ಹಾಸನ: ಜಿಲ್ಲೆಗೆ ಹೊರ ರಾಜ್ಯದಿಂದ ಬಂದು ಇನ್ಸ್ಟಿಟ್ಯೂಷನಲ್ ಕ್ವಾರಂಟೈನ್ ಅಲ್ಲಿ ಇದ್ದ 5 ಜನರಿಗೆ ಕೊವೀಡ್-19 ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಈ 5 ಜನರು ಚನ್ನರಾಯಪಟ್ಟಣ ತಾಲೂಕಿಗೆ ಬಂದಿದ್ದು, ಅವರಲ್ಲಿ ಪತಿ-ಪತ್ನಿ ಇಬ್ಬರು ಮಕ್ಕಳು ಸೇರಿದ 4 ಜನ ಸೋಂಕಿತರು ಒಂದೇ ಕುಟುಂಬದವರಾಗಿದ್ದು, ಮುಂಬೈನಿಂದ ಮೇ 10 ರಂದು ಬಾಡಿಗೆ ಕಾರಿನ ಮೂಲಕ ಜಿಲ್ಲೆಗೆ ಬಂದಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಪತಿ ಪತ್ನಿ ಸೇರಿದಂತೆ ಇಬ್ಬರು ಮಕ್ಕಳು ಕೊರೊನಾ ಸೋಂಕಿತರಾಗಿದ್ದಾರೆ. ಇವರು ಜಿಲ್ಲೆಗೆ ಆಗಮಿಸಿದ ದಿನವೇ ಹೋಂ ಕ್ವಾರಂಟೈನ್ ಮಾಡಿದ್ದರಿಂದ ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಸಂಚಾರ ಮಾಡಿರುವುದಿಲ್ಲ ಎಂದು ಹೇಳಿದ್ದಾರೆ.
ಈವರೆಗೂ ಮುಂಬೈ, ಮಹಾರಾಷ್ಟ್ರದಿಂದ 415 ಜನರು ಜಿಲ್ಲೆಗೆ ಆಗಮಿಸಿದ್ದು, ಎಲ್ಲರ ಗಂಟಲು ದ್ರವವನ್ನು ಕಡ್ಡಾಯವಾಗಿ ಕೊರೊನಾ ತಪಾಸಣೆಗೆ ಒಳಪಡಿಸಿಲಾಗುವುದು ಎಂದರಲ್ಲದೆ, ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಿದ್ದ ವಸತಿ ನಿಲಯದಲ್ಲಿರುವ ಇತರ ಶಂಕಿತರನ್ನು ಪ್ರಾಥಮಿಕ ಹಂತದ ಸಂಪರ್ಕಿತರೆಂದು ಪರಿಗಣಿಸಿ ಅವರನ್ನು ಕೋವಿಡ್-19 ಜಿಲ್ಲಾಸ್ಪತ್ರೆಗೆ ವರ್ಗಾಹಿಸಲಾಗಿರುವುದು ಎಂದು ತಿಳಿಸಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ಮಾತನಾಡಿ ಸೋಂಕಿತರ ಟ್ರಾವೇಲ್ ಹಿಸ್ಟರಿ ಮತ್ತು ಅವರನ್ನು ಕರೆತಂದ ಕಾರ್ ಚಾಲಕನ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರಲ್ಲದೆ, ಪಾಸ್ ಪಡೆದು ಜಿಲ್ಲೆಗೆ ಹೊರ ರಾಜ್ಯಗಳಿಂದ ಬರುವವರನ್ನು ಚೆಕ್ಪೋಸ್ಟ್ಗಳಲ್ಲಿಯೇ ತಡಿದು ತಪಾಸಣೆ ನಡೆಸಿ ಅವರನ್ನು ನೇರವಾಗಿ ಇನ್ಟ್ಸಿಟ್ಯೂಷನಲ್ ಕ್ವಾರಂಟೈನ್ಗೆ ಕಳುಹಿಸಲಾಗುವುದು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಬಿ.ಎ. ಪರಮೇಶ್ ಸುದ್ದಿಗೋಷ್ಠಿಯಲ್ಲಿ ಇದ್ದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail