗಿದ್ದು, ಈ ಎಲ್ಲಾ ಒಂಬತ್ತು ಜನ ಪುರುಷರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ ಪಾಸಿಟಿವ್ ಹೊಂದಿರುವ 21 ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ ಈಗಾಗಲೇ 7 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.  ಒಟ್ಟು 14 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್