ಬೆಂಗಳೂರು: ರಾಜ್ಯದಲ್ಲಿ ಇಂದು 26 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು ಕಲಬುರಗಿಯಲ್ಲಿ 60 ವರ್ಷದ ವೃದ್ಧ ಕೊರೊನಾಗೆ ಬಲಿಯಾಗುವ ಮೂಲಕ ಮೃತರ ಸಂಖ್ಯೆ 32ಕ್ಕೆ ಏರಿಕೆ ಆಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಅದರಲ್ಲಿ ಅತಿ ಹೆಚ್ಚು ಬೀದರ್‌ನಲ್ಲಿ 11, ಹಾಸನದಲ್ಲಿ 4, ಉತ್ತರ ಕನ್ನಡ , ವಿಜಯಪುರ, ದಾವಣಗೆರೆ, ಕಲಬುರಗಿಯಲ್ಲಿ ತಲಾ ಎರಡು, ಬೆಂಗಳೂರು, ದಕ್ಷಿಣ ಕನ್ನಡ ಮತ್ತು ಬಳ್ಳಾರಿಯಲ್ಲಿ ತಲಾ ಒಂದು ಸೋಂಕಿತ ಪ್ರಕರಣ ಪತ್ತೆಯಾಗಿವೆ.
ರಾಜ್ಯದಲ್ಲಿ ಇಂದು 26 ಕೋವಿಡ್-19 ಪಾಸಿಟಿವ್ ಬರುವ ಮೂಲಕ ಒಟ್ಟು 951ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಅದರಲ್ಲಿ 32 ಮಂದಿ ಮೃತಪಟ್ಟಿದ್ದು, ಇನ್ನು 442 ಮಂದಿ ಚಿಕಿತ್ಸೆ ಪಡೆದು ಗುಣಮುಖರಾಗುವ ಮೂಲಕ ಮನೆಗೆ ಮರಳಿದ್ದಾರೆ. ಹಾಗಾಗಿ 477 ಜನ ಚಿಕಿತ್ಸೆಗೆ ದಾಖಲಾಗಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶದಲ್ಲಿ 74,480 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 74,480 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 2.415 ಮಂದಿ ಮೃತಪಟ್ಟಿದ್ದಾರೆ.24,453 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 43,43,432 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 2,92,915 ಜನರು ಮೃತಪಟ್ಟಿದ್ದಾರೆ. 16,04,632 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail