ಬೆಂಗಳೂರು : ಇಂಜಿನಿಯರಿಂಗ್ ಸೇರಿ ಹಲವು ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ ಜುಲೈ 30, 31ರಂದು ನಡೆಯಲಿದೆ ಎಂದು ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದ್ದಾರೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ಮಾಸ್ಕ್, ಸ್ಯಾನಿಟೈಸರ್ ಸಹಿತವಾಗಿ ಅಗತ್ಯ ಮುಂಜಾಗೃತ ಕ್ರಮದೊಂದಿಗೆ ಸಿಇಟಿ ಪರೀಕ್ಷೆ ನಡೆಯಲಿದೆ. ಸಿಇಟಿ ಎದುರಿಸಲಿರುವ ವಿದ್ಯಾರ್ಥಿಗಳಿಗೆ ಗೆಟ್ ಸೆಟ್ ಗೋ ಮೂಲಕ Online ಕೋಚಿಂಗ್ ನೀಡಲಾಗುತ್ತಿದೆ. ಅಲ್ಲದೆ, online ಹಾಗೂ ಯೂಟ್ಯೂಬ್ ಮೂಲಕ ಕಲಿಕೆ ವಿಡಿಯೋ ಡೌನ್ಲೋಡ್ ಗೂ ಅವಕಾಶ ನೀಡಿದ್ದೇವೆ. ಎಲ್ಲ ರೀತಿಯ ಭದ್ರತೆ ಹಾಗೂ ಸುರಕ್ಷತಾ ಕ್ರಮದೊಂದಿಗೆ ಸಿಇಟಿ ನಡೆಸಲಿದ್ದೇವೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.
ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಯ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು, ಆದ್ದರಿಂದ ವಿದ್ಯಾರ್ಥಿಗಳು ಓದಿನ ಕಡೆ ಹೆಚ್ಚು ಗಮನ ಕೊಡನೇಕು ಎಂದು ಸಲಹೆ ನೀಡಿದರು.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail