ಮೈಸೂರು: ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರವಾದ ಚಾಮುಂಡಿಬೆಟ್ಟದಲ್ಲಿ ಇಂದು (ಜು.17) ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆಯಲ್ಲಿ ಜಿಲ್ಲೆಯ ತಿ.ನರಸೀಪುರ ತಾಲೂಕಿನ ಬೀಡನಹಳ್ಳಿ ಗ್ರಾಮದ ಚಾಮುಂಡೇಶ್ವರಿ ದೇವಸ್ಥಾನದಲ್ಲೂ ಪೂಜಾ ಕೈಂಕರ್ಯಗಳು ನೆರವೇರಿದವು.
ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯಗಳು ಆರಂಭಗೊಂಡವು. ದೇವಿಯ ಮೂರ್ತಿಗೆ ಅಭ್ಯಂಜನ ಸ್ನಾನ ಮಾಡಿಸಿ, ಬಳಿಕ ಅಲಂಕಾರ ಮಾಡಿ ಪೂಜೆ ನೆರವೇರಿಸಲಾಯಿತು.
ಮಹಾನ್ಯಾಸ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ಏಕದಶ ಪುಷ್ಪಾರ್ಚನೆ, ಸಹಸ್ರನಾಮಾರ್ಚನೆ ಸೇರಿದಂತೆ ವಿವಿಧ ಪೂಜೆಗಳನ್ನು ಗ್ರಾಮಸ್ಥರ ನೆರವಿನೊಂದಿಗೆ ಅದ್ದೂರಿಯಾಗಿ ಮಾಡಲಾಯಿತು.

ಮನೆ ದೇವರಾದ ತಾಯಿ ಚಾಮುಂಡೇಶ್ವರಿಗೆ ಗ್ರಾಮದ ದೇಗುಲದಲ್ಲಿ ವಿಶೇಷ ಪೂಜೆ ಬಳಿಕ ಪ್ರಸಾದ ವಿನಿಯೋಗ ಮಾಡಲಾಯಿತು. ಅಕ್ಕಪಕ್ಕದ ಗ್ರಾಮಸ್ಥರು ಸೇರಿದಂತೆ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಭಕ್ತರಿಗೆ ವಿವಿಧ ರೀತಿಯ ಅನ್ನಸಂತರ್ಪಣೆ ಮಾಡಲಾಯಿತು.
Related

Megha