CRIMENEWSನಮ್ಮಜಿಲ್ಲೆ

KSRTC ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.

ಎರಡು ಬಸ್‌ಗಳು ಅಪಘಾತಕ್ಕೀಡಾಗಿದ್ದರಿಂದ ಬಸ್‌ಗಳಲ್ಲಿದ್ದ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಆ ಗಾಯಾಳುಗಳನ್ನು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆ ದಾಖಲಿಸಲಾಗಿದೆ.

KSRTCಯ ಒಂದು ಬಸ್ಸು ಮೂಡಿಗೆರೆಗೆ ತೆರಳುತ್ತಿತ್ತು- ಇನ್ನೊಂದು ಬಸ್‌ ಸಕಲೇಶಪುರಕ್ಕೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಬೆಳಗ್ಗೆ ಅಪಘಾತ ಸಂಭವಿಸಿದ್ದರಿಂದ ಎರಡು ಬಸ್‌ನಲ್ಲೂ ವಿದ್ಯಾರ್ಥಿಗಳು ಶಾಲೆ, ಕಾಲೇಜುಗಳಿಗೆ ತೆರಳುತ್ತಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಸಂಬಂಧ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ವಿಜಯಪಥ - vijayapatha
Megha
the authorMegha

Leave a Reply

error: Content is protected !!