ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿದಿದೆ. ದಕ್ಷಿಣ ಕನ್ನಡ ಜಿಲ್ಲೆ ನಿನ್ನೆ ಒಬ್ಬರು ಮೃತಪಟ್ಟಿದ್ದರು. ಆ ಸಾವಿನ ಹಿಂದೆಯೇ ಅಂದರೆ 24 ತಾಸು ಕಳೆಯುವ ಮುನ್ನಾ ಇಂದು ಜಿಲ್ಲೆಯಲ್ಲಿ 80 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ. ಜತೆಗೆ ಬೆಂಗಳೂರಿನಲ್ಲಿ ಮತ್ತೊಬ್ಬರು ಮಾರಕ ಸೋಂಕಿಗೆ ಬಲಿಯಾಗಿದ್ದು ಈ ಮೂಲಕ ರಾಜ್ಯದಲ್ಲಿ ಮೃತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.
ಇನ್ನು, ಆಂಧ್ರಪ್ರದೇಶ ಮೂಲದ 60 ವರ್ಷ ವೃದ್ಧ ಶುಗರ್ ಮತ್ತು ಲಿವರ್ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದರು. ಅವರಿಗೆ ಕೊರೊನಾ ಬಂದಿತ್ತು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೀಗ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇಂದು ಬೆಳಗ್ಗೆ ಕೊರೊನಾ ಮಹಾ ಮಾರಿಗೆ ಇಬ್ಬರು ಮೃತಪಟ್ಟಿದ್ದು ರಾಜ್ಯದಲ್ಲಿ ಕೊರೊನಾ ರುದ್ರ ನರ್ತನ ಮುಂದುವರಿದಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail
ದೇಶಾದ್ಯಂತ ಲಾಕ್ಡೌನ್ ಮುಗಿಯಲು ಕೇವಲ 4 ದಿನಗಳು ಬಾಕಿ ಇವೆ. ಆದರೆ, ರಾಜ್ಯದಲ್ಲಿ ಇನ್ನೂ ಕೊರೊನಾ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಬಂದಿಲ್ಲ. ಬದಲಿಗೆ ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 34 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಂದೇ ದಿನ ಪತ್ತೆಯಾದ ಅತ್ಯಧಿಕ ಸೋಂಕಿತ ಪ್ರಕರಣ ಎಂದರೆ ಮೊನ್ನೆ 63 ಪಾಸಿಟಿವ್ ಕಂಡು ಬಂದಿದ್ದರು. ಈ ಮೂಲಕ ಸೋಂಕಿತರ ಸಂಖ್ಯೆ 959ಕ್ಕೆ ಏರಿಕೆಯಾಗಿದ್ದು, ರಾಜ್ಯದಲ್ಲಿ ಕೊರೊನಾ ಆತಂಕ ಮತ್ತಷ್ಟು ಹೆಚ್ಚಾಗಿದೆ.
ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್ ಡೌನ್ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ https://play.google.com/store/apps/detail