NEWSದೇಶ-ವಿದೇಶ

ಐಸಿಸ್‌ ಪ್ರಮುಖ ಉಗ್ರ ಅಬ್ದುಲ್ ಮತೀನ್ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನ

ರಾಷ್ಟ್ರೀಯ ತನಿಖಾ ದಳ ಘೋಷಣೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಐಸಿಸ್‌ ಪ್ರಮುಖ ಉಗ್ರ ಅಬ್ದುಲ್ ಮತೀನ್ ತಲೆಮರೆಸಿಕೊಂಡಿದ್ದು ಆತನ ಸುಳಿವು ನೀಡಿದವರಿಗೆ 3 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ.

ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಐಸಿಸ್‌ ಪ್ರೇರಿತ ಉಗ್ರರನ್ನು ಬಂಧಿಸಲಾಗಿತ್ತು. ಪ್ರಸ್ತುತ ತಲೆಮರೆಸಿ ಕೊಂಡಿರುವ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಪ್ರದೇಶದ ಫಿಶ್ ಮಾರ್ಕೆಟ್ ರಸ್ತೆ ನಿವಾಸಿಯಾಗಿರುವ ಅಬ್ಧುಲ್ ಮತೀನ್ ತಮಿಳುನಾಡಿನಲ್ಲಿ ಹಿಂದು ಮುಖಂಡನ ಹತ್ಯೆಯಲ್ಲಿ ಭಾಗಿಯಾಗಿದ್ದ. ಈ ಹತ್ಯೆಗೆ  ಬೆಂಗಳೂರಿನ ಸದ್ದುಗುಂಟೆಪಾಳ್ಯದ ಪಿ.ಜಿಯಲ್ಲಿ ಕುಳಿತು ಸಂಚು ರೂಪಿಸಲಾಗಿತ್ತು ಎಂದು ತಿಳಿದುಬಂದಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಹೀಗಾಗಿ ನಿಖರ ಮಾಹಿತಿಯ ಮೇಲೆ ಪಿಜಿ ಮೇಲೆ ದಾಳಿ ನೆಡೆಸಿದ್ದ ಎನ್ಐಎ ತನಿಖಾಧಿಕಾರಿಗಳ ತಂಡ. ಪಿಜಿ ಮುಖ್ಯಸ್ಥ ಮೆಹಬೂಬ್ ಪಾಷಾ ಸೇರಿದಂತೆ ದೇಶದ ವಿವಿಧೆಡೆ 12 ಜನ ಉಗ್ರರನ್ನ ಬಂಧಿಸಿತ್ತು. ಆದರೆ, ಮೆಹಬೂಬ್ ಜೊತೆ ನಿಕಟ ಸಂಪರ್ಕ ಹೊಂದಿದ್ದ ಅಬ್ಧುಲ್ ಮತೀನ್ ಪರಾರಿಯಾಗಿದ್ದ. ಹೀಗಾಗಿ ಈತನ ಕುರಿತು ಸುಳಿವು ನೀಡುವರಿಗೆ ರಾಷ್ಟ್ರೀಯ ತನಿಖಾ ದಳ 3 ಲಕ್ಷ ರೂಪಾಯಿ ಬಹುಮಾನ ಘೋಷಣೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ